ಸಿನಿಮಾ ನಿರ್ಮಾಣ, ನಿರ್ದೇಶನ ಜೆಡಿಎಸ್, ಬಿಜೆಪಿಗೆ ಬಿಟ್ಟಿದ್ದೇವೆ: ಡಿ ಕೆ ಸುರೇಶ್ ಹೇಳಿದ್ದೇನು?
ಬೆಂಗಳೂರು, ಸೆಪ್ಟೆಂಬರ್ 16: ಸಿನಿಮಾ ನಿರ್ಮಾಣ ಮತ್ತು ನಿರ್ದೇಶನವನ್ನು ಬಿಜೆಪಿ ಮತ್ತು ಜೆಡಿಎಸ್ ಅವರಿಗೆ ಬಿಟ್ಟಿದ್ದೇವೆ. ನಿರ್ಮಾಣ, ಕಟ್, ಆಕ್ಷನ್ ಎಲ್ಲವನ್ನು ಅವರಿಬ್ಬರಿಗೇ ಬಿಟ್ಟಿದ್ದೇವೆ. ಡಿಕೆ ಸಹೋದರರನ್ನು ನೆನೆಸಿಕೊಳ್ಳದಿದ್ದರೆ ರಾಜಕೀಯವಾಗಿ ರಕ್ಷಣೆ ಸಿಗುವುದಿಲ್ಲ, ಮೇಲೆ ಬರಲು ಸಾಧ್ಯವಿಲ್ಲ ಎಂದು ಮಾಜಿ ಸಂಸದರಾದ ಡಿ ಕೆ ಸುರೇಶ್ ಅವರು ಹೇಳಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಏನೇ ಮಾಡಿದರು ಡಿ.ಕೆ ಸಹೋದರರನ್ನು ಗುರಿಯಾಗಿಸಿಕೊಳ್ಳಬೇಕು ಎಂದು ಎಲ್ಲರೂ ಹವಣಿಸುತ್ತಿರುತ್ತಾರೆ. ಅವರುಗಳ ರಾಜಕೀಯ ಬೆಳವಣಿಗೆಗೆ ಇದು ಸರಿಯೋ ತಪ್ಪು ಎಂಬ ಚರ್ಚೆ ಅವರಿಗೆ ಬಿಟ್ಟಿದ್ದು. ನಾವು ಗೌರವಯುತವಾಗಿ ಎಲ್ಲವನ್ನೂ ಸ್ವೀಕಾರ ಮಾಡುತ್ತೇವೆ. ಹಾಗೇ ಸಮಯ ಬಂದಾಗ ಅದಕ್ಕೆ ಉತ್ತರವನ್ನೂ ಕೊಡುತ್ತೇವೆ ಎಂದರು.

ನಿಮ್ಮ ಸಮುದಾಯದ ಹಾಗೂ ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಕೆಟ್ಟದಾಗಿ ಮಾತನಾಡುವ ವ್ಯಕ್ತಿಯನ್ನು ನೀವು ಹೇಗೆ ಸಮರ್ಥನೆ ಮಾಡಿಕೊಳ್ಳುತ್ತೀರಿ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಪರೋಕ್ಷವಾಗಿ ಕುಮಾರಸ್ವಾಮಿ, ಅಶೋಕ್ ಅವರಿಗೆ ತಿರುಗೇಟು ನೀಡಿದರು.
ಮುನಿರತ್ನ ಮಾಡಿರುವ ಕೃತ್ಯವನ್ನು ಕಾಂಗ್ರೆಸ್ ಪಕ್ಷದ ನಾಯಕರೇನಾದರೂ ಮಾಡಿದ್ದರೆ ನಿಮ್ಮ ಮಾತುಗಳು ಯಾವ ರೀತಿ ಇರುತ್ತಿದ್ದವು? ಇದಕ್ಕೆ ರಾಜಕೀಯವನ್ನು ಬೆರೆಸಬೇಡಿ, ಸರಿಯಾಗಿ ಮಾತನಾಡಿ. ನಿಮ್ಮ ಪಕ್ಷ ಇದಕ್ಕೆ ಬೆಂಬಲವಾಗಿ ನಿಂತಿದ್ದೀಯೋ ಇಲ್ಲವೋ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು. ಕೆಲವು ಮುಖಂಡರು, ವಿರೋಧಪಕ್ಷದ ನಾಯಕರು ಈ ಪ್ರಕರಣಕ್ಕೆ ರಾಜಕೀಯ ಬಣ್ಣ ಬಳಿಯಲು ಪ್ರಯತ್ನಿಸುತ್ತಿದ್ದಾರೆ. ಘಟನೆಯ ಎಲ್ಲಾ ವಿವರಗಳು ತೆರೆದ ಪುಸ್ತಕದಂತೆ ಇರುವಾಗ ಸಮರ್ಥನೆ ಮಾಡಿಕೊಳ್ಳುವುದು ಸರಿಯೇ? ಎಂದು ಪ್ರಶ್ನಿಸಿದರು.
ನಾವುಗಳು ಯಾರು ಮುನಿರತ್ನ ಅವರಿಗೆ ಕೆಟ್ಟ ಮಾತುಗಳನ್ನು ಬೈಯಿರಿ ಹಾಗೂ ಕಮಿಷನ್ ತೆಗೆದುಕೊಳ್ಳಿ ಎಂದು ಹೇಳಿರಲಿಲ್ಲ. ಮಹಿಳೆಯರ ಬಗ್ಗೆ ಆಡಿರುವ ಕೀಳು ಮಾತುಗಳನ್ನು ಯಾರೂ ಕೂಡ ಸಹಿಸಲು ಆಗುವುದಿಲ್ಲ. ಜಾತಿ, ಜಾತಿಗಳ ಮಧ್ಯೆ ಸಂಘರ್ಷ ತರುವಂತಹ ಮಾತುಗಳು, ಜಾತಿ ಧರ್ಮಗಳನ್ನು ಬಹಳ ಕೀಳಾಗಿ ನೋಡುವಂತಹದ್ದು ಸಹಿಸಲು ಆಗುವುದಿಲ್ಲ ಎಂದರು.
ರಾಜಕೀಯ ದ್ವೇಷದಿಂದ ಮುನಿರತ್ನ ಅವರ ಮೇಲೆ ಕ್ರಮ ತೆಗೆದುಕೊಳ್ಳಲಾಗಿದೆ ಎನ್ನುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿಕೆ ಬಗ್ಗೆ ಕೇಳಿದಾಗ "ದ್ವೇಷಕ್ಕೂ ಮತ್ತು ರಾಜಕೀಯಕ್ಕೂ ಎಲ್ಲಿಯ ಸಂಬಂಧ. ನಾವು ಯಾರೂ ಬೈಯಿರಿ ಎಂದು ಅವರಿಗೆ ಹೇಳಿಲ್ಲ. ದೂರು ಕೊಟ್ಟ ನಂತರ ಘಟನೆಯ ಬಗ್ಗೆ ನಮಗೆ ತಿಳಿಯಿತು. ಪೊಲೀಸರು ಮುನಿರತ್ನಂ ಅವರನ್ನು ಬಂಧಿಸಿದ್ದು, ಮಿಕ್ಕ ಸಂಗತಿಗಳು ವಿಚಾರಣೆ ಬಳಿಕ ತಿಳಿಯುತ್ತವೆ ಎಂದರು.
ಬಂಧನಕ್ಕೂ ಮುಂಚಿತವಾಗಿ ಬಿಡುಗಡೆ ಮಾಡಿದ ವಿಡಿಯೋದಲ್ಲಿ ಮುನಿರತ್ನ ಅವರು ಡಿ.ಕೆ ಸುರೇಶ್ ಅವರ ಹೆಸರು ಪ್ರಸ್ತಾಪಿಸಿದ್ದಾರೆ ಎಂದು ಕೇಳಿದಾಗ, "ನೀವೇ (ಮಾಧ್ಯಮದವರು) ಗಮನಿಸಿದಂತೆ ಯಾವ ವಿಚಾರದಲ್ಲೂ ನಾನು ಭಾಗಿಯಾಗುತ್ತಿಲ್ಲ. ಈ ವಿಚಾರಗಳು ಗೊತ್ತೂ ಇಲ್ಲ, ನನಗೆ ಅವಶ್ಯಕತೆಯೂ ಇಲ್ಲ. ಜನರು ತೀರ್ಪು ಕೊಟ್ಟಿರುವುದನ್ನು ಗೌರವಯುತವಾಗಿ ಸ್ವೀಕಾರ ಮಾಡಿದ್ದೇನೆ. ನನ್ನ ಕೈಲಾದಷ್ಟು ಕೆಲಸವನ್ನು ಜನರಿಗಾಗಿ ಮಾಡುತ್ತಿದ್ದೇನೆ. ನಾನು ರಾಜಕೀಯ ನಾಯಕರಿಂದ ದೂರ ಇದ್ದೇನೆ. ಜನರು ಅವರಿಗೆ ಅವಕಾಶ ಕೊಟ್ಟಿದ್ದಾರೆ, ಕೆಲಸ ಮಾಡಲಿ ಎಂದು ನಾವು ಸುಮ್ಮನಿದ್ದೇವೆ. ದಿನ ಬೆಳಗಾದರೆ, ಕೂತರೂ ನಿಂತರು ರಾಜಕೀಯ ಮಾಡಲು ಆಗುತ್ತದೆಯೇ? ಎಂದರು.
-
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications