ನನಗೆ ಪೂರ್ಣ ಸಂತೋಷವಾಗಿಲ್ಲ: ಡಿಕೆ ಸುರೇಶ್‌ ಹೇಳಿಕೆ

ನವದೆಹಲಿ, ಮೇ 18: ಭಾರೀ ಹಗ್ಗಜಗ್ಗಾಟದ ನಡುವೆ ಕರ್ನಾಟಕಕ್ಕೆ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್‌ ಆಯ್ಕೆಯಾಗಿದ್ದಾರೆ. ಆದರೆ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಅಣ್ಣನ ಕಾರ್ಯಕ್ಷಮತೆಗೆ ಪಕ್ಷ ಡಿಸಿಎಂ ಹುದ್ದೆ ನೀಡುವುದಕ್ಕೆ ಡಿಕೆ ಶಿವಕುಮಾರ್‌ ಅವರ ತಮ್ಮ, ಸಂಸದ ಡಿಕೆ ಸುರೇಶ್‌ ನನಗೆ ಪೂರ್ಣ ಸಂತಸವಾಗಿಲ್ಲ ಎಂದು ಹೇಳಿದ್ದಾರೆ.

ದೆಹಲಿಯಲ್ಲಿ ಗುರುವಾರ ಬೆಳಗ್ಗೆ ಮಾತನಾಡಿದ ಅವರು, ನನಗೆ ಪೂರ್ಣ ಸಂತೋಷವಿಲ್ಲ ಆದರೆ ಕರ್ನಾಟಕದ ಹಿತದೃಷ್ಟಿಯಿಂದ ನಾವು ನಮ್ಮ ನಿರ್ಧಾರದಿಂದ ಹಿಂದೆ ಸರಿಯಲು ಬಯಸಿದ್ದೇವೆ. ಅದಕ್ಕಾಗಿಯೇ ಡಿಕೆ ಶಿವಕುಮಾರ್ ಒಪ್ಪಿಕೊಳ್ಳಬೇಕಾಯಿತು. ಭವಿಷ್ಯದಲ್ಲಿ ನಾವು ನೋಡುತ್ತೇವೆ, ಮುಂದೆ ದಾರಿ ಬಹಳ ದೂರವಿದೆ. ನನಗೆ ಆಸೆ ಇತ್ತು (ಡಿ.ಕೆ.ಶಿವಕುಮಾರ್ ಗೆ ಸಿಎಂ ಹುದ್ದೆ) ಆದರೆ ಆಗಲಿಲ್ಲ. ಕಾದು ನೋಡೋಣ' ಎಂದು ಕಾಂಗ್ರೆಸ್ ಸಂಸದ ಹಾಗೂ ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಹೇಳಿದರು.

DK Sureshs Reaction On Congress High Command Giving Karnataka DCM Post to DK Shivakumar

ಇನ್ನು ಖಾಸಗಿ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್‌ ಅವರು, "ನಾವು ಕರ್ನಾಟಕ ಜನತೆಗೆ ಹಲವು ಭರವಸೆಗಳನ್ನು ನೀಡಿದ್ದೇವೆ. ಲೋಕಸಭಾ ಚುನಾವಣೆ ಕೂಡ ಹತ್ತಿರದಲ್ಲಿದೆ. ಪಕ್ಷದ ಹಿತದೃಷ್ಟಿಯಿಂದ ಗಾಂಧಿ ಕುಟುಂಬ ಮತ್ತು ಎಐಸಿಸಿ ಅಧ್ಯಕ್ಷರ ಮಾತಿಗೆ ಒಪ್ಪಿಗೆ ನೀಡಿದ್ದೇನೆ." ಎಂದು ಹೇಳಿದರು.

ಸೂತ್ರಕ್ಕೆ ಒಪ್ಪಿಕೊಂಡಿದ್ದೀರಾ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, "ಹೌದು, ಕೆಲವು ಸಂದರ್ಭದಲ್ಲಿ ನಾವು ಒಪ್ಪಿಕೊಳ್ಳಬೇಕಾಗುತ್ತದೆ. ಕರ್ನಾಟಕ ಜನತೆಗೆ ಏನು ಭರವಸೆಗಳನ್ನು ಕೊಟ್ಟಿದ್ದೇವೆ, ಅವುಗಳನ್ನು ಈಡೇರಿಸುವುದು ನಮಗೆ ಮುಖ್ಯವಾಗುತ್ತದೆ. ಕಳೆದ ಒಂದು ವರ್ಷದಿಂದ ಸಹಕರಿಸಿದ ಮಾಧ್ಯಮಗಳಿಗೆ, ಎಕ್ಸಿಟ್ ಪೋಲ್‌ನಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ ಎಂದು ಹೇಳಿದ್ದಕ್ಕೆ ಧನ್ಯವಾದಗಳು" ಎಂದು ಹೇಳಿದರು.

DK Suresh

ಡಿ.ಕೆ. ಶಿವಕುಮಾರ್ ಅವರ ಪಕ್ಷ ನಿಷ್ಠೆಗೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪಕ್ಷದ ಹಿತದೃಷ್ಟಿಯಿಂದ ನಾನು ಸಂಧಾನಕ್ಕೆ ಒಪ್ಪಿಕೊಂಡಿದ್ದೇನೆ ಎನ್ನುವುದು ಅವರ ರಾಜಕೀಯ ಮುತ್ಸದ್ದಿತನವನ್ನು ತೋರುತ್ತದೆ. ಡಿಕೆಶಿ ಪಕ್ಷಕ್ಕಾಗಿ ಸಿಎಂ ಹುದ್ದೆಯನ್ನು ತ್ಯಾಗ ಮಾಡಿದ್ದಾರೆ ಎಂದು ಹಲವರು ಸಾಮಾಜಿಕ ಮಾಧ್ಯಮದಲ್ಲಿ ಅವರನ್ನು ಹಾಡಿ ಹೊಗಳಿದ್ದಾರೆ.

DK Sureshs Reaction On Congress High Command Giving Karnataka DCM Post to DK Shivakumar

ಡಿಕೆ ಶಿವಕುಮಾರ್ ಅವರ ಪಕ್ಷ ನಿಷ್ಟೆ ಪ್ರಶ್ನಾತೀತ, ತಮ್ಮ ಮೇಲೆ ಕೇಸುಗಳು ದಾಖಲಾದರು, ಜೈಲಿಗೆ ಕಳುಹಿಸಿದರು, ಹೊರಬಂದ ನಂತರ ಪಕ್ಷವನ್ನು ತಳಮಟ್ಟದಲ್ಲಿ ಬಲಗೊಳಿಸುವಲ್ಲಿ ಅವರ ಪಾತ್ರ ಬಹಳ ಮುಖ್ಯ, ಅದರಲ್ಲೂ ಸಾಮಾಜಿಕ ಮಾಧ್ಯಮದಲ್ಲಿ ಬಲಿಷ್ಠವಾಗಿದ್ದ ಬಿಜೆಪಿಯನ್ನು ಅದೇ ಸಾಮಾಜಿಕ ಮಾಧ್ಯಮಗಳ ಮೂಲಕವೇ ಹಣಿಯಲು ಒಂದು ತಂಡವನ್ನೇ ಕಟ್ಟಿದ್ದ ಡಿಕೆಶಿ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಶ್ರಮಿಸಿದ್ದಾರೆ ಎನ್ನುವುದು ಸತ್ಯ.

ಇನ್ನು ಸಿದ್ದರಾಮಯ್ಯ ಸಿಎಂ ಆಗಲು ಡಿಕೆ ಶಿವಕುಮಾರ್‌ ಹೈಕಮಾಂಡ್‌ನ ಅಧಿಕಾರ ಹಂಚಿಕೆ ಸೂತ್ರಕ್ಕೆ ಸಿದ್ದರಾಮಯ್ಯ ಮತ್ತು ಡಿ. ಕೆ. ಶಿವಕುಮಾರ್ ಒಪ್ಪಿಗೆ ನೀಡಿದ್ದಾರೆ. ಡಿ. ಕೆ. ಶಿವಕುಮಾರ್ ಅವರು ಮೊದಲ ಎರಡು ವರ್ಷ ಮಾತ್ರ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರಬೇಕು ಎಂದು ಷರತ್ತು ಹಾಕಿದ್ದಾರೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+