ಡಿ ಕೆ ಶಿವಕುಮಾರ್ ಬಿಜೆಪಿ ಸೇರ್ಪಡೆ ಕುರಿತು ಚರ್ಚೆ: ಡಿ ಕೆ ಸುರೇಶ್ ಹೇಳಿದ್ದೇನು?
ಬೆಂಗಳೂರು, ಸೆಪ್ಟೆಂಬರ್ 04: ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣೀಟ್ಟಿದ್ದು, ಬಿಜೆಪಿ ಹೋಗಲಿದ್ದಾರೆ ಎಂದು ಬಸವನಗೌಡ ಪಾಟೀಲ್ ಯತ್ನಾಳ್ ಅಚ್ಚರಿ ಹೇಳಿಕೆಯನ್ನ ನೀಡಿದ್ದರು. ಅಲ್ಲದೇ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಸಹ ಡಿ ಕೆ ಶಿವಕುಮಾರ್ ಬಿಜೆಪಿಗೆ ಹೋಗಬಹುದು ಎಂದು ಹೇಳಿಕೆ ನೀಡಿದ್ದು, ಸದ್ಯ ರಾಜ್ಯ ರಾಜಕೀಯದಲ್ಲಿ ಈ ಕುರಿತು ಚರ್ಚೆ ನಡೆಯುತ್ತಿದೆ. ಡಿ ಕೆ ಶಿವಕುಮಾರ್ ಬಿಜೆಪಿ ಪಕ್ಷಕ್ಕೆ ಹೋಗುವ ಕುರಿತು ಸಹೋದರ ಡಿ ಕೆ ಸುರೇಶ್ ಅವರು ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಬಮುಲ್ ಅಧ್ಯಕ್ಷರಾದ ಡಿ.ಕೆ.ಸುರೇಶ್ ಮಾಧ್ಯಮಗಳ ಜೊತೆಗೆ ಮಾತನಾಡಿ, ರಾಜೇಂದ್ರ ಅವರು ಹಾಗೂ ರಾಜಣ್ಣ ಅವರು ಇಬ್ಬರೂ ಹಿರಿಯ ನಾಯಕರು. ಅವರಿಗೆ ಏನೇನು ಮಾಹಿತಿ ಇದೆಯೋ ನನಗೆ ಗೊತ್ತಿಲ್ಲ. ಇದರ ಬಗ್ಗೆ ಮುಖ್ಯಮಂತ್ರಿಯವರು, ಎಐಸಿಸಿ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಯವರು ಉತ್ತರ ನೀಡುತ್ತಾರೆ ಎಂದು ಹೇಳಿದರು.

ಸೆಪ್ಟೆಂಬರ್ ಕ್ರಾಂತಿ ಎಂದರೆ ಬಿಜೆಪಿಗೆ ಹೋಗುವುದು ಎನ್ನುವ ರಾಜಣ್ಣ ಅವರ ಹೇಳಿಕೆ ಕುರಿತು ಮಾತನಾಡಿ, ನಮ್ಮ ಬಳಿ ಜನಬೆಂಬಲವೂ ಇಲ್ಲ. ಅವರಷ್ಟು ತಿಳುವಳಿಕೆಯೂ ಇಲ್ಲ. ನಮಗೆ ಇರುವುದು ಕಾಂಗ್ರೆಸ್ ಪಕ್ಷವೊಂದೇ, ಆ ಪಕ್ಷದ ಕೆಳಗೆ ಕೆಲಸ ಮಾಡುತ್ತಿದ್ದೇವೆ. ಕಾಂಗ್ರೆಸ್ ಧ್ವಜದ ಕೆಳಗೆ, ಕಾಂಗ್ರೆಸ್ಸಿಗರ ಜೊತೆಗೆ ಕೆಲಸ ಮಾಡಿ ಅಭ್ಯಾಸವಿದೆ. ಉಳಿದದ್ದು ಅವರಿಗೆ ಬಿಟ್ಟಿದ್ದು ಎಂದು ಹೇಳಿದರು. ಅಲ್ಲದೇ ರಾಜಣ್ಣ ಅವರ ವಿರುದ್ಧ ಪಿತೂರಿಯಾಯಿತು ಎನ್ನುವ ಬಗ್ಗೆ ಮಾತನಾಡಿ, ಪಿತೂರಿ ಮಾಡಲು ಜನಗಳೇ ಇಲ್ಲ. ಜನಗಳು ಎಲ್ಲಿದ್ದಾರೆ? ಎಂದರು.
ಧರ್ಮಸ್ಥಳಕ್ಕೆ ಕೆಟ್ಟ ಹೆಸರು ತರುವಂತಹ ಬಿಜೆಪಿ- ಜೆಡಿಎಸ್ ಪಕ್ಷಗಳ ರಾಜಕೀಯ ಒಳಒಪ್ಪಂದವನ್ನು ಕಾಂಗ್ರೆಸ್ ಸರ್ಕಾರ ನಿಷ್ಪಕ್ಷಪಾತ ಎಸ್ಐಟಿ ತನಿಖೆ ಮೂಲಕ ವಿಫಲಗೊಳಿಸಿದೆ. ಇದೆಲ್ಲವೂ ಪ್ರತಿಪಕ್ಷಗಳ ರಾಜಕೀಯ ನಾಟಕ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಮ್ಮ ರಕ್ತದಾಹ ನಿಲ್ಲಿಸಿ, ಕ್ಷೇತ್ರದ ಪಾವಿತ್ರ್ಯತೆ ಉಳಿಸಿ ಎಂದು ಬಮುಲ್ ಅಧ್ಯಕ್ಷರಾದ ಡಿ.ಕೆ.ಸುರೇಶ್ ಅವರು ಹರಿಹಾಯ್ದರು.
ಧರ್ಮಸ್ಥಳಕ್ಕೆ ಬಿಜೆಪಿಯವರು ಭೇಟಿ ಜೊತೆಗೆ ಸೌಜನ್ಯ ಅವರ ಮನೆಗೂ ಭೇಟಿ ನೀಡಿದ ಬಗ್ಗೆ ಮಾತನಾಡಿ, ಯಾತ್ರೆಯಲ್ಲಿ ಅಲ್ಲಿನ ಜನಪ್ರತಿನಿಧಿಗಳೂ ಸಹ ಶ್ರೀಕ್ಷೇತ್ರವನ್ನು ಒಪ್ಪಿ ಮಾತನಾಡಿಲ್ಲ. ಕೇವಲ ಸ್ವಾಮಿ ಮಂಜುನಾಥನ ಬಗ್ಗೆ ಮಾತ್ರ ಮಾತನಾಡಿದ್ದಾರೆ. ಆಗ ಸುಖಾಸುಮ್ಮನೆ ಆರೋಪಗಳನ್ನು ಮಾಡಿ, ಈಗ ಕೊಳಕು ರಾಜಕಾರಣದಿಂದ ಆಚೆ ಬರಲು ಧರ್ಮಸ್ಥಳದ ಯಾತ್ರೆ ಮಾಡಲಾಗಿದೆ. ಇದು ಕ್ಷೇತ್ರದ ಮೇಲೆ ಇರುವ ಗೌರವದಿಂದ ಮಾಡಿರುವ ಯಾತ್ರೆಯಲ್ಲ ಎಂದರು.
ಬಿಜೆಪಿ- ಜೆಡಿಎಸ್ ಅವರು ಏತಕ್ಕೆ ಯಾತ್ರೆ ಮಾಡಿದ್ದಾರೆ. ಯಾರಿಗೆ ಸಾಂತ್ವನ ಹೇಳಲು ಯಾತ್ರೆಗೆ ಹೋಗಿದ್ದಾರೆ ಎಂದು ಪ್ರಶ್ನೆಸಿದ ಸುರೇಶ್ ಅವರು, ಬಿಜೆಪಿಯವರ ರಾಜಕೀಯ ಬೇಳೆ ಅಲ್ಲಿ ಬೇಯುವುದಿಲ್ಲ. ಏಕೆಂದರೆ ದಕ್ಷಿಣ ಕನ್ನಡ ಜಿಲ್ಲೆಯ ಜನ ಬಿಜೆಪಿಗರ ರಾಜಕೀಯ ಒಳ ಒಪ್ಪಂದಗಳನ್ನು ಅರಿತಿದ್ದಾರೆ ಎಂದರು. ಈ ಹಿಂದೆಯೂ ಸೌಜನ್ಯ ಅವರ ಮನೆಗೆ ತೆರಳಿ ಸಾಂತ್ವನವೆಂಬ ನಾಟಕವಾಡಿ ಯಾವ ರೀತಿಯ ಹೇಳಿಕೆಗಳನ್ನು ಕೊಟ್ಟಿದ್ದಾರೆ ಎನ್ನುವುದು ದಾಖಲೆಗಳಲ್ಲಿದೆ. ಈಗಲೂ ಸಹ ಇದೇ ರೀತಿಯ ವ್ಯವಸ್ಥೆ ರೂಪಿಸಿ ಜನರನ್ನು ಮರುಳು ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಧರ್ಮಸ್ಥಳ ಕ್ಷೇತ್ರ ರಾಜಕೀಯ ವಸ್ತುವಲ್ಲ. ಶ್ರೀ ಕ್ಷೇತ್ರದ ರಕ್ಷಣೆಯ ಹೆಸರಿನಲ್ಲಿ ರಾಜಕೀಯ ಮಾಡಲು ಹೊರಟಿರುವವರಿಗೆ ನಾಚಿಕೆಯಾಗಬೇಕು. ಸೌಜನ್ಯ ಪ್ರಕರಣ ಸೇರಿದಂತೆ ಅನೇಕ ಆರೋಪಗಳು ನಮ್ಮ ಸರ್ಕಾರ ಅಧಿಕಾರಕ್ಕೆ ಬರುವುದಕ್ಕೆ ಮುಂಚಿತವಾಗಿಯೂ ನಡೆದಿತ್ತು. ಈ ಆರೋಪಗಳು ಬಂದಂತಹ ಸಂದರ್ಭದಲ್ಲಿ ಬಿಜೆಪಿ- ಜೆಡಿಎಸ್ ನಾಯಕರು ಯಾವುದೇ ರೀತಿಯ ಹೇಳಿಕೆ ನೀಡಿದ ಉದಾಹರಣೆಗಳು ಎಲ್ಲಿಯೂ ಇಲ್ಲ ಎಂದರು.
ನಿಷ್ಪಕ್ಷವಾಗಿ ಎಸ್ ಐಟಿ ತನಿಖೆ ನಡೆದ ನಂತರ ಏಕಾಏಕಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಧರ್ಮಸ್ಥಳ ವಿಚಾರದಲ್ಲಿ ರಾಜಕೀಯ ಮಾಡುವ ಅವಶ್ಯಕತೆಯಿಲ್ಲ, ಈ ಕ್ಷೇತ್ರದ ಪರವಾಗಿ ನಾವಿದ್ದೇವೆ ಎಂದು ಅವರು ಹೇಳಿದ ನಂತರ, ಬಿಜೆಪಿ ಹಾಗೂ ಜೆಡಿಎಸ್ ನವರು ಈ ತರಾತುರಿಯಲ್ಲಿ ಯಾತ್ರೆ ಮಾಡಿದ್ದಾರೆ ಎಂದು ಜರಿದರು. ಸೌಜನ್ಯ ಕುಟುಂಬದವರು ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದರೆ ಖರ್ಚು ವೆಚ್ಚ ನೀಡುವುದಾಗಿ ವಿಜಯೇಂದ್ರ ಅವರು ಹೇಳಿರುವ ಬಗ್ಗೆ ಉತ್ತರಿಸಿ, ಇದರ ಬಗ್ಗೆ ಅವರನ್ನೇ ಕೇಳಬೇಕು. ಏತಕ್ಕಾಗಿ ಈ ಪ್ರಕರಣದ ಖರ್ಚು ವೆಚ್ಚ ಭರಿಸುತ್ತೀರಿ? ಇಂತಹ ಹೇಳಿಕೆಯನ್ನು ಈ ಹಿಂದೆಯೂ ನೀಡಲಾಗಿತ್ತು. ಇವರಿಗೆ ರಾಜಕೀಯ ನೆನಪುಗಳು ಕಡಿಮೆ ಇರಬೇಕು ಎಂದರು.
-
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
IPL Free VIP Tickets: ಶಾಸಕರಿಗೆ ಐಪಿಎಲ್ ವಿಐಪಿ ಟಿಕೆಟ್ ಪಡೆಯುವ ಹಕ್ಕು ಇದೆ: ಡಿ.ಕೆ.ಶಿವಕುಮಾರ್ ಸಮರ್ಥನೆ -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ












Click it and Unblock the Notifications