ಬಿಜೆಪಿ ಪಾದಯಾತ್ರೆಯ ಒಂದೊಂದು ದಿನವೂ ಅವರ ಒಂದೊಂದು ಹಗರಣ ಬಯಲು: ಎಚ್ಚರಿಕೆ ನೀಡಿದ ಡಿ ಕೆ ಶಿವಕುಮಾರ್‌

ಬೆಂಗಳೂರು, ಜುಲೈ 26: ಬಿಜೆಪಿಯವರು ಪಾದಯಾತ್ರೆ ಮಾಡುವ ಮೂಲಕ ಅವರ ಅಕ್ರಮಗಳನ್ನು ಬಯಲು ಮಾಡಲು ನಮಗೆ ಸದಾವಕಾಶವನ್ನು ಒದಗಿಸಿಕೊಟ್ಟಿದ್ದಾರೆ. ಅವರು ಪಾದಯಾತ್ರೆ ಮಾಡುವಾಗ ಒಂದೊಂದು ದಿನವೂ ಅವರ ಅಕ್ರಮಗಳನ್ನು ನಾವು ಬಯಲು ಮಾಡುತ್ತೇವೆ. ಮುಖ್ಯಮಂತ್ರಿಗಳು ವಿಧಾನಸಭೆಯಲ್ಲಿ ಪ್ರಸ್ತಾಪಿಸಿರುವ ಹಗರಣಗಳನ್ನು ನಿತ್ಯ ಒಂದರಂತೆ ಬಯಲು ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ತಿಳಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿಗಳ ಜತೆ ಮಾಧ್ಯಮಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಶಿವಕುಮಾರ್ ಅವರು, ಬಿಜೆಪಿಯವರು ಪಾದಯಾತ್ರೆ ಹೋರಾಟ ಮಾಡುವ ಮುನ್ನ, ಅವರ ಕಾಲದಲ್ಲಿ ಆಗಿರುವ ಅಕ್ರಮಗಳ ಬಗ್ಗೆ ಮೊದಲು ಉತ್ತರ ನೀಡಲಿ. ಅವರ ಕಾಲದ ಅಕ್ರಮಗಳಲ್ಲಿ ಸಿಎಂ ಆಗಿದ್ದ ಬಸವರಾಜ ಬೊಮ್ಮಾಯಿ ಅವರು ಭಾಗಿಯಾಗಿದ್ದಾರೋ, ಮಂತ್ರಿಗಳು ಭಾಗಿಯಾಗಿದ್ದರೋ, ಅಧಿಕಾರಿಗಳು ಭಾಗಿಯಾಗಿದ್ದಾರೋ ಎಂದು ಉತ್ತರ ನೀಡಲಿ.

DK Shivakumar We Will Expose One Of Their Scams On Each And Every Day Of The BJP March

ಈಗಲೂ ಬಿಜೆಪಿಯವರು ಈ ಅಕ್ರಮಗಳ ಬಗ್ಗೆ ಚರ್ಚೆ ಮಾಡಲು ಯಾವುದೇ ಮಾಧ್ಯಮಗ ಅಥವಾ ಸಾರ್ವಜನಿಕ ವೇದಿಕೆಗಳಲ್ಲಿ ಬಹಿರಂಗ ಚರ್ಚೆಗೆ ಬರಲಿ. ಕುಮಾರಸ್ವಾಮಿ, ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ಆರ್ ಅಶೋಕ್ ಯಾರಾದರೂ ಚರ್ಚೆಗೆ ಬರಲಿ ನಾನು ಚರ್ಚೆ ಮಾಡಲು ಸಿದ್ಧನಿದ್ದೇನೆ ಎಂದು ಸವಾಲೆಸೆದರು.

ದೇಶದಲ್ಲಿ ಪಾದಯಾತ್ರೆ ಮಾಡುವುದನ್ನು ಆರಂಭಿಸಿದ್ದೇ ಕಾಂಗ್ರೆಸ್. ಮಹಾತ್ಮಾ ಗಾಂಧಿಜೀ ಅವರ ನಾಯಕತ್ವದಲ್ಲಿ ಪಾದಯಾತ್ರೆ ಆರಂಭವಾಗಿತ್ತು. ಸ್ವಾತಂತ್ರ್ಯ ಹೋರಾಟದಿಂದ ಭಾರತ ಜೋಡೋ, ಬಳ್ಳಾರಿ, ಮೇಕೆದಾಟು ಪಾದಯಾತ್ರೆ ಮಾಡಿದ್ದೇವೆ. ಪಾದಯಾತ್ರೆ ನಮ್ಮ ಸ್ವತ್ತು. ಬಿಜೆಪಿ ಹಗರಣಗಳ ಸರದಾರರು. ಅವರ ಅಕ್ರಮಗಳನ್ನು ಬಿಚ್ಚಿಡುತ್ತೇವೆ. ಯಾರು ಎಷ್ಟು ನಿವೇಶನಕ್ಕೆ ಅರ್ಜಿ ಹಾಕಿದ್ದರು. ಎಷ್ಟು ನಿವೇಶನ ಪಡೆದಿದ್ದಾರೆ ಎಂಬುದನ್ನು ಬಹಿರಂಗ ಮಾಡುತ್ತೇವೆ ಎಂದು ತಿಳಿಸಿದರು.

ವಾಲ್ಮೀಕಿ ನಿಗಮದ ಹಗರಣದ ತನಿಖೆಯಲ್ಲಿ ಎಸ್ಐಟಿ ಮಧ್ಯಂತರ ವರದಿಯನ್ನು ನೀಡಲಿದೆಯೇ ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ತಿಳಿಸಿದರು. ಬಿಜೆಪಿಯವರು ಸಂಸತ್ತಿನಲ್ಲೂ ಈ ವಿಚಾರವಾಗಿ ಪ್ರತಿಭಟನೆ ಮಾಡುವುದಾಗಿ ಹೇಳಿರುವ ಕುರಿತು ಮಾತನಾಡಿ, ಅವರು ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಷಡ್ಯಂತ್ರ ರೂಪಿಸುತ್ತಿದ್ದಾರೆ. ದೇಶದಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟ ಬಲಿಷ್ಠವಾಗುತ್ತಿದೆ. ಬಿಜೆಪಿಯವರು ಏನಾದರೂ ಮಾಡಿಕೊಳ್ಳಲಿ ಎಂದು ಹೇಳಿದರು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+