DK Suresh Slams BJP: ಕನಕಪುರದಲ್ಲಿ ನಾಮಪತ್ರ ಸಲ್ಲಿಸಿದ್ದು ಯಾಕೆ? ಸ್ಪೋಟಕ ಮಾಹಿತಿ ಹೊರಹಾಕಿದ ಡಿ.ಕೆ.ಸುರೇಶ್

ಬೆಂಗಳೂರು, ಏಪ್ರಿಲ್ 20: ನಮ್ಮ ವಿರುದ್ಧ ಕುತಂತ್ರ ನಡೆಯುತ್ತಿದೆ. ಏನು ಬೇಕಾದರೂ ನಡೆಯಬಹುದು. ಹೀಗಾಗಿ ನಾನು ಮುಂಜಾಗೃತ ಕ್ರಮವಾಗಿ ನಾನು ಕನಕಪುರದಿಂದಲೇ ನಾಮಪತ್ರ ಸಲ್ಲಿಸಿದ್ದೇನೆ. ಈ ಮೂಲಕ ಎಚ್ಚರಿಕೆ ಹೆಜ್ಜೆ ಇಟ್ಟಿದ್ದೇವೆ ಎಂದು ಸಂಸದ ಡಿಕೆ ಸುರೇಶ್ ಹೊಸ ಬಾಂಬ್ ಸಿಡಿಸಿದ್ದಾರೆ.

ಕನಕಪುರದಲ್ಲಿ ನಾಮಪತ್ರ ಸಲ್ಲಿಸಿ ನಂತರ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಸಂಸದರು, ಚುನಾವಣಾಧಿಕಾರಿಗಳು ಕೇಂದ್ರ ಸರ್ಕಾರದ ಅಧೀನದಲ್ಲಿಯೇ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಏನು ಬೇಕಾದರೂ ಆಗಬಹುದು. ನಮ್ಮ ವಿರುದ್ಧ ಕುತಂತ್ರ ನಡೆಯುತ್ತಿದೆ ಎಂಬುದರ ಬಗ್ಗೆ ಮಾಹಿತಿ ಸಿಕ್ಕಿದೆ. ನಾನು ದ್ವೇಷದ ರಾಜಕಾರಣ ಮಾಡುವವನಲ್ಲ ಎಂದು ಹೇಳಿದರು.

DK Suresh Slams BJP Over Hatred Politic In Kanakpura Constituency

ಕನಕಪುರಕ್ಕೆ ತಾವು ಸಿಮೀತವಾಗುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕನಕಪುರದ ಜನತೆಗಾಗಿ ನಾವು ಮುಂಜಾಗೃತ ಹೆಜ್ಜೆ ಇಟ್ಟಿದ್ದೇವೆ. ಈ ಕಾರಣಕ್ಕೆ ಡಿಕೆ ಶಿವಕುಮಾರ್ ಅವರು ನಾಮಪತ್ರ ಸಲ್ಲಿಸಿದರೂ ಸಹ ನಾನು ಸಹ ಕನಕಪುರ ಕ್ಷೇತ್ರದಿಂದಲೇ ನಾಮಪತ್ರ ಸಲ್ಲಿಸಿದ್ದೇನೆ ಎಂದರು.

ನಮಗೆ ದ್ವೇಷದ ರಾಜಕಾರಣ ಮಾಡಿ ಗೊತ್ತಿಲ್ಲ. ಬಿಜೆಪಿಯವರು ಬೇಕಿದ್ದರೆ ದ್ವೇಷ ರಾಜಕಾರಣ ಮಾಡಲಿ.ಕಾದು ನೋಡಿ ಕನಕಪುರದ ಜನ ಎಲ್ಲಿರಗೂ ಉತ್ತರ ನೀಡುತ್ತಾರೆ.

ಚುನಾವಣಾ ಹೊತ್ತಲ್ಲಿ ಕುತಂತ್ರ ನಡೆಯುವುದಿಲ್ಲ ಎಂದು ಹೇಳಲಾಗುವುದಿಲ್ಲ. ಚುನಾವಣಾ ಆಯೋಗದ ಅಧಿಕಾರಿಗಳು ಅವರು ಸಹ ಸರ್ಕಾರಿ ಅಧಿಕಾರಿಗಳೇ ಆಗಿದ್ದಾರೆ. ನಾವು ಸಲ್ಲಿಸಿರುವ ನಾಮಪತ್ರ ಕ್ರಮಬದ್ಧವಾಗಿ, ನ್ಯಾಯಯುತವಾಗಿವೆ. ನಾನು ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಿಲ್ಲ. ಹೀಗಾಗಿ ಅಲ್ಲಿ ನಾಮಪತ್ರ ಸಲ್ಲಿಕೆ ಮಾಡಿಲ್ಲ ಎಂದು ಹೇಳುವ ಮೂಲಕ ಅವರು ಎಲ್ಲ ಗೊಂದಲಗಳಿಗೆ ತೆರೆ ಎಳೆದರು.

ಸಹೋದರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಕನಕಪುರದಿಂದ ಸಲ್ಲಿಸಿದ್ದ ನಾಮಪತ್ರ ತಿರಸ್ಕೃತಗೊಳ್ಳುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬಂದಿವೆ. ಈ ಕಾರಣಕ್ಕೆ ಸಂಸದ ಡಿಕೆ ಸುರೇಶ್ ಅದೇ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+