ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಚ್ಚರಿಕೆ: ಕರ್ನಾಟಕದಲ್ಲಿ ತುರ್ತು ಅಗತ್ಯವಿಲ್ಲದೇ ಆಸ್ಪತ್ರೆಗೆ ಹೋಗಬೇಡಿ

|
Google Oneindia Kannada News

ಬೆಂಗಳೂರು, ಜನವರಿ 15: ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಹೆಚ್ಚಾಗಿದೆ. ಈ ಮಧ್ಯೆ ರಾಜ್ಯದಲ್ಲಿ ವೈದ್ಯಕೀಯ ತುರ್ತು ಪರಿಸ್ಥಿತಿಯಿಲ್ಲದೇ ಅನಗತ್ಯವಾಗಿ ಆಸ್ಪತ್ರೆಗಳಿಗೆ ತೆರಳಬೇಡಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಚ್ಚರಿಕೆ ನೀಡಿದೆ.
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೊವಿಡ್-19 ಮಹಾಸ್ಫೋಟ ಸಂಭವಿಸಿದೆ. ಕೊರೊನಾವೈರಸ್ ಪಾಸಿಟಿವಿಟಿ ದರ ಶೇ.15ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ 32,793 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 7 ಮಂದಿ ಪ್ರಾಣ ಬಿಟ್ಟಿದ್ದು, 4,273 ಸೋಂಕಿತರು ಗುಣಮುಖರಾಗಿದ್ದಾರೆ.

ಎಲ್ಲ ರಾಜ್ಯಗಳ ಸಿಎಂ ಜೊತೆ ಮೋದಿ ಸಭೆ: ಯಾವ ರಾಜ್ಯದಲ್ಲಿ ಹೇಗಿದೆ ಕೊವಿಡ್-19 ನಿಯಮ?ಎಲ್ಲ ರಾಜ್ಯಗಳ ಸಿಎಂ ಜೊತೆ ಮೋದಿ ಸಭೆ: ಯಾವ ರಾಜ್ಯದಲ್ಲಿ ಹೇಗಿದೆ ಕೊವಿಡ್-19 ನಿಯಮ?

ಶನಿವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 3186040ಕ್ಕೆ ಏರಿಕೆಯಾಗಿದೆ. ಈವರೆಗೂ 2977743 ಸೋಂಕಿತರು ಗುಣಮುಖರಾಗಿದ್ದು, ಸಾವಿನ ಸಂಖ್ಯೆ 38418ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 169850ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Do not visit hospitals unless there is a medical emergency for next 2 weeks: DHFWKA

ಬೆಂಗಳೂರಿನಲ್ಲಿ ಕೊರೊನಾವೈರಸ್ ಸಂಖ್ಯೆ ಏರಿಕೆ:
ಬೆಂಗಳೂರು ನಗರವೊಂದರಲ್ಲಿ ಕಳೆದ ಒಂದು ದಿನದಲ್ಲಿ 22284 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1395736ಕ್ಕೆ ಏರಿಕೆಯಾಗಿದೆ. 5 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 16448ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ಜಿಲ್ಲೆಯಲ್ಲಿ 129112 ಸಕ್ರಿಯ ಪ್ರಕರಣಗಳಿವೆ. ಸಿಲಿಕಾನ್ ಸಿಟಿಯಲ್ಲಿ ಈವರೆಗೂ ಸೋಂಕು ತಗುಲಿದ 1250175 ಮಂದಿ ಗುಣಮುಖರಾಗಿದ್ದಾರೆ.

ಕೊರೊನಾವೈರಸ್ ಸೋಂಕಿನ ಪರೀಕ್ಷೆ ಪ್ರಮಾಣ:
ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕೂಡ ತಗ್ಗಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 45.325 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 1,73,154 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 2,18,479 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೂ 1,11,24,291 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ. ಇದರ ಹೊರತಾಗಿ 4,76,86,750 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಈವರೆಗೂ ಒಟ್ಟು 5,88,11,041 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ.

ಯಾವ ಜಿಲ್ಲೆಯಲ್ಲಿ ಎಷ್ಟಿದೆ ಕೊವಿಡ್-19 ಪ್ರಕರಣ:
ರಾಜ್ಯದಲ್ಲಿ ಒಟ್ಟು 32793 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 106, ಬಳ್ಳಾರಿ 410, ಬೆಳಗಾವಿ 393, ಬೆಂಗಳೂರು ಗ್ರಾಮಾಂತರ 503 ಬೆಂಗಳೂರು 22,284, ಬೀದರ್ 171, ಚಾಮರಾಜನಗರ 93, ಚಿಕ್ಕಬಳ್ಳಾಪುರ 311, ಚಿಕ್ಕಮಗಳೂರು 196, ಚಿತ್ರದುರ್ಗ 204, ದಕ್ಷಿಣ ಕನ್ನಡ 792, ದಾವಣಗೆರೆ 153, ಧಾರವಾಡ 648, ಗದಗ 134, ಹಾಸನ 968, ಹಾವೇರಿ 17, ಕಲಬುರಗಿ 384, ಕೊಡಗು 150, ಕೋಲಾರ 541, ಕೊಪ್ಪಳ 93, ಮಂಡ್ಯ 718, ಮೈಸೂರು 729, ರಾಯಚೂರು 109, ರಾಮನಗರ 122, ಶಿವಮೊಗ್ಗ 305, ತುಮಕೂರು 1326, ಉಡುಪಿ 607, ಉತ್ತರ ಕನ್ನಡ 237, ವಿಜಯಪುರ 76, ಯಾದಗಿರಿ 13 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

ಕರ್ನಾಟಕದಲ್ಲಿ ಯಾವ ರೂಪಾಂತರಿ ಸೋಂಕು ಹೆಚ್ಚು?
ಕೊರೊನಾವೈರಸ್ ಸೋಂಕಿನ ಯಾವ ರೂಪಾಂತರಿಯು ಹೆಚ್ಚು ಹರಡುತ್ತಿದೆ ಎಂಬುದನ್ನು ಮುಂದೆ ಪಟ್ಟಿ ಮಾಡಲಾಗಿದೆ:
ಅಲ್ಫಾ/ B.1.1.7 - 156
ಬೀಟಾ/ B.1.351 - 08
ಡೆಲ್ಟಾ / B.1.617.2 - 2937
ಡೆಲ್ಟಾ ಪ್ಲಸ್ - 1350
ಕಪ್ಪಾ / B.1.617.1 - 160
ETA / B.1.525 - 01
ಓಮಿಕ್ರಾನ್/ B.1.1.529 - 479

English summary
Do not visit hospitals unless there is a medical emergency for next 2 weeks: DHFWKA.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X