Dharmasthala: ಡಿ.ಕೆ ಶಿವಕುಮಾರ್ & ವೀರೇಂದ್ರ ಹೆಗ್ಗಡೆ ರಹಸ್ಯ ಮಾತುಕತೆ!
Dharmasthala: ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಕರಾವಳಿಯಲ್ಲಿ ಟೆಂಪಲ್ ರನ್ ಮಾಡುತ್ತಿದ್ದಾರೆ. ಇದರ ಭಾಗವಾಗಿ ಧರ್ಮಸ್ಥಳಕ್ಕೆ ಭೇಟಿ ನೀಡಿರುವ ಡಿ.ಕೆ ಶಿವಕುಮಾರ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡಿದ್ದಾರೆ. ಅಲ್ಲದೇ ಇದೇ ಸಂದರ್ಭದಲ್ಲಿ ಮಹತ್ವದ ಬೆಳವಣಿಗೆಯೂ ಆಗಿದೆ. ಧರ್ಮಸ್ಥಳಕ್ಕೆ ಭೇಟಿ ನೀಡಿದ ಡಿ.ಕೆ ಶಿವಕುಮಾರ್ ಅವರು ಹೇಳಿದ್ದೇನು. ವೀರೇಂದ್ರ ಹೆಗ್ಗಡೆ ಅವರೊಂದಿಗೆ ನಡೆದ ರಹಸ್ಯ ಸಭೆ ಏನು ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.
ಡಿ.ಕೆ ಶಿವಕುಮಾರ ಅವರು ಇತ್ತೀಚಿನ ದಿನಗಳಲ್ಲಿ ಹೆಚ್ಚು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಅಲ್ಲದೇ ಇದೀಗ ಕರಾವಳಿ ಭಾಗದಲ್ಲಿ ಅವರು ಟೆಂಪಲ್ ರನ್ ಮಾಡುತ್ತಿದ್ದು. ಧರ್ಮಸ್ಥಳದಲ್ಲಿ ರಹಸ್ಯ ಮಾತುಕತೆಯನ್ನು ಸಹ ನಡೆಸಿದ್ದಾರೆ ಎನ್ನಲಾಗಿದ್ದು. ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಇನ್ನು ಹೆಗ್ಗಡೆ ಅವರೊಂದಿಗೆ ನಾವಿದ್ದೇವೆ ಎಂದು ಸಹ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.

ಧರ್ಮಸ್ಥಳ ಭೇಟಿ ಮಹತ್ವ ಪಡೆದುಕೊಂಡಿದೆ: ಇನ್ನು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಧರ್ಮಸ್ಥಳ ಭೇಟಿ ನೀಡಿರುವುದು ಮಹತ್ವ ಪಡೆದುಕೊಂಡಿದೆ. ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿರುವ ಅವರು, ಧರ್ಮಸ್ಥಳದ ದೇವಸ್ಥಾನವನ್ನು ಒಂದು ಬಾರಿ ಪ್ರದಕ್ಷಿಣೆ ಹಾಕಿದ್ದಾರೆ. ಇಲ್ಲಿ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದುಕೊಂಡು ದೇವರಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಇದಾದ ಮೇಲೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಕಾಲಿಗೆ ಬಿದ್ದಿದ್ದಾರೆ.
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆಯ ಬಗ್ಗೆ ಡಿ.ಕೆ ಶಿವಕುಮಾರ್ ಹೇಳಿದ್ದೇನು ?
ಧರ್ಮಸ್ಥಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಡಿ.ಕೆ ಶಿವಕುಮಾರ್ ಅವರು ಧರ್ಮಸ್ಥಳ ಹಾಗೂ ವಿರೇಂದ್ರ ಹೆಗ್ಗಡೆ ಅವರ ಬಗ್ಗೆ ಮಾತನಾಡಿದ್ದಾರೆ. ಧರ್ಮಸ್ಥಳ ದೇವಸ್ಥಾನ ಹಿಂದೂ ಧರ್ಮಕ್ಕೆ ಸೇರಿದ್ದೋ ಇಲ್ಲ ಜೈನ ಧರ್ಮಕ್ಕೆ ಸೇರಿದ್ದೋ ಎನ್ನುವ ಚರ್ಚೆ ಇತ್ತೀಚೆಗೆ ಆಗಿತ್ತು. ಇದೀಗ ಈ ವಿಷಯದ ಬಗ್ಗೆ ಡಿ.ಕೆ ಶಿವಕುಮಾರ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೆಗ್ಗಡೆ ಅವರು ಇದಕ್ಕೆಲ್ಲಾ ಅಂಜಬೇಕಾಗಿಲ್ಲ, ಅಳುಕುವುದು ಸಹ ಬೇಡ. ನಾವು ನಿಮ್ಮೊಂದಿಗೆ ಇದ್ದೇವೆ. ನಿಮ್ಮ ಮತ್ತು ಈ ಕ್ಷೇತ್ರದ ರಕ್ಷಣೆಗೆ ನಾವೆಲ್ಲಾರೂ ಸದಾ ಸಿದ್ಧ ಹಾಗೂ ಬದ್ಧರಾಗಿದ್ದೇವೆ. ಈ ಟೀಕೆಗಳೆಲ್ಲವೂ ತಾತ್ಕಾಲಿಕವಾಗಿದ್ದು ಎಲ್ಲವೂ ಸಾಯುತ್ತವೆ. ನಾವು ಮಾಡುವ ಸೇವಾ ಕಾರ್ಯಗಳು ಶಾಶ್ವತವಾಗಿರಲಿವೆ ಎಂದು ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.

ಗೌಪ್ಯ ಮಾತುಕತೆ: ಇನ್ನು ಇದೇ ಸಂದರ್ಭದಲ್ಲಿ ಡಿ.ಕೆ ಶಿವಕುಮಾರ್ ಅವರು ಹಾಗೂ ವೀರೇಂದ್ರ ಹೆಗ್ಗಡೆ ಅವರು ಗೌಪ್ಯವಾಗಿ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಈ ವಿಷಯವು ಭಾರೀ ಚರ್ಚೆ ಹಾಗೂ ಕುತೂಹಲಕ್ಕೆ ಕಾರಣವಾಗಿದೆ. ಆದರೆ ಯಾವ ವಿಚಾರವಾಗಿ ಮಾತನಾಡಿದ್ದಾರೆ. ಕೇವಲ ಉಭಯಕುಶಲೋಪರಿ ವಿಚಾರಿಸಿದ್ದಾರೆಯೇ ಎನ್ನುವುದು ಬಹಿರಂಗವಾಗಿಲ್ಲ. ಈ ಸಂದರ್ಭದಲ್ಲಿನ ಮಾತುಕತೆ ಮಹತ್ವ ಪಡೆದುಕೊಂಡಿದೆ.
ಕರಾವಳಿಯಲ್ಲಿ 10 ಕ್ಷೇತ್ರಗಳಲ್ಲಿ ಗೆಲ್ಲಲಿದ್ದೇವೆ!
ಕರಾವಳಿಯಲ್ಲಿ ಟೆಂಪಲ್ ರನ್ ಮುಂದುವರಿಸಿರುವ ಡಿ.ಕೆ ಶಿವಕುಮಾರ್ ಅವರು ಮಾಧ್ಯಮದವರೊಂದಿಗೆ ಮಾತನಾಡಿದ್ದು, 2028ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಜನರ ಆತ್ಮಸಾಕ್ಷಿ ಮತಗಳಿಂದ ನಾವು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜೆಲ್ಲೆ ಸೇರಿದಂತೆ ಕರಾವಳಿ ಭಾಗದಲ್ಲಿ ಕಾಂಗ್ರೆಸ್ ಕನಿಷ್ಠ 10 ಕ್ಷೇತ್ರಗಳನ್ನು ಗೆಲ್ಲಲಿದೆ. ಈ ಮೂಲಕ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಅವರು ಹೇಳಿದ್ದಾರೆ.

ಇನ್ನು ಕರ್ನಾಟಕದ ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿ ಮಾಡುವ ಉದ್ದೇಶದಿಂದ ಅಗತ್ಯ ಯೋಜನೆಗಳನ್ನು ರೂಪಿಸುವ ನಿಟ್ಟಿನಲ್ಲಿ ನಾನು ಹಾಗೂ ಎಚ್.ಕೆ ಪಾಟೀಲ್ ಅವರು ಸಭೆ ಮಾಡಲಿದ್ದೇವೆ. ರಾಜ್ಯದಲ್ಲಿ ಬಸವಣ್ಣ ಹಾಗೂ ಪೈಗಂಬರ್ ಸೇರಿದಂತೆ ಹಿಂದೂಗಳು, ಕ್ರೈಸ್ತರು, ಮುಸ್ಲಿಮರು ಹಾಗೂ ಜೈನರು ಸೇರಿದಂತೆ ಎಲ್ಲರ ರಕ್ಷಣೆ ಮಾಡುತ್ತೇವೆ ಎಂದು ಹೇಳಿದ್ದಾರೆ.












Click it and Unblock the Notifications