ರಾಜ್ಯದ ಮಹಿಳೆಯರ ಖಾತೆಗೆ 4000 ರೂ ಹಣ ಜಮಾ : ಹೊಸ ಗ್ಯಾರಂಟಿ ಘೋಷಿಸಿದ ಡಿ ಕೆ ಸುರೇಶ್

ರಾಮನಗರ, ಫೆಬ್ರವರಿ 19: ಪಂಚ ಗ್ಯಾರಂಟಿಗಳ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌, ಕೊಟ್ಟ ಮಾತಿನಂತೆ ಹಂತ ಹಂತವಾಗಿ ಶಕ್ತಿ ಯೋಜನೆ, ಗೃಹ ಲಕ್ಷ್ಮೀ, ಗೃಹ ಜ್ಯೋತಿ, ಅನ್ನಭಾಗ್ಯ ಹಾಗೂ ಯುವ ನಿಧಿ ಯೋಜನೆಯನ್ನ ಜಾರಿಗೊಳಿಸಿದೆ. ಆದರೆ ಇದೀಗ ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್‌ ಸಂಸದ ಮಹಿಳೆಯರಿಗೆ ಹೊಸ ಗ್ಯಾರಂಟಿಯ ಭರವಸೆ ನೀಡಿದ್ದಾರೆ.

ಕಾಂಗ್ರೆಸ್ ಏರ್ಪಡಿಸಿದ್ದ ಸೋಲೂರು, ತಿಪ್ಪಸಂದ್ರ, ಕುದೂರು ಹೋಬಳಿಗಳ ಗೃಹಲಕ್ಷ್ಮಿ ಯೋಜನಾ ಫಲಾನುಭವಿಗಳ ಮಹಿಳಾ ಸಮಾವೇಶ ಉದ್ಘಾಟಿಸಿ ಸಂಸದ ಡಿ ಕೆ ಸುರೇಶ್‌ ಮಾತನಾಡಿ, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಮ್ಮ ರಾಜ್ಯದ ತೆರಿಗೆ ಹಣವನ್ನು ಬೇರೆ ರಾಜ್ಯಗಳಿಗೆ ನೀಡಲಾಗುತ್ತಿದೆ. ನಮ್ಮ ತೆರಿಗೆ ಹಣವನ್ನು ವಾಪಸ್ ನೀಡಲಿ. ನಮ್ಮ ತೆರಿಗೆ ಹಣವನ್ನು ನಮಗೆ ಕೊಡಿ ಎಂದು ನಾನು ಕೇಳಿದರೆ ನನ್ನನ್ನು ವಿಲನ್ ರೀತಿ ನೋಡ್ತೀರಾ? ನೀವುಗಳು ತೆರಿಗೆ ಹಣ ವಾಪಸ್ ಕೊಟ್ಟಿದ್ದೇ ಆದರೆ ಮಹಿಳೆಯರಿಗೆ ಈಗಿರುವ ಮಾಸಿಕ ಎರಡು ಸಾವಿರದ ಜೊತೆಗೆ ಮತ್ತೆರೆಡು ಸಾವಿರ ರುಪಾಯಿ ಸೇರಿಸಿ ಕೊಡುತ್ತೇವೆ ಎಂದು ಹೇಳಿದರು.

DK Suresh Lashes Out At The Central Government Saying, Give Us Our Tax Money

ನಮ್ಮ ರಾಜ್ಯದ ತೆರಿಗೆ ಹಣವನ್ನು ಉತ್ತರಪ್ರದೇಶ, ಬಿಹಾರ, ಒರಿಸ್ಸಾಗೆ ತೆಗೆದುಕೊಂಡು ಹೋದರೆ ನಮ್ಮಗಳ ಗತಿಯೇನು? ನಮ್ಮ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆಯಿಂದ ಮಹಿಳೆಯರು ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ. ಇದರಿಂದಾಗಿ ಮಹಿಳೆಯರು ಗಂಡಂದಿರಿಗೆ ಊಟ ಹಾಕದೆ ತಿರುಗಾಡುತ್ತಾರೆ ಎಂದು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಟೀಕಿಸಿದರು. ಆದರೆ ಇದುವರೆಗೂ ಯಾವೊಬ್ಬ ಗಂಡಸು ನನ್ನ ಹೆಂಡತಿ ನನಗೆ ಊಟ ಹಾಕುತ್ತಿಲ್ಲ ಎಂದು ಪೊಲೀಸ್ ಠಾಣೆಗೆ ದೂರು ಕೊಟ್ಟ ಉದಾಹರಣೆ ಇಲ್ಲ ಎಂದರು.

ಬಡವರಿಗೆ ಹಣ ನೀಡಿದರೆ ಸರ್ಕಾರ ದಿವಾಳಿಯಾಗುತ್ತೇನ್ರಿ? ರಾಜ್ಯದ ಹೆಣ್ಣು ಮಕ್ಕಳಿಗೆ ಹಣ ಹಂಚಿದರೆ ಸರ್ಕಾರ ಮುಳುಗಿ ಹೋಗುತ್ತದೆಯಾ? ಶ್ರೀಮಂತ ಉದ್ಯಮಿಗಳಿಗೆ 17 ಲಕ್ಷ ಕೋಟಿ ಸಾಲ ನೀಡಿ ಅದನ್ನು ಮನ್ನಾ ಮಾಡಿದ್ದೀರಿ. ಆಗ ಸರ್ಕಾರ ದಿವಾಳಿಯಾಗತ್ತೆ ಅನಿಸಲಿಲ್ಲವೇ? ಎಂದು ಬಿಜೆಪಿ ಸರ್ಕಾರದ ವಿರುದ್ದ ಕಿಡಿಕಾರಿದರು. ಶಕ್ತಿ ಯೋಜನೆಯಡಿ ಪ್ರತಿನಿತ್ಯ 30 ಲಕ್ಷ ಜನ ಪ್ರಯಾಣ ಮಾಡುತ್ತಿದ್ದಾರೆ. ಇದುವರೆಗೂ 200 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ.

DK Suresh Lashes Out At The Central Government Saying, Give Us Our Tax Money

ಮಾಗಡಿ ತಾಲಕಿನ 65 ಸಾವಿರ ಕುಟುಂಬಗಳಿಗೆ ಅನ್ನಭಾಗ್ಯ ಯೋಜನೆ ಜಾರಿಗೊಳಿಸಿದ್ದೇವೆ. ನಮಗೆ ಮತ ಹಾಕದವರೂ ಮತ್ತು ನಮ್ಮನ್ನು ನಿತ್ಯ ಬಯ್ಯುವವರೂ ಕೂಡಾ ಉಚಿತ ಸೇವೆ ಪಡೆಯುತ್ತಿದ್ದಾರೆಂದರು. 40 ಪರ್ಸೆಂಟ್ ಹಣ ಪಡೆದು ಆಡಳಿತ ಮಾಡಿದ ಬಿಜೆಪಿ ಸರ್ಕಾರ ಈಗ ನಮ್ಮ ಯೋಜನೆ ಬಗ್ಗೆ ಹೊಟ್ಟೆ ಉರಿ ಪಡ್ತಾ ಇದ್ದೀರಾ? ನಾವು ಆ ಹಣವನ್ನು ಉಳಿಸಿ ಜನರಿಗೆ ಗ್ಯಾರಂಟಿ ಯೋಜನೆ ಮೂಲಕ ಹಣ ತಲುಪಿಸುತ್ತಿದ್ದೇವೆ. ಲಿಂಗಾಯತರು, ವಕ್ಕಲಿಗರೂ ಕೂಡಾ ಈ ಫಲಾನುಭವಿಗಳನ್ನು ಪಡೆಯುತ್ತಿದ್ದಾರೆ. ಯಾರಿಗೂ ಬೇಧವಿಲ್ಲದೆ ವಿತರಿಸುತ್ತಿದ್ದೇವೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+