ರಾಜ್ಯ ರಾಜಕಾರಣಕ್ಕೆ ಎಚ್‌ಡಿ ಕುಮಾರಸ್ವಾಮಿ ರೀ ಎಂಟ್ರಿ: ಡಿ ಕೆ ಸುರೇಶ್ ಹೇಳಿದ್ದೇನು?
ಬೆಂಗಳೂರು: ದೆಹಲಿ ರಾಜಕಾರಣದಲ್ಲಿ ಸಕ್ರಿಯರಾಗಿರುವ ಹೆಚ್ ಡಿ ಕುಮಾರಸ್ವಾಮಿ ಅವರು ಸದ್ಯ ರಾಜ್ಯ ರಾಜಕಾರಣದ ಬಗ್ಗೆಯೂ ಕಣ್ಣಾಡಿಸುತ್ತಾ ಇದ್ದಾರೆ. ಕುಮಾರಸ್ವಾಮಿಯವರು ಸಂಕ್ರಾಂತಿ ಹಬ್ಬದಂದೇ ಸೂರ್ಯ ಪಥಬದಲಿಸುವಂತೆ ಕುಮಾರಸ್ವಾಮಿ ಈಗ ಪಥಬದಲಿಸುವ ಸುಳಿವು ಕೊಟ್ಟಿದ್ದಾರೆ. ಮತ್ತೆ ರಾಜ್ಯ ರಾಜಕಾರಣಕ್ಕೆ ರೀ-ಎಂಟ್ರಿ ಕೊಡುವ ಸ್ಪಷ್ಟ ಮುನ್ಸೂಚನೆ ನೀಡಿದ್ದಾರೆ. ನಾನು ಎಲ್ಲೇ ಹೋದರು ಸುಮ್ಮನೆ ಕೂರಲ್ಲ, ರಾಜ್ಯದ ಜನ ತೀರ್ಮಾನ ಮಾಡಿದರೆ ಮತ್ತೆ ಇಲ್ಲೇ ಇರುತ್ತೇನೆ ಎಂದು ಹೇಳುವ ಮೂಲಕ ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ.
ಇನ್ನೂ ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣೀಟ್ಟಿರುವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣಕ್ಕೆ ಬರುತ್ತೇನೆ ಎಂಬ ಹೇಳಿಕೆ ಕುರಿತು ಮಾಜಿ ಸಂಸದ ಹಾಗೂ ಬಮೂಲ್ ಅಧ್ಯಕ್ಷರಾದ ಡಿ.ಕೆ. ಸುರೇಶ್ ಅವರು ಮಾತನಾಡಿ, ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣಕ್ಕೆ ಬರುತ್ತೇನೆ ಎಂದರೆ ನಾನು ಸ್ವಾಗತ ಮಾಡುತ್ತೇನೆ. ನಾವ್ಯಾರೂ ಅವರನ್ನು ಹೋಗು ಎಂದಿಲ್ಲ, ಬರುವವರನ್ನು ಬೇಡ ಎಂದು ಹೇಳುವುದಿಲ್ಲ. ಅವರು ಸರ್ವ ಸ್ವತಂತ್ರರು. ಅವರ ಪಕ್ಷಕ್ಕೆ ಅವರೇ ಅಧಿಪತಿ. ಅವರು ಏನೇ ತೀರ್ಮಾನ ಕೈಗೊಂಡರು ನಾನು ಅದನ್ನು ಸ್ವಾಗತಿಸುತ್ತೇನೆ ಎಂದರು.

ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣಕ್ಕೆ ಬರುವುದರಿಂದ ಇದು ಕಾಂಗ್ರೆಸ್ ಮೇಲೆ ಪರಿಣಾಮ ಬೀರುತ್ತದೆಯೇ ಎಂಬ ಕುರಿತು ಮಾತನಾಡಿ, ಕಾಂಗ್ರೆಸ್ ಗೂ ಜೆಡಿಎಸ್ ಗೂ ಸಂಬಂಧವಿಲ್ಲ. ಯಾವುದೇ ಪರಿಣಾಮ ಬೀರುವುದಿಲ್ಲ. ಇನ್ನು ಎರಡೂಕಾಲು ವರ್ಷವಿದೆ ಎಂದು ಹೇಳಿದರು.
ಅಣ್ಣ ತಮ್ಮ ದಿನಬೆಳಗಾದರೆ ಯಾರದ್ದಾದರು ತಲೆ ಹೊಡೆಯಲು ನೋಡುತ್ತಾರೆ ಅಂತಹವರಿಗೆ ಒಕ್ಕಲಿಗ ಸಮುದಾಯ ಬೆಂಬಲ ನೀಡುತ್ತದೆಯೇ ಎನ್ನುವ ಹೇಳಿಕೆ ಬಗ್ಗೆ ಡಿ ಕೆ ಸುರೇಶ್ ಅವರು ಮಾತನಾಡಿ, ಹೆಚ್ ಡಿ ಕುಮಾರಸ್ವಾಮಿ ಬಗ್ಗೆ ಬೇರೆ ದಿನ ಮಾತನಾಡೋಣ. ಮತ್ತೊಂದು ದಿನ ಬನ್ನಿ ಅವರ ವಿಚಾರವನ್ನೇ ಮಾತನಾಡೋಣ. ನಿಮಗೆ ಅವರ ಮೇಲೆ ಅಷ್ಟೋಂದು ಪ್ರೀತಿಯೇ? ಅಷ್ಟೋಂದು ಪ್ರೀತಿ ಇದ್ದರೆ ಹೇಳುವೆ ಎಂದರು.
ಡಿಜಿಪಿ ರಾಮಚಂದ್ರ ರಾವ್ ಅವರ ಪ್ರಕರಣದ ಕುರಿತು ಮಾತನಾಡಿ, ಈ ವಿಚಾರವಾಗಿ ಸಿಎಂ ಹಾಗೂ ಗೃಹ ಸಚಿವರನ್ನು ಕೇಳಿ. ಅವರು ಗೃಹಸಚಿವರಿಗೆ ಆತ್ಮೀಯರು ಎಂದು ಹೇಳುತ್ತಾರೆ, ಈ ಬಗ್ಗೆ ಅವರು ಈಗಾಗಲೇ ತೀರ್ಮಾನ ಕೈಗೊಂಡಿರಬೇಕು. ಇದು ಆತ್ಮೀಯತೆಯ ವಿಚಾರವಲ್ಲ, ಶಿಸ್ತಿನ ವಿಚಾರ. ನನಗೂ ಅನೇಕ ಆತ್ಮೀಯರು ಇರುತ್ತಾರೆ. ಶಿಸ್ತು ಹಾಗೂ ಕರ್ನಾಟಕ ಪೊಲೀಸ್ ಘನತೆ ಬಹಳ ಮುಖ್ಯ. ಇದನ್ನು ಉಳಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳುವ ವಿಶ್ವಾಸವಿದೆ ಎಂದರು.












Click it and Unblock the Notifications