Haryana Assembly Election Results 2024: ಹರಿಯಾಣ ವಿಧಾನಸಭೆ ಚುನಾವಣೆ ಸೋಲಿನ ಕಾರಣ ಬಿಚ್ಚಿಟ್ಟ ಡಿ ಕೆ ಸುರೇಶ್
ಬೆಂಗಳೂರು, ಅಕ್ಟೋಬರ್ 09: ಹರಿಯಾಣ ವಿಧಾನಸಭಾ ಚುನಾವಣೆ ಸೋಲಿಗೆ ಅತಿಯಾದ ಆತ್ಮವಿಶ್ವಾಸ ಕಾರಣ. ಹೈಕಮಾಂಡ್ ಸೋಲಿನ ಬಗ್ಗೆ ಪರಾಮರ್ಶನೆ ಮಾಡುತ್ತದೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದರು.
ಸದಾಶಿವನಗರದ ನಿವಾಸದಲ್ಲಿ ಬುಧವಾರ ಮಾಧ್ಯಮದವರ ಜತೆ ಮಾತನಾಡಿದ ಅವರು, "ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ ಎನ್ನುವುದಕ್ಕೆ ಇದು ಸಾಕ್ಷಿ ಹಾಗೂ ಉತ್ತಮ ನಿದರ್ಶನ. ಜಮ್ಮು, ಕಾಶ್ಮೀರದಲ್ಲಿ ಇಂಡಿಯಾ ಒಕ್ಕೂಟ ಸರ್ಕಾರ ರಚನೆ ಮಾಡುತ್ತದೆ" ಎಂದರು.

ಹರಿಯಾಣ ಫಲಿತಾಂಶ ಮಹಾರಾಷ್ಟ್ರ, ಜಾರ್ಖಂಡ್ ಚುನಾವಣೆ ಮೇಲೆ ಪರಿಣಾಮ ಬೀರುತ್ತದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಈ ಎರಡೂ ರಾಜ್ಯಗಳ ಪರಿಸ್ಥಿತಿ ಬೇರೆ, ಬೇರೆ ರೀತಿಯಿದೆ. ಇವು ಆಯಾ ರಾಜ್ಯಗಳ ಚುನಾವಣೆಯಾಗಿದ್ದು, ಬೇರೆ ರಾಜ್ಯಗಳ ಫಲಿತಾಂಶ ಇವುಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಲೋಕಸಭೆ ಹಾಗೂ ವಿಧಾನಸಭಾ ಚುನಾವಣೆಗಳೇ ಬೇರೆ, ಬೇರೆ ಎಂದು ಹೇಳಿದರು.
ಹರಿಯಾಣ ಸೋಲಿಗೆ ಮುಡಾ ಪ್ರಕರಣ ಕಾರಣ ಎನ್ನುವ ಮಾಜಿ ಸಭಾಪತಿ ಕೋಳಿವಾಡ ಅವರ ಹೇಳಿಕೆ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಕೋಳಿವಾಡ ಅವರ ಹೇಳಿಕೆಗೂ ಹರಿಯಾಣ ಸೋಲಿಗೂ ಸಂಬಂಧವಿಲ್ಲ. ಇದರ ಬಗ್ಗೆ ಪಕ್ಷದ ವರಿಷ್ಠರು ತಿಳಿಸಲಿದ್ದಾರೆ ಎಂದು ತಿಳಿಸಿದರು. ಅಲ್ಲದೇ ಇವಿಎಂ ಬಗ್ಗೆ ಮತ್ತೆ ಅನುಮಾನಗಳು ವ್ಯಕ್ತವಾಗುತ್ತಿರುವ ಬಗ್ಗೆ ನಮ್ಮ ಎಐಸಿಸಿ ವರಿಷ್ಠರು ಮಾತನಾಡುತ್ತಾರೆ ಎಂದರು.
ಮುಡಾ ಪ್ರಕರಣ ಮುಚ್ಚಿ ಹಾಕಲು ಜಾತಿಗಣತಿ ವಿಷಯ ಮುನ್ನಲೆಗೆ ತಂದಿದ್ದಾರೆ ಎನ್ನುವ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ಬೆಳಿಗ್ಗೆ ಒಂದು, ಸಂಜೆಯೊಂದು ಮಾತನಾಡುವವರಿಗೆ ನಾವು ಉತ್ತರ ನೀಡುವುದಿಲ್ಲ. ಮಾಧ್ಯಮದವರಿಗೆ ಅವರು ಗಂಭೀರ ವ್ಯಕ್ತಿ ಎನಿಸಬಹುದು, ಆದರೆ ನಮಗಲ್ಲ. ಅವರ ಯಾವುದೇ ಹೇಳಿಕೆಗಳು ನ್ಯಾಯಯುತವಾಗಿರುವುದಿಲ್ಲ. ಅವರಿಗೆ ಕೆಲಸವಿಲ್ಲ, ಅದಕ್ಕೆ ಮಾತನಾಡುತ್ತಾರೆ. ಅವರಿಗೆ ಮೋದಿ ಅವರು ಒಳ್ಳೆ ಕೆಲಸ ಕೊಟ್ಟಿದ್ದಾರೆ, ಅದನ್ನು ಬಿಟ್ಟು ಕರ್ನಾಟಕದ ವಿಚಾರದಲ್ಲಿ ಮಾತನಾಡುತ್ತಿದ್ದಾರೆ ಎಂದರು.
ಮಹದೇವಪ್ಪ, ಸತೀಶ್ ಜಾರಕಿಹೊಳಿ ಭೇಟಿ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಮಹದೇವಪ್ಪ ಹಿರಿಯ ಸಚಿವರು. ಪರಮೇಶ್ವರ್ ಅವರು ಪ್ರಮುಖ ಖಾತೆ ಹೊಂದಿರುವವರು, ಇವರುಗಳು ರಾಜಕೀಯ ಹೊರತಾಗಿ ಸೇರಿದ್ದಾರೆ. ಈಗಾಗಲೇ ಸರ್ಕಾರದ 136 ಶಾಸಕರು ಸಿದ್ದರಾಮಯ್ಯ ಅವರ ಬೆನ್ನಿಗೆ ಇದ್ದಾರೆ ಎನ್ನುವ ಸಂದೇಶವನ್ನು ನಾವು ಕೊಟ್ಟಿದ್ದೇವೆ ಎಂದು ಹೇಳಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ಭೇಟಿಯ ನಂತರ ಸಿಎಂ ಬದಲಾವಣೆ ವಿಚಾರ ಮುನ್ನಲೆಗೆ ಬಂದಿದೆ ಎಂಬ ಪ್ರಶ್ನೆಗೆ ಉತ್ತರಿಸಿ, ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ರಾಜ್ಯದವರು, ಕೆಪಿಸಿಸಿ ಅಧ್ಯಕ್ಷರು ಅವರನ್ನು ಗೌರವಯುತವಾಗಿ ಭೇಟಿಯಾಗಿದ್ದಾರೆ. ಭೇಟಿಯಾಗುವುದು ಪಕ್ಷದ ಶಿಸ್ತು ಎಂದರು.
ವಿನಯ್ ಕುಲಕರ್ಣಿ ಅವರ ಮೇಲಿನ ಅತ್ಯಾಚಾರ ಆರೋಪ ಪ್ರಕರಣದ ಕುರಿತು ನನಗೆ ಆ ಬಗ್ಗೆ ಮಾಹಿತಿಯಿಲ್ಲ ಎಂದ ಅವರು, ಕಾಂಗ್ರೆಸ್ ಸರ್ಕಾರವನ್ನು ನಾವು ಬೀಳಿಸುವುದಿಲ್ಲ, ಅವರೇ ಕಿತ್ತಾಡಿಕೊಂಡು ಸರ್ಕಾರ ಬಿದ್ದು ಹೋಗುತ್ತದೆ ಎನ್ನುವ ಬಿಜೆಪಿ ಹೇಳಿಕೆ ಬಗ್ಗೆ ಕೇಳಿದಾಗ, ಅವರುಗಳು ಇದೇ ಗುಂಗಿನಲ್ಲಿರಲಿ ಎಂದು ಹೇಳಿದರು.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications