ಸಿನಿಮಾದಲ್ಲಿ ರೀಲ್ ಬಿಟ್ಟಂತೆ ರಾಜಕೀಯದಲ್ಲೂ ರೀಲ್ ಬಿಟ್ಟರೆ ಜನ ಒಪ್ಪಲ್ಲ: ಡಿ ಕೆ ಸುರೇಶ್ ಹೀಗೆ ಹೇಳಿದ್ದು ಯಾರಿಗೆ?

ರಾಮನಗರ, ಮಾರ್ಚ್28: ನನ್ನನ್ನು ಸೋಲಿಸಬೇಕು ಎಂದು ನಿರ್ದೇಶಕ, ನಿರ್ಮಾಪಕ, ಚಿತ್ರಕತೆ ಬರೆಯುವವರು, ನಟ, ಬಂಡವಾಳ ಹೂಡಿಕೆ ಮಾಡುವವರು ಎಲ್ಲಾ ಒಂದಾಗಿದ್ದಾರಂತೆ. ಸಿನಿಮಾ ರೀಲ್ ಬಿಟ್ಟಂತೆ ಇಲ್ಲಿ ಬಿಟ್ಟರೇ ಜನ ಒಪ್ಪುವುದಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಅವರು ತಮ್ಮ ರಾಜಕೀಯ ಎದುರಾಳಿ ಕುಮಾರಸ್ವಾಮಿ, ಮುನಿರತ್ನ ಹಾಗೂ ಯೋಗೇಶ್ವರ್‌ ವಿರುದ್ಧ ವಾಗ್ದಾಳಿ ನಡೆಸಿದರು.

ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮೊದಲ ದಿನವಾದ ಗುರುವಾರ ಡಿ.ಕೆ. ಸುರೇಶ್ ಅವರು ರಾಮನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಂತರ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸುರೇಶ್ ಅವರು ತಮ್ಮ ಎದುರಾಳಿಗಳ ವಿರುದ್ಧ ವಾಗ್ದಾಳಿ ನಡೆಸಿದರು.

DK Suresh Lashed Out At Political Opponents Kumaraswamy Muniratna And Yogeshwar

ಎಲ್ಲರು ಒಂದಾಗಿದ್ದಾರಂತೆ ಅದಕ್ಕೆ ನನ್ನನ್ನು ಸೋಲಿಸುತ್ತಾರಂತೆ? ಏತಕ್ಕೆ ನನ್ನ ಸೋಲಿಸುತ್ತೀರ? ಬಡವರ ಪರವಾಗಿ, ರೈತರ ಪರವಾಗಿ, ಕನ್ನಡಿಗರ ಪರವಾಗಿ ದನಿ ಎತ್ತಿದಕ್ಕಾ? ನಿಮ್ಮ ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿದಕ್ಕೆ ನನ್ನನ್ನು ಸೋಲಿಸಲು ಹೊರಟ್ಟಿದ್ದೀರಾ? ಅವರಿಗೆ ನಿಜ ಜೀವನಕ್ಕು, ಸಿನಿಮಾಗೂ ವ್ಯತ್ಯಾಸ ಗೊತ್ತಿಲ್ಲ. ನಿಜ ಜೀವನದಲ್ಲಿ ಸೋಲಿಸಬೇಕೆ ಹೊರತು, ಸಿನಿಮಾದಲ್ಲಿ ಅಲ್ಲ. ನೀವು ಬಿಟ್ಟಿರುವ ಎಲ್ಲಾ ರೀಲುಗಳು ಡಬ್ಬ ಸೇರಿಕೊಂಡಿವೆ.

ಯಾರೋ ಹೇಳುತ್ತಿದ್ದರು ಡಿ.ಕೆ.ಶಿವಕುಮಾರ್ ಕಾಲಿಗೆ ಬೀಳಲು ಬಂದಿದ್ದರು ಎಂದು. ಇದೇ ಡಿ.ಕೆ.ಶಿವಕುಮಾರ್ ಅವರ ಕಾಲಿಗೆ ಬಿದ್ದು ಶಾಸಕರಾಗಲು, ಬಿಕ್ಷೆ ಬೇಡಿದವರು, ಆಸ್ತಿ ಉಳಿಸಿಕೊಂಡವರು ಯಾರು ಎಂದು ಈ ಕ್ಷೇತ್ರದ ಜನ ನೋಡಿದ್ದಾರೆ. ರಾಜಕೀಯ ಪ್ರವೇಶ ಮಾಡುವ ಹೊತ್ತಿನಲ್ಲಿ ಶಿವಕುಮಾರ್ ಅವರ ಮನೆ ಬಾಗಿಲನ್ನು ಬೆಳಗ್ಗೆಯಿಂದ ಸಂಜೆಯ ತನಕ ಕಾಯುತ್ತಿದ್ದರು. ಈ ವಿಚಾರ ಎಲ್ಲರಿಗೂ, ಮಾಧ್ಯಮದವರಿಗೂ ಗೊತ್ತು. ಆದರೂ ಅವರ ವಿಚಾರವನ್ನು ಬೆಳಗ್ಗೆಯಿಂದ ಸಂಜೆಯ ತನಕ ತೋರಿಸುತ್ತಾರೆ.

ಮುಂದಿನ ಮೂವತ್ತು ದಿನಗಳ ಕಾಲ ಯಾರು, ಯಾರು ಏನು ಮಾತನಾಡುತ್ತಾರೆ ಎಂಬುದನ್ನು ನಾವು, ನೀವು ಕೇಳಬೇಕಾಗಿದೆ. ಅದಕ್ಕೆ ಉತ್ತರ ಕೊಡುವ ಕಾಲ ಮುಂದಿದೆ. ಕಣ್ಣೀರು ಹಾಕುವವರಿಗೆ ಈ ಚುನಾವಣೆಗೆ ಒಂದು ಕರ್ಮಭೂಮಿ, ಇನ್ನೊಂದು ಚುನಾವಣೆಗೆ ಮತ್ತೊಂದು ಕರ್ಮಭೂಮಿ. ಯಾವ, ಯಾವ ಕರ್ಮಭೂಮಿಯಲ್ಲಿ ಏನೇನು ಸುಳ್ಳು ಹೇಳಿದ್ದಾರೋ ಗೊತ್ತಿಲ್ಲ.

ನಾವು ಮುಂದಿನ 4 ವರ್ಷಗಳ ಕಾಲ ರಾಜ್ಯದ ಜನರ ಕಷ್ಟಗಳನ್ನು ಪರಿಹರಿಸಲು ಬದ್ಧರಾಗಿದ್ದೇವೆ. ಸುಳ್ಳಿನ ಗ್ಯಾರಂಟಿಗಳನ್ನು ಹೊತ್ತುಕೊಂಡು ಬಿಜೆಪಿಯವರು ಮತ ಕೇಳಲು ಬರುತ್ತಿದ್ದಾರೆ. ಸುಳ್ಳು ಹೇಳುವವರ ಜೊತೆ ಕಣ್ಣೀರು ಹಾಕುವವರು ಸೇರಿಕೊಂಡಿದ್ದಾರೆ. ಆದರೆ ಕಾಂಗ್ರೆಸ್ ಕೊಟ್ಟ ಮಾತನ್ನು ಉಳಿಸಿಕೊಂಡಿದೆ.

ಚುನಾವಣೆಗಳು, ಸರ್ಕಾರಗಳು ಬರುತ್ತವೆ ಹೋಗುತ್ತವೆ, ಆದರೆ ಯಾರು ಸುಳ್ಳು ಹೇಳುತ್ತಾರೆ, ಯಾರು ಸತ್ಯವನ್ನು ಹೇಳುತ್ತಾರೆ, ಸತ್ಯದಿಂದ ನಡೆದುಕೊಳ್ಳುತ್ತಾರೆ ಎನ್ನುವುದು ಈ ಚುನಾವಣೆಯ ಪ್ರಸ್ತುತ ವಿಚಾರ. ಈ ಚುನಾವಣೆ ಮಾಧ್ಯಮದವರಿಗೆ ಹೊಸದಾಗಿ ಕಾಣಿಸುತ್ತಿದೆ. ಆದರೆ ನಮ್ಮ ರೈತರು, ಬಡವರು, ಹಿಂದುಳಿದವರಿಗೆ, ಮಹಿಳೆಯರಿಗೆ, ಯುವಕರಿಗೆ ಈ ಚುನಾವಣೆ ಹೊಸದಲ್ಲ ಎಂದು ಹೇಳಿದರು.

ಇಂದು ಇತಿಹಾಸ ಬದಲಾಗಿದೆ. ಐದು ಗ್ಯಾರಂಟಿಗಳನ್ನು ರಾಜ್ಯದ ಎಲ್ಲಾ ಜನರಿಗೆ ನೀಡಿದ್ದೇವೆ. ಜೆಡಿಎಸ್, ಬಿಜೆಪಿ ಸೇರಿದಂತೆ ಎಲ್ಲಾ ಪಕ್ಷಗಳಿಗೆ ಮತಹಾಕಿದ ಜನರಿಗೂ ನಮ್ಮ ಗ್ಯಾರಂಟಿಗಳು ತಲುಪುತ್ತಿವೆ. ಎಲ್ಲರ ಮನೆಯಲ್ಲಿ ವಿದ್ಯುತ್ ದೀಪ ಉರಿಯುತ್ತಿದೆ. ಗೃಹಲಕ್ಷ್ಮಿ ತಲುಪುತ್ತಿದೆ, ಅಕ್ಕಿ, ಹಣ, ಯುವನಿಧಿ ತಲುಪುತ್ತಿದೆ. ಇವು ಮೋದಿ ಗ್ಯಾರಂಟಿಯಿಂದಾಗಿಲ್ಲ, ಕಾಂಗ್ರೆಸ್ ಗ್ಯಾರಂಟಿಯಿಂದ ಆಗಿದೆ.

ಮೋದಿ ಗ್ಯಾರಂಟಿ ಎಂದರೆ ಕೇವಲ ಸುಳ್ಳು. ನಿರುದ್ಯೋಗಿ ಯುವಕರನ್ನು ಪಕೋಡ ಮಾರಲು ಹೇಳಿದ ಸುಳ್ಳು. ನಮ್ಮ ತಾಯಂದಿರಿಗೆ ಗ್ಯಾಸ್ ಸಿಲೆಂಡರ್ ಅನ್ನು ಪೂಜೆ ಮಾಡಿ ಎಂದು ಹೇಳಿದ ಸುಳ್ಳು. ಜಿಎಸ್ಟಿ ತೆಗೆಯುತ್ತೇನೆ ಎಂದು ಹೇಳಿದ ಸುಳ್ಳು. ಬಿಜೆಪಿಯವರು ಕಾಂಗ್ರೆಸ್ ಗ್ಯಾರಂಟಿಗಳು ಸುಳ್ಳು ಎಂದು ಬಿಂಬಿಸಲು ಪ್ರಯತ್ನ ಮಾಡಿದರು. ನೀವು ಕಮಿಷನ್ ಪಡೆಯುವ ಹಣದಲ್ಲೇ ನಾವು ಗ್ಯಾರಂಟಿ ನೀಡುತ್ತೇವೆ ಎಂದು ಸಿದ್ದರಾಮಯ್ಯ ಅವರು ತಿರುಗೇಟು ನೀಡಿದರು.

ಕಳೆದ ಸರ್ಕಾರದಲ್ಲಿ ಸಿದ್ದರಾಮಯ್ಯ ಅವರು ಅನೇಕ ಭಾಗ್ಯಗಳನ್ನು ಕೊಟ್ಟು ಕರ್ನಾಟಕದಲ್ಲಿ ಬದಲಾವಣೆ ತಂದವರು ಸಿದ್ದರಾಮಯ್ಯ ಅವರು. ಹಸಿದವರ, ರೈತರ ಕಷ್ಟಗಳನ್ನು ಅರಿತು ಕೆಲಸ ಮಾಡಿದರು. ನಂತರ ಬಂದಂತಹ ಬಿಜೆಪಿ ಸರ್ಕಾರ 40 ಪರ್ಸೆಂಟ್ ಕಮಿಷನ್ಗಾಗಿ ಈ ರಾಜ್ಯವನ್ನು ದಿವಾಳಿ ಮಾಡಿದರು. ವಿರೊಧ ಪಕ್ಷದಲ್ಲಿ ಇದ್ದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ರಾಜ್ಯದಾದ್ಯಂತ ಪ್ರವಾಸ ಮಾಡಿ ಗ್ಯಾರಂಟಿಗಳನ್ನು ಘೋಷಣೆ ಮಾಡಿದರು. ಇಕ್ಬಾಲ್ ಅವರನ್ನು ಗೆಲ್ಲಿಸಲು ಗ್ಯಾರಂಟಿ ಸುಳ್ಳು ಹೇಳುತ್ತಿದ್ದಾರೆ. ಕುಸುಮ ಅವರನ್ನು, ಡಾ.ರಂಗನಾಥ್ ಅವರನ್ನು ಗೆಲ್ಲಿಸಿದರೆ ಏನು ಸಿಗುವುದಿಲ್ಲ ಎಂದರು. ಎಲ್ಲಿದೆ ಹಣ? ಎಂದು ಕೇಳಿದರು. ಆದರೆ ಇಂದು ನಮ್ಮ ಪಕ್ಷ ಅಧಿಕಾರಕ್ಕೆ ಬಂದು ಜನರಿಗೆ ಈ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ತಲುಪಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+