E-Swattu and E-Katha: ಇ - ಸ್ವತ್ತು, ಇ ಖಾತಾ ಬಗ್ಗೆ ಬಿಗ್ ಗುಡ್‌ನ್ಯೂಸ್ ಕೊಟ್ಟ ಡಿ.ಕೆ ಶಿವಕುಮಾರ್!
E-Swattu and E-Katha: ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಇ - ಸ್ವತ್ತು ಹಾಗೂ ಇ -ಖಾತಾಗೆ ಸಂಬಂಧಿಸಿದಂತೆ ಭರ್ಜರಿ ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಜನರ ಶಕ್ತಿಯೇ ನಮ್ಮ ಶಕ್ತಿ - ಅವರೇ ನಮ್ಮ ಆಸ್ತಿ ಎಂದು ಹೇಳಿರುವ ಅವರು ಕೆಲವೊಂದು ಪ್ರಮುಖ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಇ - ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ ನೀಡಿ ಹಾಗೂ 2023 - 2024ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾದ ರಾಜ್ಯದ ಎಲ್ಲಾ ಜಿಲ್ಲಾವಾರು ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳೊಂದಿಗೆ ಸಾಂಕೇತಿಕವಾಗಿ ಪ್ರಶಸ್ತಿ ವಿತರಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದ್ದಾರೆ.

ಕಾಂಗ್ರೆಸ್ ಪಕ್ಷ ನಿಮ್ಮ ಹಿತಕ್ಕಾಗಿ ಕೆಲಸ ಮಾಡುತ್ತಿದೆ. ಭಾರತದ ಭವಿಷ್ಯ ಅಡಗಿರುವುದು ಹಳ್ಳಿಯಲ್ಲಿ ಎಂದು ಗಾಂಧೀಜಿ ಅವರು ದೇಶಕ್ಕೆ ದೊಡ್ಡ ಸಂದೇಶವನ್ನು ಕೊಟ್ಟಿದ್ದಾರೆ. ನಿಮ್ಮ ಮನೆ ಬಾಗಿಲಿಗೆ ಇ - ಸ್ವತ್ತು ಮೂಲಕ ದಾಖಲೆಗಳನ್ನು ತಲುಪಿಸುವ ವ್ಯವಸ್ಥೆಯನ್ನು ಸರ್ಕಾರ ರೂಪಿಸಿದೆ ಎಂದು ಅವರು ಹೇಳಿದ್ದಾರೆ.
15 ದಿನಗಳೊಳಗೆ ಇ - ಖಾತಾ
ಇನ್ನು ಇ - ಖಾತಾ ಸಿಗುವುದು ವಿಳಂಬವಾಗುತ್ತಿದೆ ಎನ್ನುವ ಆರೋಪದ ನಡುವೆಯೇ ಇ - ಖಾತಾಗೆ ಸಂಬಂಧಿಸಿದ ಅರ್ಜಿಗಳಿಗೆ ಕಾಲ ಮಿತಿ ನಿಗದಿ ಮಾಡಿರುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಆಸ್ತಿಗಳ ದಾಖಲೆಗಾಗಿ 'ಇ - ಸ್ವತ್ತು' ಯೋಜನೆಯಡಿ ಅರ್ಜಿ ಸಲ್ಲಿಸಿದ 15 ದಿನಗಳೊಳಗೆ ಇ - ಖಾತಾ ವಿತರಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರು ಅಲೆದಾಡುವುದನ್ನು ತಪ್ಪಿಸಲು ಆನ್‌ಲೈನ್ ಹಾಗೂ ಬಾಪೂಜಿ ಸೇವಾ ಕೇಂದ್ರದಲ್ಲಿ ಇ - ಖಾತಾಕ್ಕಾಗಿ ಅರ್ಜಿ ಸಲ್ಲಿಸುವ ಅವಕಾಶವನ್ನು ಮಾಡಿದ್ದೇವೆ. ದೇಶದಲ್ಲಿ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಸದಾ ಜನಪರ ಕಾರ್ಯಕ್ರಮವನ್ನು ರೂಪಿಸಿದ್ದೇವೆ.
ಪಂಚಾಯತಿಯಿಂದ ಪಾರ್ಲಿಮೆಂಟ್‌ವರೆಗೆ ಹೊಸ ನಾಯಕರನ್ನ ಬೆಳೆಸಬೇಕು ಎಂಬುದು ನಮ್ಮ ನಾಯಕರಾದ ಶ್ರೀ ರಾಜೀವ್ ಗಾಂಧಿ ಅವರ ಕಲ್ಪನೆಯಾಗಿತ್ತು. ವಿಜಯಪುರ ಜಿಲ್ಲೆಯ ಗ್ರಾಮ ಪಂಚಾಯಿತಿಯೊಂದರ ಅಧ್ಯಕ್ಷರಾಗಿದ್ದ ಬಿ.ಡಿ. ಜತ್ತಿ ಅವರು ದೇಶದ ಉಪ ರಾಷ್ಟ್ರಪತಿಯಾಗಿ, ಈ ರಾಜ್ಯದ ಮುಖ್ಯಮಂತ್ರಿಯಾಗಿ ಸೇವೆಯನ್ನು ಸಲ್ಲಿಸಿದ್ದರು. ಸ್ಥಳೀಯ ಸಂಸ್ಥೆಗಳೇ ಸರ್ಕಾರದ ಆಧಾರಸ್ತಂಭ. ಗ್ರಾಮೀಣ ಮಟ್ಟದಲ್ಲಿ ನೀವು ನಾಯಕರಾಗಿ ಬೆಳೆದು ಜನರ ಹೃದಯವನ್ನು ಗೆಲ್ಲಬೇಕು. ಈ ಸರ್ಕಾರ ನಿಮ್ಮ ಪರವಾಗಿ, ನಿಮ್ಮ ಕೈ'ಬಲಪಡಿಸಲು ಸದಾ ಜೊತೆಯಾಗಿರಲಿದೆ ಎಂದು ಹೇಳಿದ್ದಾರೆ.












Click it and Unblock the Notifications