Lok Sabha Election 2024: ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ದೋಸ್ತಿ ಅಭ್ಯರ್ಥಿ ಯಾರು ಗೊತ್ತಾ? ಇಲ್ಲಿದೆ ಇನ್‌ ಸೈಡ್‌ ಸ್ಟೋರಿ

ಬೆಂಗಳೂರು, ಸೆಪ್ಟೆಂಬರ್‌ 09: ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಮಾತುಕತೆ ಫಿಕ್ಸ್‌ ಆಗಿದ್ದು, 4 ಕ್ಷೇತ್ರಗಳನ್ನ ಜೆಡಿಎಸ್‌ ಗೆ ಬಿಟ್ಟುಕೊಂಡಲು ಅಮಿತ್‌ ಶಾ ಹೇಳಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಹೇಳಿದ್ದ ಬೆನ್ನಲ್ಲೇ ಯಾರು ಯಾವ ಕ್ಷೇತ್ರ ಎಂಬ ಲೆಕ್ಕಾಚಾರ ರಾಜ್ಯ ರಾಜಕಾರಣದಲ್ಲಿ ಶುರುವಾಗಿದೆ.

ಹೌದು, ದೆಹಲಿಯಲ್ಲಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠರಾದ ಹೆಚ್‌ ಡಿ ದೇವೇಗೌಡರು ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಈಗಾಗಲೇ ಮಾತುಕತೆ ನಡೆಸಿದ್ದು, 4 ಕ್ಷೇತ್ರಗಳನ್ನ ನೀಡುವುದಾಗಿ ಅಮಿತ್‌ ಶಾ ಅಮಿತ್‌ ಹೇಳಿದ್ದಾರೆ ಎನ್ನಲಾಗಿದೆ.

Do You Know Who the Friendship Candidate from Bangalore Rural Region Is? inside story

ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡ್ರು ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮಂಡ್ಯ, ಕೋಲಾರ ಹಾಗೂ ಹಾಸನ ಕ್ಷೇತ್ರಗಳನ್ನು ಬಿಟ್ಟುಕೊಡಲು ಕೇಳಿದ್ದಾರೆ.ಆದರೆ, ಬಿಜೆಪಿ ನಾಲ್ಕು ಸ್ಥಾನಗಳನ್ನ ನೀಡಲು ಒಪ್ಪಿಕೊಂಡಿದೆ ಎಂದು ಹೇಳಲಾಗಿದೆ. ಅಲ್ಲದೇ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಸದ್ಯ ಕಾಂಗ್ರೆಸ್ ಕೈಯಲ್ಲಿದ್ದು, ಈ ಕ್ಷೇತ್ರವನ್ನ ಗೆಲ್ಲುವ ಮೂಲಕ ಡಿ ಕೆ ಸಹೋದರರಿಗೆ ಪಾಠ ಕಲಿಸಲು ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಮಾಸ್ಟರ್‌ ಪ್ಲಾನ್‌ ಹಾಕಿಕೊಂಡಿದ್ದಾರೆ ಎನ್ನಲಾಗಿದೆ.

ಈಗಾಗಲೇ ಜೆಡಿಎಸ್‌ ನಾಯಕರು ಈ ಕ್ಷೇತ್ರವನ್ನ ಕೇಳಿದ್ದು, ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನ ಬಿಜೆಪಿಯೇ ಇಟ್ಟುಕೊಳ್ಳಲು ನಿರ್ಧರಿಸಿದೆ ಎನ್ನಲಾಗಿದೆ. ಈಗಾಗಲೇ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಸೋಲು ಅನುಭವಿಸಿರುವ ಮಾಜಿ ಸಚಿವ ಸಿ ಪಿ ಯೋಗೇಶ್ವರ್‌ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಸ್ಪರ್ಧೆ ನಡೆಸಲು ತೆರೆಮರೆಯಲ್ಲಿ ಕಸರತ್ತು ಶುರು ಮಾಡಿದ್ದಾರೆ ಎನ್ನಲಾಗಿದೆ. ಇತ್ತ ಎಲ್ಲಾ ಲೆಕ್ಕಾಚಾರಗಳು ಅಂದು ಕೊಂಡಂತೆ ನಡೆದರೇ ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಮೈತ್ರಿ ಅಭ್ಯರ್ಥಿಯಾಗಲಿದ್ದಾರೆ ಎನ್ನಲಾಗಿದೆ.

Do You Know Who the Friendship Candidate from Bangalore Rural Region Is? inside story

ಇನ್ನೂ ಅನಾರೋಗ್ಯದ ಕಾರಣದಿಂದಾಗಿ ಮಾಜಿ ಸಿಎಂ ಹಾಗೂ ಜೆಡಿಎಸ್‌ ನಾಯಕ ಎಚ್‌ ಡಿ ಕುಮಾರಸ್ವಾಮಿ ಸ್ಪರ್ಧಿಸುವುದು ಅನುಮಾನವಾಗಿದ್ದು, ಬಿಜೆಪಿಯೂ ಸಹ ಈ ಕ್ಷೇತ್ರವನ್ನ ಬಿಟ್ಟುಕೊಂಡುವ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ, ಜೆಡಿಎಸ್‌ ಕೇಳಿದ ಕ್ಷೇತ್ರಗಳ ಪೈಕಿ ಮಂಡ್ಯ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನ ಬಿಟ್ಟುಕೊಡದಿರಲು ಬಿಜೆಪಿ ನಿರಾಕರಿಸಿದೆ ಎನ್ನಲಾಗಿದ್ದು, ಬೆಂಗಳೂರು ಗ್ರಾಮಾಂತರ ಕ್ಷೇತ್ರ ಬಿಜೆಪಿ ಗೆ ಸಿಗಲಿದೆ.

ಇತ್ತ 2023 ರ ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಲ್ಲಿ ಎದುರಾಳಿಗಳಾಗಿದ್ದ ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಸಿ ಪಿ ಯೋಗೇಶ್ವರ್‌ ಅವರು ಲೋಕಸಭಾ ಚುನಾವಣೆ ಹಿನ್ನಲೆ ಒಂದಾಗಿದ್ದಾರೆ ಎನ್ನುವ ಮಾತುಗಳು ಚರ್ಚೆಯಾಗುತ್ತಿದೆ. ಈಗಾಗಲೇ ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ದಳಪತಿಗಳ ವರ್ಚಸ್ಸು ಹೆಚ್ಚಾಗಿದ್ದು, ಕುಮಾರಸ್ವಾಮಿಯೊಂದಿಗೆ ಉತ್ತಮ ಸಂಬಂಧ ಹೊಂದಿರುವ ಸಿ ಪಿ ಯೋಗೇಶ್ವರ್‌ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಾಗಿದೆ.

ಅಲ್ಲದೇ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಸಹ ಸಿ.ಪಿ.ಯೋಗೇಶ್ವರ್ ಮತ್ತು ಕುಮಾರಸ್ವಾಮಿ ಇಬ್ಬರೂ ಒಂದಾಗುತ್ತಿದ್ದಾರೆ ಎನ್ನುವ ಸುದ್ದಿ ಕೇಳಿ ಸಂತೋಷವಾಯಿತು ಎಂದು ಹೇಳಿದ್ದಾರೆ. ಇನ್ನೂ ಮೈತ್ರಿ ಕುರಿತು ಸಿ ಪಿ ಯೋಗೇಶ್ವರ್‌ ಮಾತನಾಡಿ, ನಾವು ಕಾಂಗ್ರೆಸ್ ವಿರುದ್ಧ ಹೋರಾಟ ಮಾಡಲು ಒಂದಾಗುತ್ತೇವೆ ಎಂದಿದ್ದಾರೆ. ಮುಂದಿನ ಬಾರಿ ಬೆಂಗಳೂರು ಗ್ರಾಮಾಂತರದಲ್ಲಿ ನಾವು ಗೆಲ್ತೇವೆ ಎಂದು ಹೇಳಿದ್ದಾರೆ.

ಒಟ್ನಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ನಿರಂತರವಾಗಿ ಗೆಲುವು ಸಾಧಿಸುತ್ತಿರುವ ಡಿ ಕೆ ಶಿವಕುಮಾರ್‌ ಸಹೋದರ ಡಿ ಕೆ ಸುರೇಶ್‌ ಅವರನ್ನ ಈ ಬಾರಿಯ ಚುನಾವಣೆಯಲ್ಲಿ ಸೋಲಿಸಬೇಕು ಎಂದು ಕುಮಾರಸ್ವಾಮಿ ಹಾಗೂ ಸಿ ಪಿ ಯೋಗೇಶ್ವರ್‌ ಪಣತೊಟ್ಟಿದ್ದು, ಮೈತ್ರಿ ಅಭ್ಯರ್ಥಿಯಾಗಿ ಯಾರು ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಣಕ್ಕಿಳಿಯುತ್ತಾರೆ ಎಂಬುದನ್ನ ಕಾದುನೋಡಬೇಕಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+