Prajwal Revanna Case: ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಸರ್ಕಾರಕ್ಕೆ ವಿಶೇಷ ಮನವಿ ಮಾಡಿದ ಡಿಕೆ ಸುರೇಶ್
ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಲೋಕಸಭಾ ಚುನಾವಣೆ ಹೊತ್ತಿನಲ್ಲೇ ಈ ಪೆನ್‌ಡ್ರೈವ್ ಪ್ರಕರಣ ಸದ್ದು ಮಾಡುತ್ತಿದೆ. ಪ್ರಕರಣದ ತನಿಖೆಗಾಗಿ ಈಗಾಗಲೇ ಕರ್ನಾಟಕ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆ ಮಾಡಿದೆ. ಈ ಬೆನ್ನಲ್ಲೇ ಸರ್ಕಾರಕ್ಕೆ ಡಿಕೆ ಸುರೇಶ್ ವಿಶೇಷ ಮನವಿ ಮಾಡಿದ್ದಾರೆ.
ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಂಸದ ಡಿಕೆ ಸುರೇಶ್ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಬಲಿಪಶುಗಳಾಗಿರುವ ಕುಟುಂಬಗಳಿಗೆ ರಕ್ಷಣೆ ಕೊಡುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಪ್ರಜ್ವಲ್ ರೇವಣ್ಣ ರಾಜಕೀಯ ಕುಟುಂಬದವರಾಗಿದ್ದು, ಪ್ರಭಾವಿಗಳಾಗಿರುವ ಕಾರಣ, ದೌರ್ಜನ್ಯಕ್ಕೊಳಗಾದ ಹೆಣ್ಣು ಮಕ್ಕಳಿಗೆ ಅಪಾಯ ಉಂಟು ಮಾಡುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
"ಪ್ರಜ್ವಲ್ ರೇವಣ್ಣನಿಂದ ದೌರ್ಜನ್ಯಕ್ಕೊಳಗಾದ ಹೆಣ್ಣು ಮಕ್ಕಳಿಗೆ "ಆ ಕುಟುಂಬ" ದಿಂದ ಯಾವುದೇ ಸಮಯಕ್ಕೂ ಆಪತ್ತು ತಪ್ಪಿದ್ದಲ್ಲ. ಹೀಗಾಗಿ ಸರ್ಕಾರ ಜವಾಬ್ಧಾರಿ ತಗೆದುಕೊಂಡು ಎಲ್ಲಾ ಸಂತ್ರಸ್ತೆಯರಿಗೂ ಸೂಕ್ತ ರಕ್ಷಣೆ ಕೊಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸುತ್ತೇನೆ." ಎಂದು ಟ್ವೀಟ್ ಮಾಡಿದ್ದಾರೆ.
ಪ್ರಜ್ವಲ್ ರೇವಣ್ಣನಿಂದ ದೌರ್ಜನ್ಯಕ್ಕೊಳಗಾದ ಹೆಣ್ಣು ಮಕ್ಕಳಿಗೆ "ಆ ಕುಟುಂಬ" ದಿಂದ ಯಾವುದೇ ಸಮಯಕ್ಕೂ ಆಪತ್ತು ತಪ್ಪಿದ್ದಲ್ಲ. ಹೀಗಾಗಿ ಸರ್ಕಾರ ಜವಾಬ್ಧಾರಿ ತಗೆದುಕೊಂಡು ಎಲ್ಲಾ ಸಂತ್ರಸ್ತೆಯರಿಗೂ ಸೂಕ್ತ ರಕ್ಷಣೆ ಕೊಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸುತ್ತೇನೆ.#Hassan #PrajwalRevanna
— DK Suresh (@DKSureshINC) April 28, 2024
ಆತ್ಮಹತ್ಯೆಗೆ ಯತ್ನ?
ಈಗಾಗಲೇ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋದಲ್ಲಿರುವ ಸಂತ್ರಸ್ತೆಯೊಬ್ಬರು ಆತ್ಮಹತ್ಯೆಗೆ ಕೂಡ ಯತ್ನಿಸಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಪೆನ್‌ಡ್ರೈವ್‌ನಲ್ಲಿದ್ದ ವಿಡಿಯೋಗಳು ವ್ಯಾಪಕವಾಗಿ ಹಂಚಿಕೆಯಾಗುತ್ತಿದ್ದು, ಇವು ಸಂತ್ರಸ್ಥರ ಕುಟುಂಬದ ಮೇಲೂ ಪರಿಣಾಮ ಬೀರುವ ಆತಂಕ ವ್ಯಕ್ತವಾಗಿದೆ. ಈ ಬಗ್ಗೆ ರಾಜ್ಯ ಮಹಿಳಾ ಆಯೋಗ ಕೂಡ ಆತಂಕ ವ್ಯಕ್ತಪಡಿಸಿದ್ದು, ಪೆನ್‌ಡ್ರೈವ್ ಸಾರ್ವಜನಿಕಗೊಳಿಸಿದವರ ಮೇಲೂ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಸರ್ಕಾರಕ್ಕೆ ಪತ್ರ ಬರೆದಿದೆ.
ದೇಶ ಬಿಟ್ಟ ಪ್ರಜ್ವಲ್ ರೇವಣ್ಣ?
ಇನ್ನು ತಮ್ಮ ಮೇಲೆ ಆರೋಪ ಬರುತ್ತಿದ್ದಂತೆ ಸಂಸದ ಪ್ರಜ್ವಲ್ ರೇವಣ್ಣ ಈಗಾಗಲೇ ದೇಶ ಬಿಟ್ಟಿದ್ದಾರೆ ಎನ್ನಲಾಗಿದೆ. ಅವರು ಜರ್ಮನಿಗೆ ತೆರಳಿದ್ದಾರೆ ಎಂದು ಹೇಳಲಾಗಿದೆ. ಪ್ರಜ್ವಲ್ ರೇವಣ್ಣ ಬಂಧನಕ್ಕೆ ಈಗಾಗಲೇ ಭಾರಿ ಒತ್ತಾಯ ಕೇಳಿ ಬಂದಿದೆ.












Click it and Unblock the Notifications