ಚನ್ನಪಟ್ಟಣ ಉಪಚುನಾವಣೆಯಲ್ಲಿ ಡಿ.ಕೆ. ಸುರೇಶ್ ಸ್ಪರ್ಧೆ: ಡಿ ಕೆ ಶಿವಕುಮಾರ್‌ ಹೇಳಿದ್ದೇನು?

ಬೆಂಗಳೂರು, ಜೂನ್‌ 09: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ ಕೆ ಸುರೇಶ್‌ ಅವರು ಹೀನಾಯವಾಗಿ ಸೋಲು ಕಂಡ ಬಳಿಕ ಸೋಲಿನ ಕುರಿತು ಹಲವು ಚರ್ಚೆಗಳು ನಡೆಯುತ್ತಿದ್ದು, ಚನ್ನಪಟ್ಟಣ ಉಪಚುನಾವಣೆಯಲ್ಲಿ ಡಿ.ಕೆ. ಸುರೇಶ್ ಸ್ಪರ್ಧೆ ನಡೆಸುತ್ತಾರೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ.

ಈ ಕುರಿತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಾತನಾಡಿ, ನಾವು ಚನ್ನಪಟ್ಟಣ ಉಪಚುನಾವಣೆ ಬಗ್ಗೆ ಆಲೋಚನೆ ಮಾಡಿಲ್ಲ. ನಾವು ಇನ್ನು ಸೋಲಿನ ದುಃಖದಿಂದ ಹೊರಬಂದಿಲ್ಲ. ಸಧ್ಯಕ್ಕೆ ಆ ಕ್ಷೇತ್ರದ ಜನ ನಮಗೆ ಕೊಟ್ಟಿರುವ ಮುನ್ನಡೆಗೆ ಧನ್ಯವಾದ ಅರ್ಪಿಸುತ್ತೇನೆ. ಸುರೇಶ್ ಅವರಿಗೆ ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸುವ ಆತುರವಿಲ್ಲ. ಅಲ್ಲಿ ಅನೇಕ ಕಾರ್ಯಕರ್ತರಿದ್ದು, ಮುಂದೆ ನೋಡೋಣ ಎಂದರು.

DK Suresh is in no hurry to contest elections again says Shivakumar

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ನಿಮ್ಮ ತಂತ್ರಗಾರಿಕೆ ವಿಫಲವಾಗಿದ್ದೇಕೆ ಎಂಬ ವಿಚಾರವಾಗಿ ಮಾತನಾಡಿ, ನಾನು ಅತಿಯಾದ ಆತ್ಮವಿಶ್ವಾಸದಲ್ಲಿದ್ದೆ. ನಾನು ರಾಜ್ಯ ಸುತ್ತಬೇಕಾದ ಕಾರಣ ಹೆಚ್ಚು ಸಮಯ ಮೀಸಲಿಡಲು ಆಗಿಲ್ಲ. ಇದು ನನ್ನ ವೈಯಕ್ತಿಕ ಸೋಲು ಎಂದು ನಾನು ಒಪ್ಪಿಕೊಳ್ಳುತ್ತೇನೆ.

ಅವರು ಕೂಡ ವಿವಾದರಹಿತ ಅಭ್ಯರ್ಥಿ ಕಣಕ್ಕಿಳಿಸುವ ಮೂಲಕ ಉತ್ತಮ ತಂತ್ರಗಾರಿಕೆ ಮಾಡಿದ್ದಾರೆ. ದಳದಲ್ಲಿ ನಿಂತರೆ ಮತ ಬರುವುದಿಲ್ಲ ಎಂದು ಬಿಜೆಪಿಯಿಂದ ಟಿಕೆಟ್ ನೀಡಲಾಯಿತು. ನಮ್ಮ ಅಭ್ಯರ್ಥಿ ವಿರುದ್ಧ ಆಡಳಿತ ವಿರೋಧಿ ಅಲೆ ಇರಲಿಲ್ಲ.

ಸೋಲು ಸೋಲೇ ಅದನ್ನು ಒಪ್ಪಿಕೊಳ್ಳುತ್ತೇವೆ. ಕನಕಪುರದಲ್ಲಿ 50-60 ಸಾವಿರ ಮುನ್ನಡೆ ಪಡೆಯುವ ನಿರೀಕ್ಷೆಯಿತ್ತು. ಮಾಗಡಿ, ಕುಣಿಗಲ್, ರಾಮನಗರದಲ್ಲಿ ನಮಗೆ ಮತ ಬಂದಿವೆ. ನಮಗೆ ಪೆಟ್ಟು ಬಿದ್ದಿದ್ದು ನಗರ ಪ್ರದೇಶದಲ್ಲಿ ಎಂದರು.

ಎನ್ ಡಿಎ ಮೈತ್ರಿ ಪಕ್ಷಗಳು ಬೇಡಿಕೆ ಹೆಚ್ಚುತ್ತಿದ್ದು, ಮೋದಿ ಅವರು ಪ್ರಧಾನಮಂತ್ರಿಗಳಾಗಿ ಎಷ್ಟು ವರ್ಷ ಇರುತ್ತಾರೆ ಎಂಬ ವಿಚಾರವಾಗಿ ಮಾತನಾಡಿ, ಒಂದು ಸಂಸದ ಸ್ಥಾನ ಗೆದ್ದವರೇ ನಮ್ಮ ಕ್ಷೇತ್ರಕ್ಕೆ ಇಂತಹ ಸೌಲಭ್ಯಬೇಕು ಎಂದು ಕೇಳುತ್ತಾರೆ. ಸರ್ಕಾರ ರಚಿಸಲು ಬೆಂಬಲಿಸುವವರು ಕೇಳುವುದರಲ್ಲಿ ತಪ್ಪಿಲ್ಲ. ಎಲ್ಲರೂ ಸಿಂಹಪಾಲು ಬೇಕು ಎಂದು ಕೇಳುತ್ತಾರೆ. ರಾಜಕೀಯದಲ್ಲಿ ಅವರು ತಮ್ಮ ಸಂಖ್ಯೆ ಅನುಸಾರ ಬೇಡಿಕೆ ಇಡುತ್ತಾರೆ ಎಂದರು.

ಪರಿಷತ್ ಚುನಾವಣೆಯಲ್ಲಿ ಹಣ ಹಂಚಿ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, ಪರಿಷತ್ತಿನ ಆರು ಸ್ಥಾನಗಳ ಪೈಕಿ ನಾವು ಕೇವಲ 1 ಸ್ಥಾನ ಹೊಂದಿದ್ದೆವು. ಈಗ ನಾವು ಮೂರು ಕ್ಷೇತ್ರ ಗೆದ್ದಿದ್ದೇವೆ.

ಅವರು ಗೆದ್ದಿರುವ ಮೂರು ಕ್ಷೇತ್ರದಲ್ಲಿ ಹಣ ಹಂಚಿಕೆ ಮಾಡಿ ಗೆದ್ದಿದ್ದಾರಾ? ಯಡಿಯೂರಪ್ಪನವರು 28 ಲೋಕಸಭಾ ಕ್ಷೇತ್ರವನ್ನು ಗೆದ್ದು ಬಿಜೆಪಿ ನಾಯಕರ ಜೇಬಿಗೆ ಹಾಕುವುದಾಗಿ ಹೇಳಿದ್ದರಲ್ಲವೇ ಅದೇ ರೀತಿ ನಾವು ಪರಿಷತ್ತಿನ ಆರೂ ಸ್ಥಾನ ಗೆಲ್ಲುತ್ತೇವೆ ಎಂದಿದ್ದೆವು. ಅದರಲ್ಲಿ ಮೂರು ಸ್ಥಾನ ಗೆದ್ದಿದ್ದೇವೆ" ಎಂದು ತಿರುಗೇಟು ನೀಡಿದರು.

ರಾಹುಲ್ ಗಾಂಧಿ ಸಿಎಂ ರಾಜೀನಾಮೆ ಪಡೆಯಲು ಬಂದಿದ್ದಾರಾ ಎಂಬ ಬಿಜೆಪಿ ಶಾಸಕ ಅಶ್ವತ್ಥ್ ನಾರಾಯಣ ಅವರ ಹೇಳಿಕೆ ಕುರಿತು ಮಾತನಾಡಿ, ಮೊದಲು ಅವರ ಪಕ್ಷದ ಬಗ್ಗೆ ಮಾತನಾಡಲಿ. ನಿಗಮ ಮಂಡಳಿಗಳಲ್ಲಿ ಹಣ ದುರುಪಯೋಗ ಪ್ರಕರಣ ಈ ಹಿಂದೆಯೂ ಆಗಿದೆ. ಈಗ ಆತ್ಮಹತ್ಯೆಯಿಂದಾಗಿ ಪ್ರಕರಣ ಈಚೆ ಬಂದಿದೆ.

ಬಿಜೆಪಿ ಅವಧಿಯಲ್ಲಿನ ಪ್ರಕರಣಗಳು ಇವೆ. ಸಚಿವರು ಈಗಾಗಲೇ ಸರ್ಕಾರ ಹಾಗೂ ಪಕ್ಷಕ್ಕೆ ಮುಜುಗರವಾಗಬಾರದು ಎಂದು ಸ್ವಇಚ್ಛೆಯಿಂದ ರಾಜೀನಾಮೆ ನೀಡಿದ್ದಾರೆ. ನಾನು ಹಾಗೂ ಮುಖ್ಯಮಂತ್ರಿಗಳು ಈ ಬಗ್ಗೆ ಸಚಿವರ ಜತೆ ಚರ್ಚೆ ಮಾಡಿದ್ದು, ಅವರು ಈ ಪ್ರಕರಣದಲ್ಲಿ ಭಾಗಿಯಾಗಿಲ್ಲ. ಯಾವುದೇ ತನಿಖೆ ಬೇಕಾದರೂ ನಡೆಯಲಿ ಎಂದು ತಿಳಿಸಿದ್ದಾರೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+