Congress Bus Yatra : ಜ.11ರಿಂದ ಕಾಂಗ್ರೆಸ್ ಬಸ್ ಯಾತ್ರೆ: ಡಿಕೆಶಿ ನೀಡಿದ ವೇಳಾಪಟ್ಟಿ ಇಲ್ಲಿದೆ
ಬೆಂಗಳೂರು, ಡಿಸೆಂಬರ್ 22: ರಾಜ್ಯ ವಿಧಾನಸಭೆ ಚುನಾವಣೆಗೆ ನಾಲ್ಕೈದು ತಿಂಗಳು ಬಾಕಿ ಉಳಿದಿದೆ. ರಾಜಕೀಯ ಪಕ್ಷಗಳು ಈಗಾಗಲೇ ಪ್ರಚಾರ ಆರಂಭಿಸಿವೆ. ಸಾರ್ವಜನಿಕ ಸಭೆ ಹಾಗೂ ಯಾತ್ರೆಗಳ ಮೂಲಕ ಜನರನ್ನು ಸೆಳೆಯಲು ಪಕ್ಷಗಳು ಯತ್ನಿಸುತ್ತಿವೆ. ಚುನಾವಣಾ ಪ್ರಚಾರದ ಭಾಗವಾಗಿ ಬಸ್ ಯಾತ್ರೆ ಆರಂಭಿಸಲಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಬಸ್ ಯಾತ್ರೆ ಆರಂಭವಾಗಲಿದೆ. ಈ ಯಾತ್ರೆಯು ಇಬ್ಬರು ನಾಯಕರ ನೇತೃತ್ವದಲ್ಲಿ ನಡೆಯಲಿದೆ. ಇದರಲ್ಲಿ ರಾಜ್ಯ ಕಾಂಗ್ರೆಸ್‌ನ ಎಲ್ಲಾ ನಾಯಕರು ಭಾಗವಹಿಸಲಿದ್ದಾರೆ ಎಂದು ಶಿವಕುಮಾರ್ ತಿಳಿಸಿದ್ದಾರೆ.
ಯಾತ್ರೆಯ ಸಂಪೂರ್ಣ ವಿವರಗಳನ್ನು ಒಳಗೊಂಡಿರುವ ಪತ್ರವನ್ನು ಡಿ.ಕೆ.ಶಿವಕುಮಾರ್ ಬರೆದಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷರು, ಕೆಪಿಸಿಸಿ ಚುನಾವಣಾ ಸಮಿತಿ ಸದಸ್ಯರು, ಜಿಲ್ಲಾಧ್ಯಕ್ಷರು, ಜಿಲ್ಲಾ ಉಸ್ತುವಾರಿ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಶಿವಕುಮಾರ್ ಈ ಪತ್ರವನ್ನು ರವಾನಿಸಿದ್ದಾರೆ.

30-12-2022ರಿಂದ 29-01-2023ರ ತನಕ ಕಾಂಗ್ರೆಸ್ ಸಭೆಗಳನ್ನು ಆಯೋಜಿಸಿದೆ. ಬಸ್ ಪ್ರವಾಸದ ಮೂಲಕ ಎಲ್ಲಾ ಜಿಲ್ಲೆಗಳ ಪ್ರವಾಸ ಮಾಡಿ, ಸಾರ್ವಜನಿಕ ಸಭೆಗಳನ್ನು ಆಯೋಜಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಗಳಲ್ಲಿ ರಾಜ್ಯದ ಎಲ್ಲಾ ಕಾಂಗ್ರೆಸ್ ಹಿರಿಯ ನಾಯಕರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮಗಳು ಯಶಸ್ವಿಯಾಗಲು ಎಲ್ಲರೂ ಸಹಕರಿಸಬೇಕೆಂದು ಕೋರುತ್ತೇನೆ ಎಂಬುದಾಗಿ ಡಿಕೆಶಿ ತಿಳಿಸಿದ್ದಾರೆ.
ವೇಳಾ ಪಟ್ಟಿ ನೀಡಿದ ಡಿಕೆಶಿ
ಮುಂದಿನ ತಿಂಗಳು ಜನವರಿ 11 ರಂದು ಕಾಂಗ್ರೆಸ್ ಪಕ್ಷದ ಬಸ್ ಪ್ರವಾಸ ಆರಂಭವಾಗಲಿದೆ. ಉತ್ತರ ಕರ್ನಾಟಕದ ಬೆಳಗಾವಿಯಿಂದ ಯಾತ್ರೆ ಶುರುವಾಗಲಿದೆ. ಜ.14, 15ರಂದು ಸಂಕ್ರಾಂತಿ ಪ್ರಯುಕ್ತ ಯಾತ್ರೆಗೆ ವಿರಾಮ ಇರಲಿದೆ.
ಜನವರಿ 11 ರಿಂದ 14 ರ ವರೆಗೆ
ಬೆಳಗಾವಿ, ಚಿಕ್ಕೋಡಿ
ಜನವರಿ 16 ರಿಂದ 19ರ ವರೆಗೆ
ಹೊಸಪೇಟೆ, ಕೊಪ್ಪಳ, ಬಾಗಲಕೋಟೆ, ಗದಗ, ಹಾವೇರಿ, ದಾವಣಗೆರೆ ಜಿಲ್ಲೆಗಳಲ್ಲಿ ಪ್ರವಾಸ ನಡೆಯಲಿದೆ. 20 ರಂದು ಒಂದು ದಿನ ವಿರಾಮ ಇರಲಿದೆ.

ಜನೆವರಿ 21 ರಿಂದ 23ರ ವರೆಗೆ
ಹಾಸನ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಯಾತ್ರೆ ನಡೆಯಲಿದೆ.
ಪಕ್ಷದ ಎಲ್ಲಾ ನಾಯಕರು ಹಾಗೂ ಕಾರ್ಯಕರ್ತರು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿ ಕಾಂಗ್ರೆಸ್‌ನ ಯಾತ್ರೆಯನ್ನು ಯಶಸ್ವಿಯಾಗಿಸಬೇಕೆಂದು ಕೇಳಿಕೊಳ್ಳುತ್ತೇನೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಡಿಕೆಶಿ ಬರೆದ ಪತ್ರವನ್ನು ಇಲ್ಲಿ ನೀಡಲಾಗಿದೆ...
Download











Click it and Unblock the Notifications