ಸಚಿವ ನಾಗೇಂದ್ರ ರಾಜೀನಾಮೆ ಬಿಜೆಪಿ ಆಗ್ರಹ; ಡಿ ಕೆ ಶಿವಕುಮಾರ್‌ ಏನಂದ್ರು?

ಬೆಂಗಳೂರು, ಜೂನ್‌ 01: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವ ಬಿ ನಾಗೇಂದ್ರ ಅವರ ತಲೆದಂಡ ಅವರ ಹೆಸರು ಕೇಳಿ ಬರುತ್ತಿದ್ದು, ಸಚಿವರ ತಲೆದಂಡಕ್ಕೆ ಬಿಜೆಪಿ ಆಗ್ರಹಿಸಿದೆ. ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಬಿಜೆಪಿ ಜೂನ್ 6 ರವರೆಗೆ ಗಡುವು ನೀಡಿದ್ದು, ಈಗಿನಿಂದಲೇ ಹೋರಾಟ ಮಾಡಲಿ. ಅವರು ಯಾವ ವಿಚಾರಕ್ಕೆ ಬಾಯಿ ಬಿಡಬೇಕೋ ಅದರ ಬಗ್ಗೆ ಬಿಡುತ್ತಿಲ್ಲ ಎಂದುಡಿಕೆ ಶಿವಕುಮಾರ್ ಛೇಡಿಸಿದರು.

ಈ ಕುರಿತು ಶುಕ್ರವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌, ನೈತಿಕ ಹೊಣೆಹೊತ್ತು ಸಚಿವ ನಾಗೇಂದ್ರ ರಾಜೀನಾಮೆ ನೀಡಬೇಕು ಎಂಬ ಈಶ್ವರಪ್ಪ ಆಗ್ರಹಿಸಿದ್ದಾರೆ. ಈ ಪ್ರಕರಣದ ತನಿಖೆಯಲ್ಲಿ ವಾಸ್ತವಾಂಶ ಪರಿಶೀಲನೆ ನಡೆಯಲಿ. ನಾವು ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.

DK Shivakumar s Reaction To BJP s Demand For Nagendra s Resignation

ಪೊಲೀಸ್ ಠಾಣೆಗೆ ರಕ್ಷಣೆ ನೀಡುವ ಪರಿಸ್ಥಿತಿ ಬಂದಿದೆ ಎಂಬ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ಟೀಕೆ ಕುರಿತು ಮಾತನಾಡಿ, ಬಿಜೆಪಿ ಆಡಳಿತದಲ್ಲಿ ಪೊಲೀಸರ ಸಮವಸ್ತ್ರ ಕಳಚಿ, ಕೇಸರಿ ಬಟ್ಟೆ ಹಾಕಿಸಿದ್ದನ್ನು ಅಶೋಕ್ ಮರೆತಿದ್ದಾರಾ? ಹಬ್ಬಗಳ ಸಂದರ್ಭದಲ್ಲಿ ಪೊಲೀಸ್ ಠಾಣೆಯಲ್ಲೇ ಅಧಿಕಾರಿಗಳ ಸಮವಸ್ತ್ರದ ಬದಲು ಬಿಜೆಪಿಯ ಕೇಸರಿ ಬಟ್ಟೆ ಹಾಕಿಸಿದ್ದನ್ನು ಅಶೋಕ್ ಮರೆತಿದ್ದಾರಾ ಎಂದು ಪ್ರಶ್ನಿಸಿದರು.

ಬೆಂಗಳೂರು ಪದವೀಧರ ಕ್ಷೇತ್ರದ ಮತದಾರರ ಬಳಿ ನಮ್ಮ ಅಭ್ಯರ್ಥಿ ರಾಮೋಜಿ ಗೌಡರ ಪರ ಪ್ರಚಾರ ಮಾಡಿ, ಈ ಚುನಾವಣೆಯಲ್ಲಿ ನಮ್ಮ ನಾಯಕರಿಗೆ ಜವಾಬ್ದಾರಿ ವಹಿಸಲು ಕನಕಪುರಕ್ಕೆ ಬಂದಿದ್ದೇನೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಹಾಗೂ ದಳದವರು ಮೈತ್ರಿಯಾಗಿವೆ. ನಮ್ಮ ಅಭ್ಯರ್ಥಿ ರಾಮೋಜಿ ಗೌಡರು ಉತ್ತಮ ಕೆಲಸ ಮಾಡಿಕೊಂಡು ಬಂದಿದ್ದು, ನಮ್ಮ ಅಭ್ಯರ್ಥಿ ಗೆಲ್ಲುತ್ತಾರೆ ಎಂಬ ವಿಶ್ವಾಸವಿದೆ."

ಮೈತ್ರಿಯಿಂದ ಅ.ದೇವಗೌಡರು ಸ್ಪರ್ಧೆ ಮಾಡಿದ್ದು ಇದರಿಂದ ಏನಾದರೂ ಪರಿಣಾಮ ಬೀರುತ್ತದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಅವರು ದಳದಲ್ಲಿದ್ದರು, ನಂತರ ಬಿಜೆಪಿಗೆ ಹೋದರು. ಈಗ ಬಿಜೆಪಿಯವರು ದಳದವರು ಒಂದಾಗಿದ್ದಾರೆ. ನಾನು ಅದರ ಬಗ್ಗೆ ಹೆಚ್ಚು ಮಾತನಾಡಲ್ಲ. ನಮ್ಮ ಅಭ್ಯರ್ಥಿ ಅವರಿಗಿಂತ ಉತ್ತಮವಾಗಿ ಕೆಲಸ ಮಾಡುವ ವಿಶ್ವಾಸವಿದೆ ಎಂದರು. ಮೇಲ್ಮನೆ ಚುನಾವಣೆ ಸಂಬಂಧ ನಾನು ಸಿದ್ದರಾಮಯ್ಯನವರು ಹೈಕಮಾಂಡ್ ನಾಯಕರಿಗೆ ಪಟ್ಟಿ ಕೊಟ್ಟು ಬಂದಿದ್ದೇವೆ. ಅವರು ಅಂತಿಮ ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದರು.

ನಿಮ್ಮ ವಿರುದ್ಧ ಯಾಗ ಮಾಡುತ್ತಿರುವವರು ಯಾರು ಎಂದು ಹೇಳಬಹುದೇ, ಇದಕ್ಕಾಗಿ ವಿಶೇಷ ಪೂಜೆ ಏನಾದರೂ ಇಟ್ಟುಕೊಂಡಿದ್ದೀರಾ ಎಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಡಿ ಕೆ ಶಿವಕುಮಾರ್‌ ಅವರು ಉತ್ತರಿಸಿ, ಯಾಗ ಯಾರು ಮಾಡಿದ್ದಾರೆ ಎಂಬುದಕ್ಕೆ ಕಾಲವೇ ಉತ್ತರ ನೀಡಲಿದೆ. ನಮಗೆ ಆಶೀರ್ವಾದ ಮಾಡಲು ನೀವು ಹಾಗೂ ಜನರು ಇದ್ದಾರೆ. ನಾನು ನಂಬಿರುವ ಶಕ್ತಿ ಇದೆ. ನಿಮ್ಮ ಪ್ರಾರ್ಥನೆ ಕಾಪಾಡಲಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+