ವೈದ್ಯರ ಮುಷ್ಕರ : 2.30ರ ಗಡುವು ಕೊಟ್ಟ ಹೈಕೋರ್ಟ್

Recommended Video

      Karnataka Private Doctors Strike on KPME Bill : ಸಮಸ್ಯೆ ಬಗೆಹರಿಸಲು ಸಮಯದ ಗಡುವು ಕೊಟ್ಟ ಹೈ ಕೋರ್ಟ್

      ಬೆಂಗಳೂರು, ನವೆಂಬರ್ 16 : ಕರ್ನಾಟಕ ಸರ್ಕಾರ ಮತ್ತು ಪ್ರತಿಭಟನೆ ನಡೆಸುತ್ತಿರುವ ವೈದ್ಯರಿಗೆ ಛೀಮಾರಿ ಹಾಕಿರುವ ಹೈಕೋರ್ಟ್ ತಕ್ಷಣ ಸಮಸ್ಯೆ ಬಗೆಹರಿಸಬೇಕು ಎಂದು ಸೂಚನೆ ನೀಡಿದೆ.

      ವೈದ್ಯರು ನಡೆಸುತ್ತಿರುವ ಪ್ರತಿಭಟನೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಗುರುವಾರ ನಡೆಸಿದ ಹೈಕೋರ್ಟ್, ಮಧ್ಯಾಹ್ನ 2.30ರೊಳಗೆ ಸಮಸ್ಯೆ ಬಗೆಹರಿಸುವಂತೆ ನಿರ್ದೇಶನ ನೀಡಿದೆ.

      Doctors protest : High court sets deadline to solve issue

      ವಕೀಲ ಎನ್.ಪಿ.ಅಮೃತೇಶ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್.ಜಿ.ರಮೇಶ್, ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರ ವಿಭಾಗೀಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿತು.

      ಗುರುವಾರ ಮಧ್ಯಾಹ್ನ 2.30ರೊಳಗೆ ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಿತು. ವೈದ್ಯರು ಮತ್ತು ಸರ್ಕಾರದ ಹಠ ಮುಂದುವರೆದರೆ ನ್ಯಾಯಾಲಯವೇ ಮುಂದಿನ ಆದೇಶ ಹೊರಡಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿತು.

      In Pics : ವೈದ್ಯರ ಮುಷ್ಕರದಿಂದ ರೋಗಿಗಳ ನೀಗದ ಸಂಕಷ್ಟ

      ವೈದ್ಯರ ಪ್ರತಿಭಟನೆಯಿಂದಾಗಿ ಅಗತ್ಯ ಚಿಕಿತ್ಸೆ ದೊರೆಯದೇ ರೋಗಿಗಳು ಸಾವನ್ನಪ್ಪುತ್ತಿದ್ದಾರೆ. ಸರ್ಕಾರ ವೈದ್ಯರ ಜೊತೆ ತಕ್ಷಣ ಮಾತುಕತೆ ನಡೆಸಬೇಕು ವೈದ್ಯಕೀಯ ಸಂಘದ ವಿರುದ್ಧ ಎಸ್ಮಾ ಕಾಯ್ದೆ ಜಾರಿಗೊಳಿಸಬೇಕು ಎಂದು ಪಿಐಎಲ್‌ನಲ್ಲಿ ಒತ್ತಾಯಿಸಲಾಗಿತ್ತು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+