ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿ ಬೆಳವಣಿಗೆ; ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಟ್ವೀಟ್

|
Google Oneindia Kannada News

ಬೆಂಗಳೂರು, ಜುಲೈ 22; ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಪ್ರತಿಪಕ್ಷಗಳ ನಾಯಕರು ಸಹ ಈ ಕುರಿತು ಹೇಳಿಕೆಗಳನ್ನು ನೀಡುತ್ತಿದ್ದಾರೆ.

Recommended Video

ಕೊರೋನ ಸಂದರ್ಭದಲ್ಲಿ ರ್ಯಾಲಿ ಮತ್ತು ಪ್ರತಿಭಟನೆ ಬೇಕಾ!! | Oneindia Kannada

ಗುರುವಾರ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಈ ಕುರಿತು ಟ್ವೀಟ್ ಮಾಡಿದ್ದಾರೆ. "ರಾಜಕೀಯ ಅಸ್ಥಿರತೆಯು ಕರ್ನಾಟಕದ ಆಡಳಿತದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ" ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

 ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಮುಗಿದ ಅಧ್ಯಾಯ ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಮುಗಿದ ಅಧ್ಯಾಯ

"ಬಿಜೆಪಿಯವರು ಒಳಜಗಳದಲ್ಲಿ ಮುಳುಗಿಹೋಗಿದ್ದು, ಜನರ ಕುರಿತು ಯೋಚಿಸಲು ಅವರ ಬಳಿ ಸಮಯವಿಲ್ಲದಂತಾಗಿದೆ" ಎಂದು ಕೆಪಿಸಿಸಿ ಅಧ್ಯಕ್ಷರು ಟ್ವೀಟ್‌ನಲ್ಲಿ ಟೀಕಿಸಿದ್ದಾರೆ.

ಸಿಎಂ ಬದಲಾವಣೆ ಮಾಡಬಾರದು; ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸಿಎಂ ಬದಲಾವಣೆ ಮಾಡಬಾರದು; ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

DK Shivakumar Tweet On Leadership Change In Karnataka

"ಬಿಜೆಪಿ ನಾಯಕರು ಅಧಿಕಾರದ ಹಿಂದೆ ಓಡುತ್ತಿದ್ದರೆ, ಕಾಂಗ್ರೆಸ್‌ ನಿರಂತರವಾಗಿ ಜನರ ಸೇವೆಯಲ್ಲಿ ತೊಡಗಿದೆ" ಎಂದು ಟ್ವೀಟ್ ಮೂಲಕ ಆಡಳಿತ ಪಕ್ಷಕ್ಕೆ ಡಿ. ಕೆ. ಶಿವಕುಮಾರ್ ಟಾಂಗ್ ನೀಡಿದ್ದಾರೆ.

ಶನಿವಾರ ಮುಖ್ಯಮಂತ್ರಿ ಯಡಿಯೂರಪ್ಪ ದೆಹಲಿ ಪ್ರವಾಸ ಕೈಗೊಂಡಿದ್ದರು. ಬಳಿಕ ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ ಹೈಕಮಾಂಡ್ ನಾಯಕರು ಈ ಕುರಿತು ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ.

ಗುರುವಾರ ನಾಯಕತ್ವ ಬದಲಾವಣೆ ಬಗ್ಗೆ ಯಡಿಯೂರಪ್ಪ ಮೊದಲ ಬಾರಿ ಮಾತನಾಡಿದರು. "ಇದೇ 26ಕ್ಕೆ ಸರ್ಕಾರ ಎರಡು ವರ್ಷವನ್ನು ಪೂರೈಸುತ್ತದೆ. ಆ ದಿನ ಪಕ್ಷದ ವರಿಷ್ಠರು ಯಾವ ಸಂದೇಶ ಕಳುಹಿಸುತ್ತಾರೋ ಅದನ್ನು ಚಾಚೂ ತಪ್ಪದೇ ಪಾಲಿಸುತ್ತೇನೆ" ಎಂದು ಸ್ಪಷ್ಟಪಡಿಸಿದರು.

ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ಗುರುವಾರ ಸಂಜೆ ವಿಧಾನಸೌಧದಲ್ಲಿ ನಡೆಯಿತು. ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಗೃಹ ಮತ್ತು ಕಾನೂನು ಸಚಿವ ಬಸವರಾಜ ಬೊಮ್ಮಾಯಿ, "ಯಡಿಯೂರಪ್ಪನವರು ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳಲಿದ್ದಾರೆ" ಎಂದು ಹೇಳಿದರು.

ನಾಯಕತ್ವ ಬದಲಾವಣೆ ವಿಚಾರದಲ್ಲಿ ಪ್ರತಿಪಕ್ಷಗಳು ಸಹ ಯಡಿಯೂರಪ್ಪ ಬೆಂಬಲಿಸುತ್ತಿವೆ. ಹಲವಾರು ನಾಯಕರು ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಬೇಕು ಎಂದು ಹೇಳಿಕೆ ನೀಡಿದ್ದಾರೆ.

English summary
KPCC president D. K. Shivakumar tweet on BJP developments in Karnataka. Change in leadership now hot topic of the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X