Get Updates
Get notified of breaking news, exclusive insights, and must-see stories!

ಇದೇ ನನ್ನ ಕೊನೆ ಚುನಾವಣೆ ಎಂದಿದ್ದ ಸಿದ್ದರಾಮಯ್ಯ: ಸಿಎಂ ರಾಜಕೀಯ ನಿವೃತ್ತಿ ಬಗ್ಗೆ ಡಿ ಕೆ ಸುರೇಶ್‌ ಮಾತು

ಬೆಂಗಳೂರು, ಜುಲೈ 12: ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆ ನಡೆಯುತ್ತಲೇ ಇದೆ. ಈ ನಡುವೆ ಹೈಕಮಾಂಡ್‌ ನಾಯಕರನ್ನ ಭೇಟಿ ಮಾಡಿ ಮಾತುಕತೆ ನಡೆಸಿರುವ ಸಿದ್ದರಾಮಯ್ಯ ಅವರು ಡಿ ಕೆ ಶಿವಕುಮಾರ್‌ಗೆ ಹೆಚ್ಚಿನ ಶಾಸಕರ ಬೆಂಬಲ ಇಲ್ಲ, ಐದು ವರ್ಷ ನಾನೇ ಮುಖ್ಯಮಂತ್ರಿ. 2028 ರ ಚುನಾವಣೆ ನನ್ನ ನೇತೃತ್ವದಲ್ಲೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ಕಾಂಗ್ರೆಸ್‌ ಪಾಳಯದಲ್ಲಿ ಚರ್ಚೆಗೆ ಕಾರಣವಾಗಿದೆ.

2023 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ನನ್ನ ಕೊನೆಯ ಚುನಾವಣೆ ಎಂದು ಘೋಷಿಸಿದ್ದರು. ಆದರೆ, ಇದೀಗ ಕಾಂಗ್ರೆಸ್‌ನಲ್ಲಿ ಕೇಳಿ ಬರುತ್ತಿದ್ದ ನಾಯಕತ್ವ ಬದಲಾವಣೆಯ ಚರ್ಚೆಯ ನಡುವೆ 2028 ರ ಚುನಾವಣೆ ನನ್ನ ನೇತೃತ್ವದಲ್ಲೇ ಎಂದು ಸಿದ್ದರಾಮಯ್ಯ ಅವರ ಹೇಳಿಕೆ ಚರ್ಚೆಗೆ ಕಾರಣವಾಗಿದ್ದು, ಸಿದ್ದರಾಮಯ್ಯ ಅವರ ರಾಜಕೀಯ ನಿವೃತ್ತಿ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಡಿ ಕೆ ಶಿವಕುಮಾರ್‌ ಸಹೋದರ ಹಾಗೂ ಮಾಜಿ ಸಂಸದರಾದ ಡಿ ಕೆ ಸುರೇಶ್‌ ಅವರು ಪ್ರತಿಕ್ರಿಯಿಸಿದ್ದಾರೆ.

DK Suresh Reaction to CM Siddaramaiah s political retirement

ಇದೇ ನನ್ನ ಕೊನೆ ಚುನಾವಣೆ ಎಂದಿದ್ದ ಸಿದ್ದರಾಮಯ್ಯ ಅವರು ಈಗ 2028ಕ್ಕೂ ನನ್ನದೇ ನೇತೃತ್ವದಲ್ಲಿ ಚುನಾವಣೆ ಎಂಬ ಹೇಳಿಕೆ ಬಗ್ಗೆ ಡಿ ಕೆ ಸುರೇಶ್‌ ಅವರು ಮಾತನಾಡಿ, ಸಿದ್ದರಾಮಯ್ಯ ಅವರು ಹಿರಿಯ ನಾಯಕರು. ರಾಜಕೀಯದಲ್ಲಿ ನಿವೃತ್ತಿ ಇಲ್ಲ. ರಾಜಕೀಯ ಇಚ್ಛಾಶಕ್ತಿ ಇರಬೇಕು. ಮುಖ್ಯಮಂತ್ರಿಗಳಿಗೆ ಇಚ್ಛಾಶಕ್ತಿ ಇದೆ. ಹೀಗಾಗಿ ಅವರು ಕೆಲವು ವಿಚಾರವನ್ನು ನಿಮ್ಮ ಜೊತೆ ಹಂಚಿಕೊಂಡಿರಬಹುದು ಎಂದು ತಿಳಿಸಿದರು.

ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಆತುರದಲ್ಲೂ ಇಲ್ಲ, ಆತಂಕದಲ್ಲೂ ಇಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಜಗಳವಿಲ್ಲ. ಕಾಂಗ್ರೆಸ್ ಪಕ್ಷದ ವರಿಷ್ಠರು, ಮುಖ್ಯಮಂತ್ರಿಗಳು, ಅಧ್ಯಕ್ಷರು ಹಾಗೂ ಡಿಸಿಎಂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಕೂಡ ಈಗಾಗಲೇ ಈ ವಿಚಾರವಾಗಿ ಸ್ಪಷ್ಟನೆ ನೀಡಿದ್ದು, ಸಿದ್ದರಾಮಯ್ಯ ಅವರು ನಾಯಕತ್ವದಲ್ಲಿ ಮುಂದುವರಿಯಲಿದ್ದಾರೆ ಎಂದು ಹೇಳಿದ್ದಾರೆ. ಆದರೂ ಮಾಧ್ಯಮಗಳಿಗೆ ಯಾಕೆ ಗೊಂದಲವಿದೆ ಎಂದು ಗೊತ್ತಿಲ್ಲ. ಶಿವಕುಮಾರ್ ಅವರು ಪಕ್ಷ ಕೊಟ್ಟಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ಪಕ್ಷದ ಕಾರ್ಯಕರ್ತನಾಗಿ ಮುನ್ನಡೆಸುತ್ತಿದ್ದಾರೆ. ಪಕ್ಷದ ಸೂಚನೆಯಂತೆ ಅವರು ಕೆಲಸ ಮಾಡುತ್ತಿದ್ದಾರೆ. ಇದರ ಹೊರತಾಗಿ ಹೆಚ್ಚಿನ ವಿಚಾರ ಏನೂ ಇಲ್ಲ. ಸಧ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಪದೇ ಪದೆ ಈ ವಿಚಾರ ಯಾಕೆ ಚರ್ಚೆಯಾಗುತ್ತಿದೆ ಗೊತ್ತಿಲ್ಲ ಎಂದರು.

ಡಿ.ಕೆ. ಶಿವಕುಮಾರ್ ಅವರಿಗೆ ಹೆಚ್ಚಿನ ಶಾಸಕರ ಬೆಂಬಲ ಇಲ್ಲ ಎಂಬ ಹೇಳಿಕೆ ಬಗ್ಗೆ ಮಾತನಾಡಿ, ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ. ಶಾಸಕರ ಬೆಂಬಲ ಕೇಳುವ ಸಮಯವಲ್ಲ. ಸಿದ್ದರಾಮಯ್ಯ ಅವರು 2 ವರ್ಷಗಳಿಂದ ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡು ಕೆಲಸ ಮಾಡುತ್ತಿದ್ದಾರೆ. ಅವರು ಮುಂದುವರಿಯುತ್ತಿರುವಾಗ ಈ ವಿಚಾರ ಚರ್ಚೆಯಾಗುತ್ತಿರುವ ಬಗ್ಗೆ ನಮಗೆ ಗೊತ್ತಿಲ್ಲ. ನೀವು ಈ ವಿಚಾರ ಚರ್ಚೆ ಮಾಡುತ್ತಿರುವವರನ್ನೇ ಕೇಳಿ. ಶಿವಕುಮಾರ್ ಅವರದ್ದು ಬಲಾಬಲ ಪ್ರದರ್ಶನ ಮಾಡುವ ವ್ಯಕ್ತಿತ್ವವಿಲ್ಲ. ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ. ಕಾಂಗ್ರೆಸ್ ವರಿಷ್ಠರಿಗೆ ಗೌರವ ನೀಡುವ ವ್ಯಕ್ತಿತ್ವ ಹೊಂದಿರುವವರು. ಅವರು ಬೇರೆಯವರಿಗೆ ಮಾರ್ಗದರ್ಶಕರಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.

ಡಿ.ಕೆ. ಶಿವಕುಮಾರ್ ಅವರು ನಂಬುವ ಗುರುಗಳೇ ಈ ಅವಧಿಯಲ್ಲಿ ಅವರು ಸಿಎಂ ಆಗುತ್ತಾರೆ ಎಂದು ಹೇಳಿದ್ದಾರೆ ಎಂದು ಕೇಳಿದಾಗ, "ನನಗೆ ಈ ವಿಚಾರ ಗೊತ್ತಿಲ್ಲ. ಪ್ರತಿಯೊಬ್ಬರಿಗೂ ಒಬ್ಬೊಬ್ಬರು ಸಿಎಂ ಆಗಲಿ ಎಂದು ಆಸೆ ಪಡುತ್ತಾರೆ. ಪ್ರತಿ ಜಿಲ್ಲೆ, ಸಮುದಾಯದವರು ನಮ್ಮವರು ಸಿಎಂ ಆಗಲಿ ಎಂದು ಆಶಯ ವ್ಯಕ್ತಪಡಿಸುವುದು ಸಹಜ. ಇದು ಇಂದು ನಡೆದಿರುವ ವಿಚಾರವಲ್ಲ. ಪ್ರತಿ ಅವಧಿಯಲ್ಲೂ ಇಂತಹ ಬೆಳವಣಿಗೆ ನಡೆದುಕೊಂಡು ಬಂದಿದೆ. ಇಂತಹ ಅಭಿಪ್ರಾಯವನ್ನು ತಪ್ಪು ಎಂದು ಹೇಳಲು ಆಗುವುದಿಲ್ಲ ಎಂದರು.

75 ವರ್ಷಕ್ಕೆ ನಿವೃತ್ತಿ ಪಡೆಯಬೇಕು ಎಂದು ಆರ್ ಎಸ್ಎಸ್ ಮುಖಂಡ ಮೋಹನ್ ಭಾಗವತ್ ಹೇಳಿಕೆ ಕುರಿತು ಮಾತನಾಡಿ, ರಾಜಕಾರಣದಲ್ಲಿ ನಿವೃತ್ತಿ ಇಲ್ಲ ಎಂದು ನಾನು ಹೇಳಿದ್ದೇನೆ. ರಾಜಕೀಯ ಇಚ್ಛಾಶಕ್ತಿ ಜೊತೆಗೆ ಅವರವರು ಹಾಕಿಕೊಂಡಿರುವ ಲಕ್ಷ್ಮಣ ರೇಖೆಗಳನ್ನು ದಾಟುವುದು ಹೇಗೆ ಎಂಬುದು ಮುಖ್ಯ. ಯಾವಾಗಲೂ ಇನ್ನೊಬ್ಬರಿಗೆ ಮಾರ್ಗದರ್ಶಕರಾಗಿ ಮಾದರಿಯಾಗಿರಬೇಕು. ಈ ರೀತಿ ದಿಟ್ಟ ಹೆಜ್ಜೆ ಇಟ್ಟಾಗ ಅವರ ಹೆಸರು ಶಾಶ್ವತವಾಗಿ ಉಳಿಯುತ್ತದೆ ಎಂದು ತಿಳಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+