ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿ ಸರ್ಕಾರ ತಮ್ಮ ನಾಯಕರ ಲಂಚ, ಮಂಚದ ಪ್ರಕರಣ ಮುಚ್ಚಿ ಹಾಕುತ್ತಿದೆ: ಡಿಕೆ ಶಿವಕುಮಾರ್

|
Google Oneindia Kannada News

ಬೆಂಗಳೂರು,ಜುಲೈ.20: ಬಿಜೆಪಿ ಸರ್ಕಾರ ತಮ್ಮ ನಾಯಕರ ಲಂಚ ಹಾಗೂ ಮಂಚದ ಪ್ರಕರಣ ಮುಚ್ಚಿ ಹಾಕುತ್ತಿದ್ದು, ಬಿಜೆಪಿ ಕಾರ್ಯಕರ್ತನಿಗೆ ನ್ಯಾಯ ಸಿಗುತ್ತಿಲ್ಲ. ಹಾಗಾಗಿ ಜನ ಸಾಮಾನ್ಯರಿಗೂ ನ್ಯಾಯ ಸಿಗುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಆರೋಪಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ತನಿಖೆ ಸಂದರ್ಭದಲ್ಲಿ ಮುಖ್ಯಮಂತ್ರಿಗಳು, ಯಡಿಯೂರಪ್ಪನವರು, ಗೃಹ ಸಚಿವರು ಈಶ್ವರಪ್ಪ ಅವರು ನಿರ್ದೋಷಿಯಾಗಿ ಹೊರಬರಲಿದ್ದಾರೆ ಎಂದು ಪ್ರಮಾಣಪತ್ರ ನೀಡಿದ್ದರು. ತನಿಖೆ ನಡೆಯುವ ಮುನ್ನವೇ ಅವರ ತಪ್ಪಿಲ್ಲ ಎಂದು ಸರ್ಕಾರ ಹೇಳಿದರೆ, ತನಿಖಾಧಿಕಾರಿಗಳ ಮೇಲೆ ಒತ್ತಡ ಇರುತ್ತದೆ ಎಂದರ್ಥ. ಸರ್ಕಾರದ ಮರ್ಯಾದೆ ಕಾಪಾಡಿಕೊಳ್ಳಲು ಇಂದು ಬಿ ರಿಪೋರ್ಟ್ ಬೇರೆ ಸಲ್ಲಿಸಲಾಗಿದೆ. ಹಾಗಾಗಿ ಈ ಪ್ರಕರಣದ ಸತ್ಯಾಂಶ ಎಲ್ಲರಿಗೂ ಗೊತ್ತಿದೆ ಎಂದರು.

ಸಚಿವರಾದ ಗೋವಿಂದ ಕಾರಜೋಳ, ರಮೇಶ್ ಜಾರಕಿಹೊಳಿ, ಮುರುಗೇಶ್ ನಿರಾಣಿ ಅವರು ಸಂತೋಷ್ ಪಾಟೀಲ್ ಕಾಮಗಾರಿ ಪೂರ್ಣಗೊಳಿಸಿದ್ದಾನೆ ಎಂದು ಹೇಳಿಕೆ ನೀಡಿದ್ದರು. ಆತ ಪ್ರಧಾನ ಮಂತ್ರಿಗಳು, ಪಕ್ಷದ ನಾಯಕರಿಗೆ ಪತ್ರ ಬರೆದು ತನ್ನ ಸಮಸ್ಯೆ ಹೇಳಿಕೊಂಡ. ಇತೀಚೆಗೆ ಮೃತ ಸಂತೋಷ್ ಪಾಟೀಲ್ ಪತ್ನಿ ಕೂಡ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಆದರೂ ಸರ್ಕಾರ ಇವರಿಗೆ ನ್ಯಾಯ ಒದಗಿಸಲು ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ.

Dk shivkumar criticism against Eshwarappa

ನಾವು ಈ ಬಗ್ಗೆ ಹೋರಾಟ ಮಾಡಿದಾಗ ಕಣ್ಣೊರೆಸಲು ರಾಜೀನಾಮೆ ನೀಡಿದ್ದರು. ಸಂತೋಷ್ ಪಾಟೀಲ್ ಬಿಜೆಪಿ ಕಾರ್ಯಕರ್ತನಾಗಿದ್ದರು, ಈ ಪ್ರಕರಣ ಮುಚ್ಚಿಹಾಕುತ್ತಿರುವ ಬಿಜೆಪಿ ಸರ್ಕಾರಕ್ಕೆ ನಾಚಿಕೆ ಆಗಬೇಕು. ಅವರು ಯಾವುದೇ ಬಿ ರಿಪೋರ್ಟ್ ಕೊಟ್ಟರೂ ಇದು 40% ಕಮಿಷನ್ ಸರ್ಕಾರ ಎಂದು ರಾಜ್ಯದ ಜನರಿಗೆ ಗೊತ್ತಿದೆ. ಈ ಬಗ್ಗೆ ಅವರದೇ ಪಕ್ಷದ ನಾಯಕರು ಹೇಳಿದ್ದಾರೆ. ಸರ್ಕಾರಿ ಇಲಾಖೆಗಳಲ್ಲಿ ಹುದ್ದೆಗೆ ದರ ನಿಗದಿಯಾಗಿರುವ ವರದಿ ಮಾಧ್ಯಮಗಳಲ್ಲಿ ಬಂದಿವೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣನವರು ಪ್ರಧಾನಿಗೆ ಪತ್ರ ಬರೆದಿರುವುದು ಎಲ್ಲರಿಗೂ ಗೊತ್ತಿದೆ ಎಂದರು.

ಸರ್ಕಾರದಂದ ಜನಸಾಮಾನ್ಯರಿಗೆ ನ್ಯಾಯ ಸಿಗುವುದಿಲ್ಲ. ಸ್ವಾಮೀಜಿಗಳು, ಯತ್ನಾಳ್ ಅವರು, ವಿಶ್ವನಾಥ್ ಅವರು 40% ಕಮಿಷನ್ ವಿಚಾರವಾಗಿ ಹೇಳಿಕೆ ನೀಡಿದ್ದಾರೆ. ಅವರನ್ನು ಕರೆಸಿ ವಿಚಾರಣೆ ಮಾಡಿ ಯಾವ ಮಾಹಿತಿ ಇದೆ ಎಂದು ಕೇಳಬಹುದಿತ್ತಲ್ಲವೇ? ನಮ್ಮ ನಾಯಕರಾದ ಪ್ರಿಯಾಂಕ್ ಖರ್ಗೆ ಅವರಿಗೆ ನೊಟೀಸ್ ಕೊಟ್ಟಂತೆ ಅವರಿಗೂ ನೀಡಬಹುದಿತ್ತಲ್ಲವೆ. ಅವರು ತಮ್ಮ ನಾಯಕರ ಲಂಚ ಮಂಚದ ಪ್ರಕರಣವನ್ನು ಮುಚ್ಚಿಹಾಕುತ್ತಿದ್ದಾರೆ ಎಂದು ಟೀಕಿಸಿದರು.

Dk shivkumar criticism against Eshwarappa

ಸೋನಿಯಾ ಗಾಂಧಿ ಅವರಿಗೆ ಕಿರುಕುಳ ನೀಡುತ್ತಿರುವುದರ ವಿರುದ್ಧ ಸಂದೇಶ ರವಾನೆ ಮಾಡಲು ಪ್ರತಿಭಟನೆ ಹಮ್ಮಿಕೊಂಡಿದ್ದು, ನಾವೆಲ್ಲರೂ ನಮ್ಮ ಅಧ್ಯಕ್ಷರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು. ನಮ್ಮ ಬಂಧನವಾದರೂ ಸರಿಯೇ, ಅಧಿಕಾರ ದುರುಪಯೋಗ ಮಾಡುವ ಬಿಜೆಪಿ ಸರ್ಕಾರದ ನಿಲುವು ಖಂಡಿಸಲು ಸ್ವಾತಂತ್ರ್ಯ ಉದ್ಯಾನವನದಲ್ಲಿ ಎಲ್ಲಾ ಶಾಸಕರು ಸೇರಿ ಹೋರಾಟ ಮಾಡುತ್ತೇವೆ ಎಂದು ಹೇಳಿದರು.

English summary
The BJP government is covering up the bribery and embezzlement cases of their leaders and BJP workers are not getting justice. Therefore, KPCC president DK Shivakumar has alleged that even common people will not get justice.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X