Belagavi Politics: ಡಿಕೆ ಶಿವಕುಮಾರ್ VS ಜಾರಕಿಹೊಳಿ ಬ್ರದರ್ಸ್ ಕಿತ್ತಾಟ; ಸಿದ್ದರಾಮಯ್ಯ ಸರ್ಕಾರಕ್ಕೆ ಕಂಟಕವಾಗುತ್ತಾ?
ಬೆಂಗಳೂರು, ನವೆಂಬರ್ 08: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನ ಗೆದ್ದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ನಲ್ಲಿ ಅಸಮಾಧಾನದ ಕಿಚ್ಚು ಜೋರಾಗಿದೆ. ಈ ಹಿಂದೆ ಮೈತ್ರಿ ಸರ್ಕಾರದ ವೇಳೆ ಡಿ ಕೆ ಶಿವಕುಮಾರ್ ವಿರುದ್ಧ ರಮೇಶ್ ಜಾರಕಿಹೊಳಿ ಸಮಸ್ಯೆಯಾಗಿದ್ರೆ, ಇಂದು ಸಚಿವ ಸತೀಶ್ ಜಾರಕಿಹೊಳಿ ಮುನಿಸು ಡಿ ಕೆ ಶಿವಕುಮಾರ್ ಅಸಮಾಧಾನಕ್ಕೆ ಕಾರಣವಾಗಿದೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಐದು ತಿಂಗಳು ಪೂರ್ಣಗೊಂಡಿದ್ದು, ಬೆಳಗಾವಿ ರಾಜಕೀಯದಿಂದಾಗಿ ಕಾಂಗ್ರೆಸ್ ನಲ್ಲಿರುವ ಅಸಮಾಧಾನವು ಹೆಚ್ಚಾಗಿದೆ. ಈ ಹಿಂದೆ 2018 ರಲ್ಲಿ ಡಿಕೆ ಶಿವಕುಮಾರ್ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡಬಾರದು. ಏನಾದರೂ ಹಸ್ತಕ್ಷೇಪ ಮಾಡಿದರೆ ನಾವು ತಕ್ಕ ಉತ್ತರ ನೀಡುತ್ತೇವೆ ಎಂದು ರಮೇಶ್ ಜಾರಕಿಹೊಳಿ ನೇರ ಎಚ್ಚರಿಕೆ ನೀಡಿದ್ದರು. ನಂತರ 10 ತಿಂಗಳೊಳಗೆ ಕಾಂಗ್ರೆಸ್ ಹಾಗೂ ಜೆಡಿಎಸ್‌ನ ಮೈತ್ರಿ ಸರ್ಕಾರ ಪತನವಾಗಿತ್ತು.

ಆದರೆ, ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ 135 ಸ್ಥಾನಗಳನ್ನ ಗೆಲ್ಲುವ ಮೂಲಕ ಅಧಿಕಾರಕ್ಕೆ ಬಂಧಿತ್ತು. ಮತ್ತೆ, ಬೆಳಗಾವಿ ರಾಜಕೀಯ ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ. ಬೆಳಗಾವಿ ಜಿಲ್ಲೆಯ ವಿಚಾರದಲ್ಲಿ ಡಿಕೆ ಶಿವಕುಮಾರ್ ಅವರ ಹಸ್ತಕ್ಷೇಪ ಇರುವುದು ನಿಜ. ಆದರೆ, ಪಕ್ಷಕ್ಕಾಗಿ ನಾನು ಕಾಂಪ್ರಮೈಸ್ ಆಗಿದ್ದೇನೆ, ಹಾಗಂತ ನಾನು ವೀಕ್ ಅಲ್ಲ ಎಂದು ಪರೋಕ್ಷವಾಗಿ ಸಚಿವ ಸತೀಶ್ ಜಾರಕಿಹೊಳಿ ಎಚ್ಚರಿಕೆ ನೀಡಿದ್ದಾರೆ.
ಈ ಹಿಂದೆ 2018 ರಲ್ಲಿ ರಚನೆಯಾದ ಮೈತ್ರಿ ಸರ್ಕಾರದ ಬಳಿಕ ಕಾಂಗ್ರೆಸ್ ನಲ್ಲಿ ಭಿನ್ನಮತ ಸೃಷ್ಟಿಯಾಗಿತ್ತು ಈ ವೇಳೆ ಬೆಳಗಾವಿ ರಾಜಕೀಯದಲ್ಲಿ ಡಿ ಕೆ ಶಿವಕುಮಾರ್ ಹಸ್ತಕ್ಷೇಪದಿಂದ ಬೆಳಗಾವಿಯ ಹಿರಿಯ ನಾಯಕರು ಅಸಮಾಧಾನವನ್ನ ವ್ಯಕ್ತಪಡಿಸಿದ್ರು, ಆದರೂ ಸಹ . ಪಿಎಲ್‌ಡಿ ಬ್ಯಾಂಕ್ ಚುನಾವಣೆ ವಿಚಾರವಾಗಿ ಜಾರಕಿಹೊಳಿ ಸಹೋದರರು ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಸಮರವೇ ನಡೆದಿತ್ತು.ಈ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಕ್ಕೆ ಡಿ ಕೆ ಶಿವಕುಮಾರ್ ನಿಂದಿದ್ದು, ಜಾರಕಿಹೊಳಿ ಬ್ರದರ್ಸ್ ಗಳ ಕೋಪವನ್ನ ಕೆರಳಿಸುವಂತೆ ಮಾಡಿತ್ತು. ಅಲ್ಲದೇ ರಮೇಶ್ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ರಾಜಕೀಯ ಜಟಾಪಟಿಯ ನಡುವೆ ಸರ್ಕಾರ ಅಸ್ತಿರವಾಯ್ತು ಎಂಬ ಮಾತುಗಳು ಕೇಳಿ ಬಂದಿವೆ.
ಇನ್ನೂ ಈಗ 2024 ರ ಲೋಕಸಭಾ ಚುನಾವಣೆಗೆ ಕೆಲ ತಿಂಗಳು ಮಾತ್ರ ಬಾಕಿ ಉಳಿದಿದ್ದು, ಹೈಕಮಾಂಡ್ ಟಾರ್ಗೆಟ್ ನೀಡಿದ್ದು, ಕೈ ಪಡೆ ಹಲವು ತಂತ್ರಗಾರಿಕೆಯನ್ನ ನಡೆಸಿದೆ. ಆದರೆ, ಈ ವಿಚಾರದಲ್ಲಿ ಬೆಳಗಾವಿ ಕಾಂಗ್ರೆಸ್‌ನಲ್ಲಿ ಭಿನ್ನಮತ ಸೃಷ್ಟಿಯಾಗಿದೆ. ವರ್ಗಾವಣೆ, ನಿಗಮ ಮಂಡಳಿಗಳಿಗೆ ನೇಮಕ ಸೇರಿ ಹಲವು ವಿಚಾರಗಳಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಪರ ಡಿಕೆ ಶಿವಕುಮಾರ್ ನಿಲ್ಲುತ್ತಿರುವುದು ಸತೀಶ್ ಅವರನ್ನು ಕೆರಳಿಸಿದೆ.

ಈಗಾಗಲೇ ಸತೀಶ್ ಜಾರಕಿಹೊಳಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಸವಾಲಾಗಿದ್ದು, ಡಿ ಕೆ ಶಿವಕುಮಾರ್ ಪ್ರತಿಬಾರೀಯೂ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಕ್ಕೆ ನಿಂತಿರುವುದರಿಂದ ಸತೀಶ್ ಜಾರಕಿಹೊಳಿ ಅಸಮಾಧಾನಗೊಂಡಿದ್ದು, ಮೈಸೂರು ದಸರಾ ಪ್ರವಾಸದ ನೆಪದಲ್ಲಿ ಒಂದಿಷ್ಟು ಶಾಸಕರ ಜೊತೆ ಸತೀಶ್ ಜಾರಕಿಹೊಳಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದರು. ಆದರೆ ಈ ಪ್ರವಾಸಕ್ಕೆ ಹೈಕಮಾಂಡ್ ಮಧ್ಯಪ್ರವೇಶದಿಂದ ಪರಿಸ್ಥಿತಿ ಸ್ವಲ್ಪ ತಿಳಿಯಾಗುವಂತೆ ಮಾಡಿದೆ.
ಒಟ್ನಾಲಿ ಸಿದ್ದರಾಮಯ್ಯ ಸರ್ಕಾರದ ಪತನ ಬೆಳಗಾವಿಯಿಂದ ಆರಂಭ ಆಗಿದ್ದು, ಬೆಂಗಳೂರಿನಲ್ಲಿ ಕೊನೆಗೊಳ್ಳುತ್ತದೆ.ಈ ಹಿಂದೆ ಬೆಳಗಾವಿ ಕಾಂಗ್ರೆಸ್ ನಲ್ಲಿ ಭಿನ್ನಮತ ಸೃಷ್ಟಿಯಾಗಿ ಮೈತ್ರಿ ಸರ್ಕಾರ ಪತನವಾಗಿತ್ತು. ಇದೀಗ ಬೆಳಗಾವಿ ಕಾಂಗ್ರೆಸ್ ನಲ್ಲಿ ಉಂಟಾಗಿರುವ ಅಸಮಾಧಾನದ ಕಿಚ್ಚು ಸರ್ಕಾರದ ಭವಿಷ್ಯದ ಮೇಲೆ ಯಾವ ರೀತಿಯಲ್ಲಿ ಪರಿಣಾಮ ಬೀರುತ್ತೆ ಎಂಬುದು ಕುತೂಹಲ ಮೂಡಿಸಿದೆ.












Click it and Unblock the Notifications