D.k Shivakumar: ಕಾಂಗ್ರೆಸ್‌ ಶಾಸಕರನ್ನು ಸೆಳೆಯಲು ಡಿ.ಕೆ ಶಿವಕುಮಾರ್‌ ಮಾಸ್ಟರ್‌ ಪ್ಲ್ಯಾನ್!

D.k Shivakumar: ಮುಖ್ಯಮಂತ್ರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸೇರಿದಂತೆ ಕಾಂಗ್ರೆಸ್‌ನಲ್ಲಿ ವಿವಿಧ ಬೆಳವಣಿಗೆಗಳ ನಡುವೆ ಡಿ.ಕೆ ಶಿವಕುಮಾರ್‌ ಅವರು ಹೊಸ ಸಾಹಸಕ್ಕೆ ಕೈ ಹಾಕಿದ್ದಾರೆ. ಹೌದು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡಬೇಕು ಎಂದು ಕೆಲವು ಶಾಸಕರು ಹಾಗೂ ಸಚಿವರು ಆಗ್ರಹಿಸಿದ್ದಾರೆ. ಇದೀಗ ಅವರು ಕಾಂಗ್ರೆಸ್‌ ಶಾಸಕರು ಹಾಗೂ ಸಚಿವರನ್ನು ಸೆಳೆಯಲು ಮುಂದಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರ ನಡುವೆ ಸಿ.ಎಂ ಹುದ್ದೆಗೆ ಮುಸುಕಿನ ಗುದ್ದಾಟ ನಡೆದಿದೆ. ಈಗ ಇರುವ ಕೆಪಿಸಿಸಿ ಅಧ್ಯಕ್ಷರ ಹುದ್ದೆಯನ್ನೂ ಕಳೆದುಕೊಳ್ಳುವ ಆತಂಕದಲ್ಲಿ ಡಿ.ಕೆ ಶಿವಕುಮಾರ್‌ ಇದ್ದಾರೆ.

ಕರ್ನಾಟಕದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಕಾಂಗ್ರೆಸ್‌ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಚರ್ಚೆಗಳು ಈಗ ನಿಲ್ಲುವ ಲಕ್ಷಣಗಳು ಕಾಣಿಸುತ್ತಿಲ್ಲ. ಇದರ ನಡುವೆ ಶಾಸಕರನ್ನು ಸೆಳೆಯುವುದಕ್ಕೆ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್‌ ಅವರು ಹೊಸ ಪ್ಲ್ಯಾನ್ ಮಾಡಿಕೊಳ್ಳುತ್ತಿದ್ದಾರೆ. ಡಿ.ಕೆ ಶಿವಕುಮಾರ್‌ ಅವರು ಇದೀಗ ಶಾಸಕರಿಗೆ ಔತಣಕೂಟ / ಡಿನ್ನರ್ ಪಾರ್ಟಿ ಆಯೋಜಿಸಲು ಮುಂದಾಗಿದ್ದಾರೆ. ಬೆಂಗಳೂರಿನ ಖಾಸಗಿ ಹೊಟೇಲ್ನಲ್ಲಿ ಎಲ್ಲಾ ಕಾಂಗ್ರೆಸ್ ಶಾಸಕರಿಗೆ ಡಿನ್ನರ್ ಪಾರ್ಟಿ ಆಯೋಜಿಸಲು ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

DK Shivakumars Master Plan to Attract Congress MLAs

ಡಿ.ಕೆ ಶಿವಕುಮಾರ್‌ ಅವರು ಏಕಕಾಲಕ್ಕೆ ಹಲವು ಪ್ರಮುಖ ಜವಾಬ್ದಾರಿಗಳನ್ನು ವಹಿಸಿಕೊಂಡಿದ್ದಾರೆ. ನೀರಾವರಿ ಸಚಿವ, ಉಪ ಮುಖ್ಯಮಂತ್ರಿ, ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಕೆಪಿಸಿಸಿ ಅಧ್ಯಕ್ಷರ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಮುಖ್ಯಮಂತ್ರಿ ಬದಲಾವಣೆಯ ಚರ್ಚೆಯ ಬೆನ್ನಲ್ಲೇ ಡಿ.ಕೆ ಶಿವಕುಮಾರ್‌ ಅವರಿಗೆ ಪ್ರಮುಖ ಹುದ್ದೆಗಳನ್ನು ನೀಡಲಾಗಿದೆ ಎಂದು ಹಲವರು ವಿರೋಧ ವ್ಯಕ್ತಪಡಿಸಿದ್ದರು. ಸಚಿವ ಸತೀಶ್‌ ಜಾರಕಿಹೊಳಿ ಅವರು ಸೇರಿದಂತೆ ಹಲವರು ಕೆಪಿಸಿಸಿ ಅಧ್ಯಕ್ಷರ ಹುದ್ದೆಯ ಮೇಲೆ ಕಣ್ಣಿಟ್ಟಿದ್ದಾರೆ.

ಶಾಸಕರನ್ನು ಸೆಳೆಯಲು ಮುಂದಾದ ಡಿ.ಕೆ ಶಿವಕುಮಾರ್‌: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇರುವಷ್ಟು ಶಾಸಕರ ಬೆಂಬಲ ಡಿ.ಕೆ ಶಿವಕುಮಾರ್‌ ಅವರಿಗೆ ಇಲ್ಲ ಎನ್ನುವ ಮಾತಿದೆ. ಈ ಕಾರಣದಿಂದ ಪಕ್ಷದಲ್ಲಿ ಅವರಿಗೆ ಅಲ್ಪ ಪ್ರಮಾಣದ ಹಿನ್ನಡೆಯಾಗುತ್ತಿದೆ ಎನ್ನಲಾಗಿದ್ದು. ಇದನ್ನು ಸರಿಪಡಿಸಿಕೊಳ್ಳುವುದಕ್ಕೆ ಹಾಗೂ ಪಕ್ಷದ ಶಾಸಕರನ್ನು ತಮ್ಮತ್ತ ಸೆಳೆದುಕೊಳ್ಳುವುದಕ್ಕೆ ಡಿ.ಕೆ ಶಿವಕುಮಾರ್‌ ಅವರು ಡಿನ್ನರ್ ಪಾರ್ಟಿ ಆಯೋಜಿಸುತ್ತಿದ್ದಾರೆ ಎನ್ನಲಾಗಿದೆ.

ಕೆಪಿಸಿಸಿ ಅಧ್ಯಕ್ಷರಾಗಿ 5 ವರ್ಷ: ಇನ್ನು ಡಿ.ಕೆ ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಬರೋಬ್ಬರಿ 5 ವರ್ಷ ಪೂರೈಸಿದ್ದಾರೆ. ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್‌ ಪಕ್ಷವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರುವಲ್ಲಿ ಡಿಕೆ ಶಿವಕುಮಾರ್ ಅವರು ಸಹ ಶ್ರಮಿಸಿದ್ದರು. ಗೆದ್ದ ಮೇಲೆ ಮಾಡಿರುವ ಕೆಲಸಕ್ಕೆ ಕೂಲಿ (ಸಿ.ಎಂ ಹುದ್ದೆ) ಕೊಡಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ಗೆ ಮನವಿ ಮಾಡಿದ್ದರು. ಇದೀಗ ಕೆಪಿಸಿಸಿ ಅಧ್ಯಕ್ಷರಾಗಿ 5 ವರ್ಷ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಡಿನ್ನರ್‌ ಪಾರ್ಟಿ ಆಯೋಜಿಸಿದ್ದಾರೆ ಎಂದು ಹೇಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+