Gruha Lakshmi Scheme: ಮೂರು ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ: ಡಿ ಕೆ ಶಿವಕುಮಾರ್‌ ಹೇಳಿದ್ದೇನು?

ಬೆಳಗಾವಿ, ಡಿಸೆಂಬರ್‌ 16: ರಾಜ್ಯದಲ್ಲಿ ಕಳೆದ ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆಯ ಹಣ ಮಹಿಳೆಯರ ಬ್ಯಾಂಕ್ ಖಾತೆಗೆ ಬಂದಿಲ್ಲ ಎಂದು ರಾಜ್ಯದ ಗೃಹಲಕ್ಷ್ಮಿ ಫಲಾನುಭವಿ ಮಹಿಳೆಯರ ಅಸಮಾಧಾನಕ್ಕೆ ಕಾರಣವಾಗಿದೆ. ಗೃಹಲಕ್ಷ್ಮಿ ಯೋಜನೆಯ ಹಣದಲ್ಲಿ ಮಹಾ ಮೋಸವಾಗಿದೆ ಎಂದು ವಿಧಾನಸಭೆಯಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್ ಈ ವಿಷಯ ಪ್ರಸ್ತಾಪಿಸಿ ಚರ್ಚೆಗೆ ಅವಕಾಶ ನೀಡಬೇಕೆಂದು ಆಗ್ರಹಿಸಿದ್ದಾರೆ.

ಇನ್ನೂ ಈ ವಿಚಾರವಾಗಿ ಮಾಧ್ಯಮಗಳ ಜೊತೆಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು, ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ನಮಗೆ ಬದ್ಧತೆ ಇದೆ. ಕೇಂದ್ರ ಸರ್ಕಾರ ಜಿಎಸ್ ಟಿ ಪರಿಷ್ಕರಣೆ ಮೂಲಕ ರಾಜ್ಯದ ಆದಾಯ ಕಡಿಮೆ ಮಾಡಿದೆ. ವಾರ್ಷಿಕ 10-15 ಸಾವಿರ ಕೋಟಿ ಕೊರತೆಯಾಗಿದೆ. ನಾವು ಕೊಟ್ಟ ಮಾತಿಗೆ ಬದ್ಧವಾಗಿದ್ದೇವೆ. ಗೃಹ ಲಕ್ಷ್ಮಿ ಯೋಜನೆಯ ಹಣ ಒಂದೆರಡು ತಿಂಗಳು ಹೆಚ್ಚು ಕಮ್ಮಿಯಾಗಲಿದೆ. ಶೀಘ್ರದಲ್ಲೇ ಎಲ್ಲಾ ತಿಂಗಳ ಹಣ ಜಮಾ ಆಗಲಿದೆ ಎಂದು ಹೇಳಿದರು.

DK Shivakumar s information on the release of Grihalakshmi money

ಬಿಜೆಪಿಯವರು ಬೇರೆ ರಾಜ್ಯಗಳಲ್ಲಿ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಿ. ಕೇಂದ್ರ ಸರ್ಕಾರ ರಾಜ್ಯದ ನೀರಾವರಿ ಯೋಜನೆಗೆ ಘೋಷಿಸಿದ ಅನುದಾನ ಇಲ್ಲಿಯವರೆಗೂ ಕೊಟ್ಟಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ನೀಡಿಲ್ಲ, ಮಹದಾಯಿ ವಿಚಾರವಾಗಿ ಅನುಮತಿ ನೀಡಿಲ್ಲ, ಬಿಜೆಪಿ ಯಾಕೆ ಈ ಬಗ್ಗೆ ಮಾತನಾಡುತ್ತಿಲ್ಲ? ಕೃಷ್ಣಾ ಮೇಲ್ದಂಡೆ ಯೋಜನೆ ಅಧಿಸೂಚನೆ ಹೊರಡಿಸಿಲ್ಲ. ಇವುಗಳ ಬಗ್ಗೆ ಯಾಕೆ ಅವರು ಮಾತನಾಡುತ್ತಿಲ್ಲ? ಎಂದು ಪ್ರಶ್ನಿಸಿದರು.

ನಾವು ಅಧಿವೇಶನ ಕರೆದಿರುವುದೇ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು. ಮಹದಾಯಿ, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಬಿಜೆಪಿ ಮಾತನಾಡುತ್ತಿಲ್ಲ ಯಾಕೆ?" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದರು. ದ್ವೇಷ ಭಾಷಣ ನಿಷೇಧ ಕಾಯ್ದೆ ಕುರಿತು ಮಾತನಾಡಿ, ನಮ್ಮದು ನಾಗರಿಕ ಸಮಾಜ. ಇಲ್ಲಿ ದ್ವೇಷ ಮಾಡಬಾರದು. ದ್ವೇಷ, ಗಲಾಟೆ ಮೂಲಕ ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಹಾಳು ಮಾಡಬಾರದು ಎಂಬ ದೃಷ್ಟಿಯಿಂದ ಕಾನೂನು ತರಲಾಗುತ್ತಿದೆ. ಇದರಿಂದ ರಾಜ್ಯ ಹಾಗೂ ಸಮಾಜಕ್ಕೆ ಒಳ್ಳೆಯದಾಗಲಿದೆ ಎಂದರು.

ದೆಹಲಿ ಪ್ರತಿಭಟನೆ ಬಗ್ಗೆ ಮಾತನಾಡಿ, ಈ ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಬೇಕು. ಮತಕಳ್ಳತನದಿಂದ ಆಗುತ್ತಿರುವ ಅನ್ಯಾಯ ತಡೆಯಬೇಕು ಎಂದು ಸಾವಿರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಇದೇ ನಮ್ಮ ಯಶಸ್ವಿ ಎಂದರು. ನಾವು ಅನೇಕರಿಗೆ ಅಧಿಕಾರವನ್ನೇ ಕೊಟ್ಟಿಲ್ಲ. ಆದರೂ ಸಾವಿರಾರು ರೂಪಾಯಿ ಹಣವನ್ನು ಖರ್ಚು ಮಾಡಿಕೊಂಡು ದೆಹಲಿಗೆ ಬಂದು ಮಲ್ಲಿಕಾರ್ಜುನ ಖರ್ಗೆ ಅವರು ಹಾಗೂ ರಾಹುಲ್ ಗಾಂಧಿ ಅವರ ನಾಯಕತ್ವಕ್ಕೆ ಬೆಂಬಲ ನೀಡಿದ್ದಾರೆ. ಈ ಮೂಲಕ ಇಡೀ ದೇಶಕ್ಕೆ ಸಂದೇಶ ರವಾನಿಸಿದ್ದಾರೆ ಎಂದರು.

ಮತ್ತೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ ನಡೆಸಬೇಕು ಎಂದು ಪ್ರಿಯಾಂಕ ಗಾಂಧಿ ಅವರು ಸಂದೇಶ ನೀಡಿದ್ದಾರೆ. ಪ್ರತಿಭಟನೆ ಯಶಸ್ವಿಯಾಯಿತು. ಕರ್ನಾಟಕದ ಮೂಲೆ,‌ ಮೂಲೆಯಿಂದ ಬಂದ ಕಾರ್ಯಕರ್ತರು, ಮುಖಂಡರಿಗೆ ಪಕ್ಷದ ಪರವಾಗಿ ಧನ್ಯವಾದಗಳು ಎಂದರು. ಇನ್ನೂ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದನ್ನು, ಕುಶಲೋಪರಿ ವಿಚಾರಿಸುವುದನ್ನು ಫೋಟೋಗಳಲ್ಲಿ ನೀವುಗಳೂ ನೋಡಿದ್ದೀರಲ್ಲ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+