ಡಿ ಕೆ ಸುರೇಶ್‌ ಹೀನಾಯ ಸೋಲು; ನೈತಿಕ ಹೊಣೆ ಹೊತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರಾ ಡಿಕೆಶಿ?

ಬೆಂಗಳೂರು, ಜೂನ್‌ 04: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಡಿ ಕೆ ಬ್ರದರ್ಸ್‌ ಭದ್ರಕೋಟೆಯಾಗಿತ್ತು. ಡಿ ಕೆ ಶಿವಕುಮಾರ್‌ ಹಾಗೂ ಡಿ ಕೆ ಸುರೇಶ್‌ ಅವರಿಗೆ ಪ್ರತಿಷ್ಠೆಯಾಗಿದ್ದು, ಬಿಜೆಪಿ ನಾಯಕರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಗೆಲ್ಲಲೇಬೇಕು ಎಂಬ ಹಠಕ್ಕೆ ಬಿದ್ದು ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡರ ಅಳಿಯ ಡಾ ಸಿ.ಎನ್. ಮಂಜುನಾಥ್ ಅವರನ್ನು ಡಿ.ಕೆ. ಸುರೇಶ್ ಅವರ ವಿರುದ್ಧ ಕಣಕ್ಕೆ ಇಳಿಸಿದ್ದರು

2024 ರ ಲೋಕಸಭಾ ಚುನಾವಣೆಯಲ್ಲಿ ತೀವ್ರ ಜಿದ್ದಾಜಿದ್ದಿನ ಕಣವಾಗಿದ್ದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಅವರನ್ನು ಕಟ್ಟಿಹಾಕಲು, ನೇರವಾಗಿ ಬಿಜೆಪಿ ಕೇಂದ್ರ ನಾಯಕರೇ ಸಿದ್ಧತೆ ಮಾಡಿದ್ದು, ಅದರಂತೆ ಆರಂಭದಿಂದಲೂ ಎಚ್.ಡಿ. ದೇವೇಗೌಡರ ಅಳಿಯ ಡಾ. ಸಿ.ಎನ್. ಮಂಜುನಾಥ್ ದೊಡ್ಡ ಅಂತರದಲ್ಲಿ ಗೆಲುವುನತ್ತ ಹೆಜ್ಜೆ ಹಾಕುತ್ತಿದ್ದಾರೆ. ಜಯದೇವ ಹೃದ್ರೋಗ ಆಸ್ಪತ್ರೆಯ ಮುಖ್ಯಸ್ಥರಾಗಿದ್ದ ಡಾ. ಮಂಜುನಾಥ್ ಅವರು ನಿವೃತ್ತಿ ಪಡೆದು ರಾಜಕೀಯಕ್ಕೆ ಬಂದಿದ್ದರು.

DK Sivakumar will resign from the post of KPCC president taking moral responsibility

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಈ ಬಾರಿಯೂ ಗೆಲುವು ಸಾಧಿಸಲಿದೆ ಎಂದು ಕಾಂಗ್ರೆಸ್‌ ನಾಯಕರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಈ ಬಾರಿ ಆ ನಿರೀಕ್ಷೆ ಹುಸಿಯಾಗಿದ್ದು, ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡ ಅವರ ಅಳಿಯ ಜಯದೇವ ಹೃದ್ರೋಗ ಆಸ್ಪತ್ರೆಯ ಮುಖ್ಯಸ್ಥರಾಗಿದ್ದ ಡಾ. ಮಂಜುನಾಥ್ ಅವರು ಬರೋಬ್ಬರಿ 1,65,000 ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದು, ಅಧಿಕೃತ ಘೋಷಣೆ ಒಂದೇ ಬಾಕಿ ಇದೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದ ಡಿ ಕೆ ಸುರೇಶ್‌ ಅವರ ವಿರುದ್ಧ ಡಾ. ಮಂಜುನಾಥ್‌ ಭರ್ಜರಿ ಜಯಗಳಿಸಿದ್ದು, 7 ಲಕ್ಷಕ್ಕೂ ಹೆಚ್ಚು ಮತಗಳನ್ನ ಮಂಜುನಾಥ್‌ ಅವರು ಪಡೆದುಕೊಂಡಿದ್ದಾರೆ. ಇನ್ನೂ ಡಿ ಕೆ ಸುರೇಶ್‌ ಅವರ ಹೀನಾಯ ಸೋಲಿನ ಹೊಣೆ ಹೊತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರಾ ಎಂಬ ಪ್ರಶ್ನೆ ಉದ್ಭವಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+