KPCC ಅಧ್ಯಕ್ಷರ ಬದಲಾವಣೆ ಬಗ್ಗೆ ಡಿಕೆ ಸುರೇಶ್ ಶಾಕಿಂಗ್ ಹೇಳಿಕೆ
ಬೆಂಗಳೂರು, ನವೆಂಬರ್ 16: ಬಿಹಾರ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆಯ ಚರ್ಚೆ ನಡೆಯುತ್ತಿದೆ. ಬಿಹಾರ ಫಲಿತಾಂಶದ ಬೆನ್ನಲ್ಲೇ ದಿಢೀರ್ ದೆಹಲಿಗೆ ಹಾರಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿದ್ದಾರೆ. ಈ ವೇಳೆ ಸಚಿವ ಸಂಪುಟ ಪುನಾರಚನೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಚರ್ಚೆಯಾಗಿದ್ದು, ಕೈ ಪಾಳಯದಲ್ಲಿ ಈ ಬಗ್ಗೆ ವಿಭಿನ್ನ ಅಭಿಪ್ರಾಯಗಳು ಕೇಳಿ ಬರುತ್ತಿವೆ.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಪ್ರಸ್ತಾಪವನ್ನು ಹೈಕಮಾಂಡ್ ಮುಂದೆ ಇಟ್ಟಿರುವ ಬಗ್ಗೆ ಮಾಜಿ ಸಂಸದ ಹಾಗೂ ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಮಾಧ್ಯಮಗಳ ಜೊತೆಗೆ ಮಾತನಾಡಿ, ಹೈಕಮಾಂಡ್ ಯಾವ ತೀರ್ಮಾನ, ಸಲಹೆಯನ್ನು ಶಿವಕುಮಾರ್ ಅವರು ಕೇಳುತ್ತಾರೆ. ಶಿವಕುಮಾರ್ ಅವರು ಮಾತ್ರವಲ್ಲ, ಎಲ್ಲರೂ ಕೇಳುತ್ತಾರೆ. ಅದರಲ್ಲಿ ಯಾವುದೇ ಅನುಮಾನ ಬೇಡ. ಅಧ್ಯಕ್ಷ ಸ್ಥಾನದಲ್ಲೇ ಮುಂದುವರಿಯಬೇಕು ಎಂಬ ಆಸೆ ಶಿವಕುಮಾರ್ ಅವರಿಗಿಲ್ಲ. ಪಕ್ಷ ಮುಂದುವರಿಯಲು ಹೇಳಿದೆ, ಎಷ್ಟು ದಿನ ಅವಕಾಶ ನೀಡುತ್ತಾರೋ ಅಷ್ಟು ದಿನ ಪಕ್ಷದ ಕೆಲಸ ಮಾಡಿಕೊಂಡು ಇರುತ್ತಾರೆ ಎಂದು ಹೇಳಿದರು.

ಬಿಹಾರ ಚುನಾವಣೆ ಕುರಿತು ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಗೆಲುವು ಸೋಲು ಇದ್ದೇ ಇರುತ್ತದೆ. ಬಿಹಾರದಲ್ಲಿ ಚುನಾವಣೆಗೂ ಮುನ್ನ ಎನ್ ಡಿಎ ಸರ್ಕಾರ ಕರ್ನಾಟಕ ಗ್ಯಾರಂಟಿ ಯೋಜನೆ ಮಾದರಿಯಲ್ಲೇ ಅನುಷ್ಠಾನ ಮಾಡಿತು. ಹೀಗಾಗಿ ಮಹಿಳಾ ಮತದಾರರು ಎನ್ ಡಿಎ ಪರ ಒಲವು ತೋರಿದ್ದಾರೆ. 10 ಸಾವಿರ ರೂ. ಒಟ್ಟಿಗೆ ಮಹಿಳೆಯರ ಖಾತೆಗೆ ಹಾಕಿದ ಪರಿಣಾಮ ಹಾಗೂ ಚುನಾವಣೆ ಮುನ್ನ 47 ಲಕ್ಷ ಮತಗಳನ್ನು ಮತಪಟ್ಟಿಯಿಂದ ಕಿತ್ತು ಹಾಕಿದ್ದು ಪ್ರಮುಖ ಕಾರಣವಾಗಿದೆ. ಜನ ತೀರ್ಪು ನೀಡಿದ್ದು, ಅದನ್ನು ಸ್ವಾಗತಿಸುತ್ತೇವೆ. ನಮ್ಮ ಪಕ್ಷಕ್ಕೆ ಸೋಲು, ಗೆಲುವು ಹೊಸತಲ್ಲ. ವಿರೋಧ ಪಕ್ಷವಾಗಿ ಕೆಲಸ ಮಾಡುತ್ತಾ ಪಕ್ಷ ಸಂಘಟನೆ ಮಾಡುತ್ತೇವೆ ಎಂದು ತಿಳಿಸಿದರು.
ಸಂಪುಟ ಪುನಾರಚನೆಯಾದರೆ ಸಿಎಂ ಬದಲಾವಣೆ ಇಲ್ಲ ಎಂಬ ಪರಮೇಶ್ವರ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಅವರು ಹಿರಿಯ ಸಚಿವರು, ಅವರು ಹೇಳುತ್ತಾರೆ. ಸಚಿವ ಸಂಪುಟ ಪುನಾರಚನೆ ಸಿಎಂ ಪರಮಾಧಿಕಾರ. ಹೈಕಮಾಂಡ್ ಅಪ್ಪಣೆಯೊಂದಿಗೆ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ವಿಚಾರದಲ್ಲಿ ಹೈಕಮಾಂಡ್ ಶಿವಕುಮಾರ್ ಅವರ ಬಳಿ ಚರ್ಚೆ ಮಾಡಿದರೆ, ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗೆ ಅಗತ್ಯವಾದ ಸಲಹೆ ನೀಡುತ್ತಾರೆ. ಸಿಎಂ ಈಗಾಗಲೇ ಇದ್ದಾರೆ. ಸಿಎಂ ಇಲ್ಲದಿದ್ದಾಗ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಮಾಡಬಹುದು ಎಂದು ತಿಳಿಸಿದರು.
ಸಂಪುಟ ಪುನಾರಚನೆ, ಪವರ್ ಶೇರಿಂಗ್ ಎಲ್ಲವನ್ನು ತೀರ್ಮಾನ ಮಾಡುವುದು ಹೈಕಮಾಂಡ್. ಹೈಕಮಾಂಡ್ ಯಾವ ತೀರ್ಮಾನ ಮಾಡಲಿದೆ ಎಂದು ಕಾದು ನೋಡೋಣ ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ತಿಳಿಸಿದರು. ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಒಪ್ಪಿಗೆ ನೀಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿ ನೋಡಿದ್ದೇನೆ. ಇದು ಸಿಎಂ ಹಾಗೂ ಹೈಕಮಾಂಡ್ ನಾಯಕರಿಗೆ ಬಿಟ್ಟ ವಿಚಾರ. ಕಾದು ನೋಡೋಣ ಎಂದರು.
ಸಂಪುಟ ಪುನಾರಚನೆ ಆದರೆ ನಾಯಕತ್ವ ಬದಲಾವಣೆ ಆಗುವುದಿಲ್ಲ ಎಂಬ ಚರ್ಚೆ ಇದೆಯಲ್ಲ ಎಂದು ಕೇಳಿದಾಗ, ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಏನೇ ಇದ್ದರೂ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತದೆಯೇ ಹೊರತು ಬೇರೆಯವರಲ್ಲ ಎಂದು ಪ್ರತಿಕ್ರಿಯಿಸಿದರು.ಡಿ.ಕೆ. ಶಿವಕುಮಾರ್ ಅವರು ಈಗಾಗಲೇ ದೆಹಲಿಗೆ ಹೋಗಿದ್ದು, ನೀವೂ ತೆರಳುತ್ತಿರುವ ಕಾರಣ ಎಂದು ಕೇಳಿದಾಗ, ನಾನು ಈಗಾಗಲೇ ದೆಹಲಿಗೆ ತೆರಳಿರುವುದಾಗಿ ಮಾಧ್ಯಮಗಳು ಪ್ರಕಟಿಸಿವೆ. ನಾನು ದೆಹಲಿಗೆ ಹೋಗುವುದು ಹೊಸತಲ್ಲ. ಶಿವಕುಮಾರ್ ಅವರು ಅವರ ಕೆಲಸದ ಮೇಲೆ ಹೋಗಿದ್ದಾರೆ, ನನ್ನ ಪಾಡಿಗೆ ನಾನು ಹೋಗುತ್ತಿರುವೆ ಎಂದು ತಿಳಿಸಿದರು.
ನಿಮ್ಮ ಸಹೋದರ ಸಿಎಂ ಆಗಬೇಕು ಎಂಬ ಆಸೆ ನಿಮ್ಮದು ಎಂಬ ಬಗ್ಗೆ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿ, ಈ ವಿಚಾರ ಸಾಕಷ್ಟು ಬಾರಿ ಹೇಳಿದ್ದೇನೆ. ಎಲ್ಲದಕ್ಕೂ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ. ಸಿಎಂ, ಸಚಿವರು, ಶಾಸಕರು, ಶಿವಕುಮಾರ್ ಎಲ್ಲರಿಗೂ ಹೈಕಮಾಂಡ್ ತೀರ್ಮಾನವೇ ಮುಖ್ಯ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆ ಕಾದು ನೋಡಬೇಕು ಎಂದು ತಿಳಿಸಿದರು.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್












Click it and Unblock the Notifications