"ನಮ್ಮ ಬಸವಣ್ಣನವರ ಗೌರವಕ್ಕೆ ಧಕ್ಕೆಯಾದರೆ ಸರ್ಕಾರ ಸುಮ್ಮನಿರಲ್ಲ'... ಸಿಎಂ ಡಿ.ಕೆ ಶಿವಕುಮಾರ್ ಏನಂದ್ರು ?

"ನಮ್ಮ ಬಸವಣ್ಣನವರ ಗೌರವಕ್ಕೆ ಧಕ್ಕೆಯಾದರೆ ಸರ್ಕಾರ ಸುಮ್ಮನಿರಲ್ಲ' ಎಂದು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಈ ವಿಚಾರವಾಗಿ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್ ಮಾಡಿದ್ದಾರೆ.

ಕರ್ನಾಟಕದ ಸಾಂಸ್ಕೃತಿಕ ನಾಯಕ, ಕ್ರಾಂತಿಕಾರಿ ಮಾರ್ಗದ ಹರಿಕಾರ ಜಗಜ್ಯೋತಿ ಬಸವಣ್ಣನವರು ನಮ್ಮೆಲ್ಲರ ಅಸ್ಮಿತೆ. 12ನೇ ಶತಮಾನದಲ್ಲಿಯೇ ಕರ್ನಾಟಕದ ಸಾಮಾಜಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಇತಿಹಾಸಕ್ಕೆ ಹೊಸ ದಿಕ್ಕು ನೀಡಿದ ಮಹಾನ್ ಚೇತನರು. ಜಗತ್ತಿಗೆ ಮೊಟ್ಟಮೊದಲ ಬಾರಿಗೆ 'ಅನುಭವ ಮಂಟಪ'ದ ಮೂಲಕ ಸಂಸತ್ತು ಪರಿಕಲ್ಪನೆಯನ್ನು ನೀಡಿದ ಕೀರ್ತಿ ಬಸವಣ್ಣನವರಿಗೆ ಸಲ್ಲುತ್ತದೆ. ಸಮಾನತೆ, ಕಾಯಕ, ದಾಸೋಹ, ಮಾನವೀಯತೆ, ಸಾಮಾಜಿಕ ನ್ಯಾಯ ಹಾಗೂ ಮಹಿಳೆಯರಿಗೆ ಸಮಾನ ಹಕ್ಕುಗಳನ್ನು ಪ್ರತಿಪಾದಿಸಿದ ಮಹಾನ್ ಮಾನವತಾವಾದಿ ನಮ್ಮ ಬಸವಣ್ಣನವರು.

DK Shivakumar Warns of Strict Action Over Basava Mantapa Book Controversy

ನಮ್ಮ ಸರ್ಕಾರವು ಬಸವಣ್ಣನವರ ಇದೇ ಕಾಯಕ ತತ್ವಗಳ ಅಡಿಯಲ್ಲಿ ಜನಪರವಾಗಿ ಕಾರ್ಯನಿರ್ವಹಿಸುತ್ತಿದ್ದು, ಅವರ ಆಶಯಗಳನ್ನು ಸದಾ ಗೌರವಿಸುತ್ತಾ ಪಾಲಿಸುತ್ತಾ ಬಂದಿದೆ. ಆದರೆ, ಇದೀಗ ರವಿ ಹಂಜ್‌ ಎನ್ನುವ ಲೇಖಕ ʻಬಸವ ಮಂಟಪ' ಎಂಬ ವಿವಾದಿತ ಪುಸ್ತಕವನ್ನು ಬರೆದು, ಬಸವಣ್ಣನವರ ಬಗ್ಗೆ ಅತ್ಯಂತ ಅವಹೇಳನಕಾರಿಯಾಗಿ ನಿಂದಿಸಿರುವುದು ಖಂಡನೀಯ. ಇಡೀ ಮಾನವ ಕುಲಕ್ಕೆ ದಾರಿದೀಪವಾದಂತಹ ಮಹಾನ್ ಸಮಾಜ ಸುಧಾರಕನಿಗೆ ಮಾಡಿರುವ ಈ ಅವಮಾನವನ್ನು ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.

ಬಸವಣ್ಣನವರ ವಿಚಾರಧಾರೆ ಸುತ್ತ ಹೊಸ ವಿವಾದ;
ಬಸವಣ್ಣನವರ ವಿಚಾರಧಾರೆ ಸುತ್ತ ಹೊಸ ವಿವಾದ;

ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ನಾಡಿನ ಸಾಂಸ್ಕೃತಿಕ ನಾಯಕನಿಗೆ ಅಪಮಾನ ಎಸಗಿದ ಲೇಖಕ ರವಿ ಹಂಜ್‌ ವಿರುದ್ಧ ಎಫ್ ಐಆರ್‌ ದಾಖಲಿಸಿದ್ದೇವೆ.

ಬಸವ ಮಂಟಪ ಪುಸ್ತಕ ಮುಟ್ಟುಗೋಲಿಗೆ ಸರ್ಕಾರ ಆದೇಶ: ಯಾರು ಈ ವಿವಾದಿತ ಲೇಖಕ ರವಿ ಹಂಜ್?
ಬಸವ ಮಂಟಪ ಪುಸ್ತಕ ಮುಟ್ಟುಗೋಲಿಗೆ ಸರ್ಕಾರ ಆದೇಶ: ಯಾರು ಈ ವಿವಾದಿತ ಲೇಖಕ ರವಿ ಹಂಜ್?

ನಾಡಿನ ಮಹನೀಯರ ಬಗ್ಗೆ ಹಗುರವಾಗಿ ಬರೆಯುವ ಮತ್ತು ಸಮಾಜದ ಶಾಂತಿ ಕದಡುವ ಇಂತಹ ಕಿಡಿಗೇಡಿಗಳ ವಿರುದ್ಧ ಯಾವುದೇ ಮುಲಾಜಿಲ್ಲದೆ, ಸರ್ಕಾರ ಅತ್ಯಂತ ಕಠಿಣ ಕಾನೂನು ಕ್ರಮ ಕೈಗೊಳ್ಳಲಿದೆ. ಬಸವಣ್ಣನವರ ತತ್ವಗಳಿಗೆ ಹಾಗೂ ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವ ಯಾವುದೇ ಪ್ರಯತ್ನಗಳನ್ನು ನಮ್ಮ ಸರ್ಕಾರ ನಿರ್ದಾಕ್ಷಿಣ್ಯವಾಗಿ ಮಟ್ಟಹಾಕಲಿದೆ ಎಂದೂ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.

Bengaluru Metro:
Bengaluru Metro:

ಇನ್ನು ಈ ವಿಚಾರವಾಗಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಅವರು,ಬಸವಣ್ಣ ಅವರು ಮಹಾನ್ ಮಾನವತಾವಾದಿಯಾಗಿದ್ದು, ಅವರ ತತ್ವಗಳು ಸಾರ್ವಕಾಲಿಕ ಪ್ರಸ್ತುತವಾಗಿವೆ. ಅವರು ವಿಶ್ವಮಾನವರಾಗಿದ್ದು, ಅವರ ವಿಚಾರಗಳನ್ನು ಎಲ್ಲರೂ ಗೌರವಿಸುತ್ತಾರೆ.

ಬಸವಣ್ಣನವರ ಕುರಿತು ಲೇಖಕ ರವಿ ಹಂಜ್ ಅವರು ಬರೆದಿರುವ ಪುಸ್ತಕದ ಹೆಸರು ಬಸವ ಮಂಟಪ ಎಂದಿದ್ದರೂ, ಅವರು ಪುಸ್ತಕದಲ್ಲಿ ಬಸವಣ್ಣನವರ ಬಗ್ಗೆ ಅವಹೇಳನಕಾರಿಯಾಗಿ ಬರೆದಿರುವುದು ಇಡೀ ಮನುಕುಲಕ್ಕೆ ಅವಮಾನ ಮಾಡಿದಂತೆ.

ಲೇಖಕರು ಸಂಶೋಧನೆಯ ಹೆಸರಿನಲ್ಲಿ ಪೂರ್ವಾಗ್ರಹಪೀಡಿತರಾಗಿ ಬರೆದಿದ್ದು, ಇದನ್ನು ಯಾರೂ ಒಪ್ಪಲು ಸಾಧ್ಯವಿಲ್ಲ. ಅವರು ಈ ಬಗ್ಗೆ ಬಹಿರಂಗವಾಗಿ ಕ್ಷಮೆ ಕೇಳಬೇಕು ಮತ್ತು ಪುಸ್ತಕವನ್ನು ವಾಪಸ್ ಪಡೆಯಬೇಕು. ಸರ್ಕಾರ ಲೇಖಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನು ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಸಚಿವ ಸತೀಶ್‌ ಜಾರಕಿಹೊಳಿ ಅವರು,12ನೇ ಶತಮಾನದಲ್ಲೇ 'ಅನುಭವ ಮಂಟಪ'ದ ಮೂಲಕ ಜಗತ್ತಿಗೆ ಪ್ರಜಾಪ್ರಭುತ್ವ, ಸಮಾನತೆ, ಕಾಯಕ, ದಾಸೋಹ ಹಾಗೂ ಮಾನವೀಯ ಮೌಲ್ಯಗಳ ಮಹತ್ವವನ್ನು ಸಾರಿದ ವಿಶ್ವಗುರು ಶ್ರೀ ಬಸವಣ್ಣನವರು ನಮ್ಮ ನಾಡಿನ ಹೆಮ್ಮೆ ಮಾತ್ರವಲ್ಲ, ಇಡೀ ಮಾನವಕುಲಕ್ಕೆ ದಾರಿದೀಪವಾದ ಮಹಾನ್ ದಾರ್ಶನಿಕರು.

ವಿಶ್ವಗುರು ಬಸವಣ್ಣನವರ ತತ್ವಾದರ್ಶಗಳು ಹಾಗೂ ವಚನ ಸಾಹಿತ್ಯದ ಘನತೆಗೆ ಧಕ್ಕೆ ತರುವ ಅಂಶಗಳಿವೆ ಎಂಬ ಆಕ್ಷೇಪಗಳ ಹಿನ್ನೆಲೆಯಲ್ಲಿ, ರವಿ ಹಂಜ್ ಅವರ 'ಬಸವ ಮಂಟಪ' ಕೃತಿಯ ವಿಚಾರವಾಗಿ ನಮ್ಮ ಸರ್ಕಾರ ತ್ವರಿತವಾಗಿ ಸ್ಪಂದಿಸಿರುವುದು ಸ್ವಾಗತಾರ್ಹ. ಬಸವಣ್ಣನವರು ಹಾಗೂ ಬಸವಾದಿ ಶಿವಶರಣರ ಚಿಂತನೆಗಳ ಗೌರವವನ್ನು ಕಾಪಾಡುವ ನಿಟ್ಟಿನಲ್ಲಿ ಸಚಿವ ಸಂಪುಟ ಒಕ್ಕೊರಲಿನಿಂದ ಧ್ವನಿ ಎತ್ತಿರುವುದು ಸಂತಸದ ಸಂಗತಿ.

ಬಸವ ತತ್ವಗಳ ಅನುಯಾಯಿಯಾಗಿ, ಬಸವಣ್ಣನವರು ಸಾರಿದ ಸಮಾನತೆ, ಸಾಮಾಜಿಕ ನ್ಯಾಯ, ಮಾನವೀಯತೆ ಹಾಗೂ ಕಾಯಕದ ಮೌಲ್ಯಗಳನ್ನು ನನ್ನ ಬದುಕಿನ ಆದರ್ಶಗಳಾಗಿ ಗೌರವಿಸುತ್ತೇನೆ. ಜಾತಿ, ಧರ್ಮ ಹಾಗೂ ಮೇಲು-ಕೀಳು ಎಂಬ ಭೇದಭಾವಗಳಿಲ್ಲದ ಸಮಸಮಾಜದ ನಿರ್ಮಾಣವೇ ವಿಶ್ವಗುರು ಬಸವಣ್ಣನವರಿಗೆ ಸಲ್ಲಿಸುವ ನಿಜವಾದ ಗೌರವ. ಎಂಬುದು ನನ್ನ ದೃಢವಾದ ನಂಬಿಕೆ.

ಬಸವಣ್ಣನವರ ವಿಚಾರಧಾರೆ ಇಡೀ ಮಾನವಕುಲದ ಅಮೂಲ್ಯ ಆಸ್ತಿ. ಅವರ ವಚನಗಳಲ್ಲಿನ ಸಾರ್ವಕಾಲಿಕ ಸಂದೇಶಗಳು ಪ್ರತಿಯೊಬ್ಬರ ಬದುಕಿಗೂ ದಾರಿದೀಪವಾಗಲಿ. ಬಸವ ತತ್ವಗಳ ಆಶಯದಂತೆ ಸಮಾನತೆ, ಸಹಬಾಳ್ವೆ ಹಾಗೂ ಸಾಮಾಜಿಕ ನ್ಯಾಯದ ಮೌಲ್ಯಗಳನ್ನು ಎತ್ತಿಹಿಡಿಯುವ ಮೂಲಕ ಬಸವಣ್ಣನವರ ಮಹಾನ್ ಪರಂಪರೆಯನ್ನು ಮುಂದಿನ ಪೀಳಿಗೆಗೂ ತಲುಪಿಸೋಣ.

ಜಗಜ್ಯೋತಿ ಬಸವಣ್ಣನವರ ಆದರ್ಶಗಳು ನಮ್ಮೆಲ್ಲರ ಬದುಕಿನಲ್ಲಿ ಸದಾ ಬೆಳಕಾಗಲಿ. ಬಸವ ತತ್ವಗಳ ಘನತೆ, ವಚನ ಸಾಹಿತ್ಯದ ಶ್ರೀಮಂತಿಕೆ ಹಾಗೂ ಕನ್ನಡ ನಾಡಿನ ಸಾಂಸ್ಕೃತಿಕ ಪರಂಪರೆ ಎಂದೆಂದಿಗೂ ಅಜರಾಮರವಾಗಿರಲಿ.

ಜೈ ಬಸವಣ್ಣ! ಎಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+