ಕೆಪಿಸಿಸಿ ಚುನಾವಣಾ ಸಮೀಕ್ಷೆಯ ಫಲಿತಾಂಶ ಬಹಿರಂಗಗೊಳಿಸಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು, ಡಿಸೆಂಬರ್ 15: ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಯು ದೇಶದಾದ್ಯಂತ ತೀವ್ರ ಕುತೂಹಲ ಕೆರಳಿಸಿದೆ. ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರದ ಆಡಳಿತ ವಿರೋಧಿ ಅಲೆ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವೈಯಕ್ತಿಕ ವರ್ಚಸ್ಸಿನ ಲಾಭ ಪಡೆಯಲು ಕಾಂಗ್ರೆಸ್‌ ಸಿದ್ಧತೆ ನಡೆಸಿದೆ. ಇತ್ತ ಬಿಜೆಪಿಯು ಪ್ರಧಾನಿ ಮೋದಿ ಜನಪ್ರಿಯತೆ ಹಾಗೂ ಸರ್ಕಾರದ ಕಲ್ಯಾಣ ಯೋಜನೆಗಳ ಬಗ್ಗೆ ಜನರಿಗೆ ತಿಳಿಸಲು ಯತ್ನ ನಡೆಸಿದೆ.

ಕಾಂಗ್ರೆಸ್ ಹಾಗೂ ಬಿಜೆಪಿಯ ನಡುವೆ ಪೈಪೋಟಿ ಇದ್ದರೂ, ಜೆಡಿಎಸ್‌ ಪಕ್ಷವನ್ನು ಕರ್ನಾಟಕ ರಾಜಕಾರಣದಿಂದ ಹೊರಗಿಡುವಂತೆ ಇಲ್ಲ. ಹೀಗಾಗಿ, ಮುಂದಿನ ಚುನಾವಣೆಯ ಬಗ್ಗೆ ದೇಶದಾದ್ಯಂತ ಹಲವು ಚರ್ಚೆಗಳು ಮುನ್ನೆಲೆಗೆ ಬಂದಿವೆ. ಇದು ಜನರ ಕುತೂಹಲಕ್ಕೆ ಕಾರಣವಾಗಿದೆ.

ಸಮೀಕ್ಷೆಯ ಫಲಿತಾಂಶ ಬಿಚ್ಚಿಟ್ಟ ಡಿಕೆಶಿ

ಕರ್ನಾಟಕ ಕಾಂಗ್ರೆಸ್‌ನ ರಾಜ್ಯ ಘಟಕದ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರು ಕೆಪಿಸಿಸಿ ನಡೆಸಿದ ಚುನಾವಣಾ ಸಮೀಕ್ಷೆಗಳ ಫಲಿತಾಂಶವನ್ನು ಬಹಿರಂಗಪಡಿಸಿದ್ದಾರೆ. ಅವರು ನೀಡಿರುವ ಚುನಾವಣಾ ಸಮೀಕ್ಷೆಗಳ ಫಲಿತಾಂಶದ ಪ್ರಕಾರ, ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಭರ್ಜರಿ ಜಯ ಭಾರಿಸಲಿದೆ. ಆ ಮೂಲಕ, ಮುಂದಿನ ನಾಲ್ಕು ತಿಂಗಳಲ್ಲಿ ಕರ್ನಾಕದ ಚುಕ್ಕಾಣಿಯನ್ನು ಕಾಂಗ್ರೆಸ್‌ ಹಿಡಿಯಲಿದೆ ಎಂದು ಶಿವಕುಮಾರ್‌ ತಿಳಿಸಿದ್ದಾರೆ.

DK Sivakumar revealed the result of KPCC election survey Karnataka Assembly

'ಮುಂದಿನ ನಾಲ್ಕು ತಿಂಗಳಲ್ಲಿ ನಡೆಯುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 136 ಸ್ಥಾನಗಳು ಸಿಗಲಿವೆ. ಇದು ಕೆಪಿಸಿಸಿ ಸಮೀಕ್ಷೆಗಳಿಂದ ಸ್ಪಷ್ಟವಾಗಿದೆ. ಬಿಜೆಪಿ ಕೇವಲ 66 ರಿಂದ 70 ಸ್ಥಾನಗಳನ್ನು ಮಾತ್ರ ಗೆಲ್ಲಬಹುದು. ಜೆಡಿಎಸ್‌ಗೆ ಎಷ್ಟು ಸ್ಥಾನ ದೊರೆಯಲಿವೆ ಎಂಬುದು ನನಗೆ ಸ್ಪಷ್ಟವಿಲ್ಲ' ಎಂದು ತಿಳಿಸಿದ್ದಾರೆ.

ನಮ್ಮ ನಡುವೆ ಜಗಳವಿಲ್ಲ ಎಂದ ಡಿಕೆಶಿ

'ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ನಡುವೆ ಸಂಘರ್ಷವಿದೆ ಎಂದು ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿವೆ. ನಾನು ಹಾಗೂ ಸಿದ್ದರಾಮಯ್ಯ ಯಾವತ್ತಾದರೂ ಜಗಳವಾಡಿದ್ದನ್ನು ನೀವು ತೋರಿಸಿಕೊಡಿ. ರಾಜ್ಯದ ಸಿಎಂ ಸ್ಥಾನಕ್ಕಾಗಿ ನಾವು ಕಿತ್ತಾಟ ನಡೆಸಿರುವ ಒಂದೇ ಒಂದು ನಿದರ್ಶನವಿಲ್ಲ. ವಿಪಕ್ಷಗಳ ನಾಯಕರೂ ಸಹ ನಮ್ಮ ಕಿತ್ತಾಟದ ಬಗ್ಗೆಯೇ ಚರ್ಚೆ ನಡೆಸುತ್ತಿದ್ದಾರೆ. ಇದೆಲ್ಲ ನೋಡಿದರೆ, ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷವೇ ಅಧಿಕಾರಕ್ಕೆ ಬರಲಿದೆ ಎಂಬುದು ಸತ್ಯವಲ್ಲವೇ' ಎಂದು ಕೇಳಿದ್ದಾರೆ.

ಬಿಜೆಪಿಗೆ 100 ದಿನ ಬಾಕಿ ಇವೆ

ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಕೇವಲ 100 ದಿನಗಳು ಮಾತ್ರ ಅಧಿಕಾರದಲ್ಲಿ ಇರಲಿದೆ. ಈ ಸರ್ಕಾರದ ಕೊನೆಯ ದಿನಗಳು ಹತ್ತಿರವಾಗುತ್ತಿವೆ. ನಾವು ಸಂವಿಧಾನವನ್ನು ಉಳಿಸಲು ಹೋರಾಡುತ್ತಿದ್ದೇವೆ. ಸಂವಿಧಾನವನ್ನು ಬಿಟ್ಟು ನಾವು ಬದುಕಲು ಸಾಧ್ಯವೇ ಇಲ್ಲ. ಇಂದು ಸಂವಿಧಾನಕ್ಕೆ ಕಳಂಕ ಬಂದಿದೆ. ನಾವು ಬದುಕಿಗಾಗಿ ಹೋರಾಟ ಮಾಡುತ್ತಿದ್ದೇವೆ. ಬಿಜೆಪಿಯವರು ಭಾವನಗಳಿಗಾಗಿ ಹೋರಾಟ ಮಾಡುತ್ತಿದ್ದಾರೆ' ಎಂದು ಡಿಕೆಶಿ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+