ನಿವೃತ್ತರಾಗಿ, ಇಲ್ಲದಿದ್ದರೆ ಶಿಸ್ತುಕ್ರಮ ಎದುರಿಸಿ: ರೆಬಲ್ ನಾಯಕರಿಗೆ ಡಿಕೆಶಿ ಖಡಕ್ ವಾರ್ನಿಂಗ್- ಪತ್ರದಲ್ಲಿ ಏನಿದೆ ತಿಳಿಯಿರ
ಬೆಂಗಳೂರು, ಏಪ್ರಿಲ್ 27: ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಯ ಹೆಚ್ಚುತ್ತಿದೆ. ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಅವರು ಪಕ್ಷದ ಬಂಡಾಯ ನಾಯಕರಿಗೆ ಪತ್ರವೊಂದನ್ನು ಬರೆಯುವ ಮೂಲಕ ಖಡನ್ ಎಚ್ಚರಿಕೆ ನೀಡಿದ್ದಾರೆ.
ಬಂಡಾಯ ನಾಯಕರು ಚುನಾವಣಾ ರಾಜಕಾರಣದಿಂದ ನಿವೃತ್ತಿ ಹೊಂದಬೇಕು. ಪಕ್ಷದ ಅಧಿಕೃತ ಅಭ್ಯರ್ಥಿಗೆ ಬೆಂಬಲ ನೀಡಬೇಕೆಂದು ಬಹಿರಂಗ ಪತ್ರ ಬರೆದಿದ್ದಾರೆ. ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸಲು ವಿಫಲವಾದರೆ ಶಿಸ್ತು ಕ್ರಮ ಜರುಗಿಸಬೇಕಾಗುತ್ತದೆ ಎಂದು ಪಕ್ಷೇತರರಾಗಿ ಸ್ಪರ್ಧಿಸಿರುವ ಪಕ್ಷದ ಮುಖಂಡರಿಗೆ ಕೆಪಿಸಿಸಿ ಅಧ್ಯಕ್ಷರು ಎಚ್ಚರಿಕೆ ನೀಡಿದ್ದಾರೆ.

ಟಿಕೆಟ್ ವಂಚಿತ ಕಾಂಗ್ರೆಸ್ ನಾಯಕರು 20ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿದ್ದಾರೆ. ಇದು ಕಾಂಗ್ರೆಸ್‌ನ ಚಿಂತೆಗೆ ಕಾರಣವಾಗಿದ್ದು, ಮತಗಳ ವಿಭಜನೆಯು ಎದುರಾಳಿಗಳಿಗೆ ಸಹಾಯ ಮಾಡುತ್ತದೆ ಎಂಬ ಆತಂಕದಲ್ಲಿದೆ.
ಬಂಡಾಯವನ್ನು ಕೊನೆಗೊಳಿಸುವ ಕೊನೆಯ ಪ್ರಯತ್ನದಲ್ಲಿ, ಶಿವಕುಮಾರ್ ಬಂಡಾಯ ಸ್ವತಂತ್ರ ಅಭ್ಯರ್ಥಿ ಸ್ಪರ್ಧಯಿಂದ ಹೊರನಡೆದು, ಆಯಾ ಕ್ಷೇತ್ರಗಳಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಕೇಳಿಕೊಂಡಿದ್ದಾರೆ.
ನಿಮಗೆಲ್ಲರಿಗೂ ತಿಳಿದಿರುವಂತೆ, ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಇದೆ. ಭ್ರಷ್ಟ ಬಿಜೆಪಿ ಸರ್ಕಾರದಿಂದ ಜನರು ಬೇಸತ್ತಿದ್ದಾರೆ ಮತ್ತು ಕಾಂಗ್ರೆಸ್ ಮೇಲೆ ನಂಬಿಕೆ ಇಟ್ಟಿದ್ದಾರೆ. ಪಕ್ಷವನ್ನು ಅಧಿಕಾರಕ್ಕೆ ತರಲು ಕಾಂಗ್ರೆಸ್ ಕಾರ್ಯಕರ್ತರು ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ಶಿವಕುಮಾರ್ ಪತ್ರದಲ್ಲಿ ತಿಳಿಸಿದ್ದಾರೆ.
ಪಕ್ಷೇತರರಾಗಿ ಸ್ಪರ್ಧಿಸಿರುವ ನಾಯಕರು ಚುನಾವಣೆಯಿಂದ ನಿವೃತ್ತಿಯಾಗದಿದ್ದರೆ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ ಎಂದು ಕೆಪಿಸಿಸಿ ಮುಖ್ಯಸ್ಥರು ತಿಳಿಸಿದ್ದಾರೆ.
'ನೀವು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ನೀವು ಚುನಾವಣೆಯಿಂದ ನಿವೃತ್ತಿ ಹೊಂದಲು ಮತ್ತು ಅಧಿಕೃತ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಲು ವಿನಂತಿಸುತ್ತಿದ್ದೇವೆ. ನೀವು ರಾಜಕೀಯದಿಂದ ನಿವೃತ್ತಿಯಾಗದಿದ್ದರೆ ನಿಮ್ಮ ವಿರುದ್ಧ ಬಲವಂತವಾಗಿ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ' ಎಂದು ಶಿವಕುಮಾರ್ ಹೇಳಿದ್ದಾರೆ.
ಪತ್ರದಲ್ಲಿ ಯಾವುದೇ ನಿರ್ದಿಷ್ಟ ಹೆಸರನ್ನು ನಮೂದಿಸಿಲ್ಲ. ಆದರೆ ಚುನಾವಣೆಗೆ ಸ್ಪರ್ಧಿಸುತ್ತಿರುವ ಪಕ್ಷದ ನಾಯಕರನ್ನು ಉದ್ದೇಶಿಸಿ ಈ ಪತ್ರವನ್ನು ಬರೆಯಲಾಗಿದೆ.
ಮುಂಬರುವ ಚುನಾವಣೆ ಕಣದಿಂದ ಹೊರನಡೆಯಲು ಬಂಡಾಯ ನಾಯಕರೊಂದಿಗೆ ಹಲವು ಸುತ್ತಿನ ಸಭೆ ನಡೆಸಿದ ಬಳಿಕ ಶಿವಕುಮಾರ್ ಪತ್ರ ಬರೆದಿದ್ದಾರೆ. ಮೇ 10 ರಂದು ನಡೆಯಲಿರುವ ಚುನಾವಣೆಯ ಫಲಿತಾಂಶವು ಮೇ 13ರಂದು ಹೊರಬರಲಿದೆ.
ಚುನಾವಣಾ ಪೂರ್ವ ಸಮೀಕ್ಷೆಗಳು ಹೊರಬಂದಿದ್ದು, ಬಹುತೇಕ ಸಮೀಕ್ಷೆಗಳಲ್ಲಿ ಅತಂತ್ರ ಸ್ಥಿತಿ ಏರ್ಪಡಲಿದೆ ಎಂದು ಅಭಿಪ್ರಾಯಪಟ್ಟಿವೆ. ಆದರೆ, ಡಿಕೆ ಶಿವಕುಮಾರ್ ಅವರ ಪ್ರಕಾರ, ಕಾಂಗ್ರೆಸ್ ಪಕ್ಷವು 141 ಸ್ಥಾನಗಳನ್ನು ಪಡೆಯಲಿದೆ ಎಂದು ಹೇಳಿದ್ದಾರೆ. ಪ್ರಸ್ತುತ ಚುನಾವಣೆಯಲ್ಲಿ ಡಿಕೆಶಿ ಅವರು ತಮ್ಮ ತವರು ಕ್ಷೇತ್ರವಾದ ಕನಕಪುರದಿಂದ ಕಣಕ್ಕಿಳಿದಿದ್ದಾರೆ.












Click it and Unblock the Notifications