ಬಿಬಿಎಂಪಿ ಚುನಾವಣೆ: ಮಹತ್ವದ ಮಾಹಿತಿ ನೀಡಿದ ಡಿ ಕೆ ಶಿವಕುಮಾರ್‌

ಬೆಂಗಳೂರು, ಮೇ 21: ಲೋಕಸಭಾ ಚುನಾವಣೆಯ ಬಳಿಕ ಬಿಬಿಎಂಪಿ ಚುನಾವಣೆ ನಡೆಯುತ್ತದೆ ಎಂಬ ಚರ್ಚೆಗಳು ನಡೆಯುತ್ತಿದ್ದು, ನಮಗೂ ಚುನಾವಣೆ ನಡೆಸಬೇಕು ಎನ್ನುವ ಅಭಿಲಾಷೆ ಇದೆ. ಈ ವಿಚಾರ ನ್ಯಾಯಾಲಯದಲ್ಲಿ ಇರುವ ಕಾರಣ ತಡವಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, "ಮೂಲಸೌಕರ್ಯ ವ್ಯವಸ್ಥೆಗಳನ್ನು ಸರಿಯಾಗಿ ನೀಡದ ಖಾಸಗಿ ಲೇಔಟ್ ಗಳ ಡೆವಲಪರ್ ಗಳಿಗೆ ನೋಟೀಸ್ ಜಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಖಾಸಗಿ ಲೇಔಟ್ ಗಳಲ್ಲಿ ನೀರು ಹರಿಯಲು ಸೂಕ್ತ ವ್ಯವಸ್ಥೆ ರೂಪಿಸದ ಕಾರಣ ಮನೆಗಳಿಗೆ ನೀರು ನುಗ್ಗಿದೆ. ಮಳೆ ನೀರು ಹಾಗೂ ಕೊಳಚೆ ನೀರನ್ನು ಒಟ್ಟಿಗೆ ಬಿಟ್ಟಿರುವ ಕಾರಣಕ್ಕೆ ಸಮಸ್ಯೆಗಳು ಉಂಟಾಗುತ್ತಿವೆ.

DK Sivakumar s Reaction On BBMP Elections

ಲೇಔಟ್ ಗಳನ್ನು ರೂಪಿಸುವಾಗ ಸೂಕ್ತ ವ್ಯವಸ್ಥೆ ಮಾಡದಿರುವುದು ಡೆವಲಪರ್ ಗಳ ತಪ್ಪು. ಜನರಿಂದ ಹಣ ಪಡೆದು ಮಳೆ ನೀರು ಹರಿಯಲು ಸೂಕ್ತ ವ್ಯವಸ್ಥೆ ಮಾಡದೇ ಇರುವ ಕಾರಣಕ್ಕೆ ಜನ ತೊಂದರೆ ಅನುಭವಿಸುತ್ತಿದ್ದಾರೆ. ಡೆವಲಪರ್ ಗಳು ತಮ್ಮ ಕರ್ತವ್ಯವನ್ನು ಸರಿಯಾಗಿ ನಿಭಾಯಿಸಿಲ್ಲ. ಅವರಿಂದ ಆಗಿರುವ ತೊಂದರೆ ನಿವಾರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು.

ಬ್ರಾಂಡ್ ಬೆಂಗಳೂರು ಯೋಜನೆ ಮೂಲಕ ಈ ತೊಂದರೆಗಳಿಗೆ ಮುಕ್ತಿ ಸಿಗಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿ, ಪರಿಹಾರ ನೀಡಬೇಕು ಎಂಬ ಉದ್ದೇಶದಿಂದಲೇ ತೊಂದರೆಯಾದ ಜಾಗಗಳಿಗೆ ಭೇಟಿ ನೀಡಿದ್ದೇನೆ. ಕೇವಲ ಕಿವಿಯಲ್ಲಿ ಕೇಳಬಾರದು, ಕಣ್ಣಲ್ಲಿ ನೋಡಬೇಕು ಎಂದು ಅಧಿಕಾರಿಗಳ ಜೊತೆ ಬಂದಿದ್ದೇನೆ ಎಂದರು. ಪ್ರತಿ ವರ್ಷ ಎಲ್ಲೆಲ್ಲಿ ಮಳೆಯಿಂದ ತೊಂದರೆ ಆಗುತ್ತದೆಯೋ ಆ ಪ್ರದೇಶಗಳನ್ನು ಗುರುತಿಸಿ ಹಂತ, ಹಂತವಾಗಿ ಅಭಿವೃದ್ಧಿ ಮಾಡಲಾಗುವುದು" ಎಂದರು.

ರಾಜಕಾಲುವೆ ಒತ್ತುವರಿ ಕುರಿತು ಮಾತನಾಡಿ, ಎಲ್ಲೆಲ್ಲಿ ಖಾಸಗಿ ಲೇಔಟ್ ನವರು ಒತ್ತುವರಿ ಮಾಡಿದ್ದಾರೋ ಅಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು. ಎಸ್ ಟಿಪಿ ಅಳವಡಿಕೆ ಮಾಡದವರಿಗೂ ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು" ಎಂದು ತಿಳಿಸಿದರು.

ಸ್ಕೈ ಡೆಕ್ ನಿರ್ಮಾಣದ ಬಗ್ಗೆ ಮಾತನಾಡಿ, "ಬೆಂಗಳೂರಿಗೆ ಒಂದು ಒಳ್ಳೆಯ ಪ್ರವಾಸಿ ಕೇಂದ್ರ ಬೇಕು ಎನ್ನುವ ಆಲೋಚನೆ ನಮ್ಮಲಿದೆ. ಅಧಿಕಾರಿಗಳು ಯೋಜನಾ ವರದಿ ನೀಡಿದ್ದಾರೆ. ಟೆಂಡರ್ ಕರೆಯಲು ಸಿದ್ಧತೆ ಮಾಡಿಕೊಂಡಿದ್ದು, ಪಾರ್ಕಿಂಗ್, ಜಾಗದ ಲಭ್ಯತೆ ಮತ್ತಿತರ ಅಂಶಗಳನ್ನು ಗಮನದಲ್ಲಿ ಇಟ್ಟುಕೊಂಡು ಕೆಲಸ ಮಾಡಲಾಗುವುದು" ಎಂದು ತಿಳಿಸಿದರು.

DK Sivakumar s Reaction On BBMP Elections

ಕಳೆದ ಎರಡು ವರ್ಷಗಳ ಹಿಂದೆ ಈ ಭಾಗದಲ್ಲಿ ಕಾಲುವೆ ಇರಲಿಲ್ಲ. ಪಾಲಿಕೆ ವತಿಯಿಂದ ಕಾಲುವೆ ನಿರ್ಮಿಸಿ ಅದನ್ನು ಮುಂದೆ ತೆಗೆದುಕೊಂಡು ಹೋಗದೆ ಇಲ್ಲಿಗೆ ನಿಲ್ಲಿಸಿದ್ದಾರೆ. ಇದರಿಂದಾಗಿ ಸಣ್ಣ ಮಳೆಗೆ ಮನೆಗಳ ಒಳಗೆ ನೀರು ನುಗ್ಗಿದೆ. ಈ ಕಾಲುವೆ ಮುಂದೆ ವಿಸ್ತರಣೆ. ಮಳೆ ನೀರು ಕಾಲುವೆ ಹಾಗು ಚರಂಡಿಯನ್ನು ಪ್ರತ್ಯೇಕವಾಗಿ ಮಾಡಬೇಕು. ಇಲ್ಲಿರುವ ಕೆರೆಗೆ ಕೊಳಚೆ ನೀರು ಬಿಡಬಾರದು" ಎಂದು ಸ್ಥಳೀಯ ನಿವಾಸಿಗಳು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಉಪಮುಖ್ಯಮಂತ್ರಿಗಳು, "ಮುಂದೆ ಅರಣ್ಯ ಇಲಾಖೆ ಜಾಗ ಇರುವ ಕಾರಣ, ಅವರು ಕಾಲುವೆಯನ್ನು ಮುಂದೆ ವಿಸ್ತರಿಸಲು ಅನುಮತಿ ನೀಡಿರಲಿಲ್ಲ. ಇಂದು ಬೆಳಗ್ಗೆ ಪಾಲಿಕೆ ಅಧಿಕಾರಿಗಳು ಅರಣ್ಯ ಅಧಿಕಾರಿಗಳ ಜತೆ ಸಭೆ ಮಾಡಿದ್ದು, ಕಾಲುವೆ ಮುಂದಕ್ಕೆ ತೆಗೆದುಕೊಂಡು ಹೋಗಲು ಅನುಮತಿ ಪಡೆಯಲಾಗಿದೆ. ಮಳೆ ನೀರು ಹಾಗೂ ಚರಂಡಿ ನೀರು ಹರಿಯಲು ಪ್ರತ್ಯೇಕವಾಗಿ ವ್ಯವಸ್ಥೆ ಮಾಡಲಾಗುವುದು. ಆದಷ್ಟು ಬೇಗ ಈ ಕಾಮಗಾರಿ ಪೂರ್ಣಗೊಳಿಸಲಾಗುವುದು.

ಇನ್ನು ಬೆಂಗಳೂರಿನ ಯಾವುದೇ ಕೆರೆಗಳಿಗೆ ಕೊಳಚೆ ನೀರು ಹರಿಸುವುದಿಲ್ಲ. ಸಂಸ್ಕರಿಸಿದ ನೀರನ್ನು ಮಾತ್ರ ಬಿಡಲಾಗುವುದು. ಈ ಬಾರಿ ಏಳು ಸಾವಿರ ಕೊಳವೆ ಬಾವಿ ಬತ್ತಿದ ಪರಿಣಾಮ ನೀರಿನ ಸಮಸ್ಯೆ ಎದುರಾಗಿದ್ದು, ಮುಂದೆ ಇಂತಹ ಸಮಸ್ಯೆ ಬಾರದಂತೆ ಎಚ್ಚರ ವಹಿಸಲಾಗುವುದು" ಎಂದು ತಿಳಿಸಿದರು.

ನಂತರ ಉಪಮುಖ್ಯಮಂತ್ರಿಗಳು ರಾಚೇನಹಳ್ಳಿ ಕೆರೆ ಪಕ್ಕದಲ್ಲಿರುವ ಜವಾಹರ್ ಲಾಲ್ ನೆಹರು ಆಧುನಿಕ ವಿಜ್ಞಾನ ಸಂಶೋಧನಾ ಕೇಂದ್ರ (JNCSAR)ದಲ್ಲಿ ಹಾದುಹೋಗಿರುವ ರಾಜಕಾಲುವೆ ಪರಿಶೀಲನೆ ನಡೆಸಿದರು. ಈ ರಾಜಕಾಲುವೆ ತಡೆಗೋಡೆ ಎತ್ತರ ನಿರ್ಮಾಣ ಕಾಮಗಾರಿ ಪರಿಶೀಲನೆ ನಡೆಸಿದರು. ಈ ವೇಳೆ "ಮುಂದಿನ ಒಂದು ತಿಂಗಳ ಒಳಗಾಗಿ ಈ ಕಾಮಗಾರಿ ಪೂರ್ಣಗೊಳಿಸಲಾಗುವುದು. ಅಷ್ಟರ ಒಳಗಾಗಿ ಮತ್ತೆ ಮಳೆ ಬಂದರೆ ಪ್ರವಾಹ ಪರಿಸ್ಥಿತಿ ತಡೆಯಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ" ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+