ಕರ್ನಾಟಕ ಚುನಾವಣೆ 2023; ಈ ದಾಖಲೆ ತೋರಿಸಿ ಮತದಾನ ಮಾಡಬಹುದು

ಬೆಂಗಳೂರು, ಏಪ್ರಿಲ್ 26; ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಿದ್ಧತೆಗಳು ನಡೆಯುತ್ತಿವೆ. ನಾಮಪತ್ರಗಳ ಪರಿಶೀಲನೆ ಸೇರಿದಂತೆ ಎಲ್ಲಾ ಪ್ರಕ್ರಿಯೆ ಪೂರ್ಣಗೊಂಡಿದೆ. ಮೇ 10ರ ಬುಧವಾರ ಮತದಾನ ನಡೆಯಲಿದೆ. ಅರ್ಹ ಮತದಾರರು ಕಡ್ಡಾಯವಾಗಿ ಮತದಾನ ಮಾಡಿ ಎಂದು ಚುನಾವಣಾ ಆಯೋಗವು ಮನವಿ ಮಾಡಿದೆ.

ಚುನಾವಣೆಯಲ್ಲಿ ಮತದಾನ ಮಾಡಲು ಭಾವಚಿತ್ರ ಹೊಂದಿರುವ ಮತದಾರರ ಗುರುತಿನ ಚೀಟಿ (ಎಪಿಕ್ ಕಾರ್ಡ್) ಹೊಂದಿಲ್ಲದಿದ್ದರೂ ಚುನಾವಣಾ ಆಯೋಗದ ಪಟ್ಟಿಯಲ್ಲಿರುವ 12 ಪರ್ಯಾಯ ದಾಖಲಾತಿಗಳಲ್ಲಿ ಒಂದು ದಾಖಲಾತಿಯನ್ನು ತೋರಿಸಿ ಮತದಾನ ಮಾಡಬಹುದಾಗಿದೆ.

Documents For Voting In Karnataka Assembly Elections 2023

ಮೇ 10ರ ಬುಧವಾರ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ಮಾಡಲು ಅವಧಿ ನಿಗದಿಪಡಿಸಲಾಗಿದೆ. ಮತದಾರರ ಗುರುತಿನ ಚೀಟಿ ಅಥವಾ ತಮ್ಮ ಭಾವಚಿತ್ರವಿರುವ 12 ಪರ್ಯಾಯ ದಾಖಲೆಗಳಲ್ಲಿ ಯಾವುದಾದರೂ ಒಂದು ಹಾಜರುಪಡಿಸಿ ಮತದಾನ ಮಾಡಬಹುದು.

ಪರ್ಯಾಯ ದಾಖಲೆಗಳು; ಆಧಾರ್ ಕಾರ್ಡ್, ಎಮ್. ಎನ್. ಆರ್. ಇ. ಜಿ. ಎ. ಜಾಬ್ ಕಾರ್ಡ್, ಬ್ಯಾಂಕ್ ಮತ್ತು ಅಂಚೆ ಕಚೇರಿಗಳು ನೀಡುವ ಭಾವಚಿತ್ರವುಳ್ಳ ಪಾಸ್‍ಬುಕ್, ಕಾರ್ಮಿಕ ಸಚಿವಾಲಯದ ಯೋಜನೆಯಡಿ ನೀಡಲಾದ ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪಾನ್ ಕಾರ್ಡ್, ಇಂಡಿಯನ್ ಪಾಸ್‍ಪೋರ್ಟ್, ಭಾವಚಿತ್ರದೊಂದಿಗೆ ಪಿಂಚಣಿ ದಾಖಲೆ.

Documents For Voting In Karnataka Assembly Elections 2023

ರಾಜ್ಯ/ ಕೇಂದ್ರ ಸರ್ಕಾರ/ ಸಾರ್ವಜನಿಕ ಉದ್ಯಮಗಳು ಅಥವಾ ಇತರೆ ಖಾಸಗಿ ಔದ್ಯಮಿಕ ಸಂಸ್ಥೆಗಳು ನೀಡುವ ಭಾವಚಿತ್ರವುಳ್ಳ ಸೇವಾ ಗುರುತಿನ ಚೀಟಿ, ಸಂಸದರು, ವಿಧಾನಸಭಾ ಹಾಗೂ ವಿಧಾನ ಪರಿಷತ್ತಿನ ಸದಸ್ಯರಿಗೆ ಸರ್ಕಾರ ನೀಡಿರುವ ಅಧಿಕೃತ ಗುರುತಿನ ಚೀಟಿ, ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ನೀಡಿರುವ ಯುಡಿಐಡಿ ಕಾರ್ಡ್.

ಎಷ್ಟು ಮತಗಟ್ಟೆಗಳು?; ಕರ್ನಾಟಕ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ನಾಮಪತ್ರಗಳ ಪರಿಶೀಲನೆ ಪೂರ್ಣಗೊಂಡು, ವಾಪಸ್ ಪಡೆಯುವ ಅವಧಿಯೂ ಮುಗಿದಿದೆ. 224 ಕ್ಷೇತ್ರದ ಚುನಾವಣಾ ಕಣದಲ್ಲಿ 2,613 ಅಭ್ಯರ್ಥಿಗಳು ಉಳಿದಿದ್ದಾರೆ. ಇದರಲ್ಲಿ ಬಿಜೆಪಿಯ 224, ಕಾಂಗ್ರೆಸ್‌ನ 223 ಮತ್ತು ಜೆಡಿಎಸ್‌ನ 207 ಅಭ್ಯರ್ಥಿಗಳು ಪ್ರಮುಖರು. 2,427 ಪುರುಷ, 184 ಮಹಿಳೆಯರು ಮತ್ತು ಇಬ್ಬರು ಇತರೆ ಮತದಾರರು ಇದ್ದಾರೆ.

ಉಳಿದಂತೆ ಎಎಪಿ 209, ಬಿಎಸ್‌ಪಿ 133, ಜೆಡಿಯು 8, ಸಿಪಿಐಎಂ 4, ಎನ್‌ಸಿಪಿ 2, ನೋಂದಾಯಿತ ಪಕ್ಷಗಳು 685 ಮತ್ತು 918 ಪಕ್ಷೇತರರು ಕಣದಲ್ಲಿದ್ದಾರೆ. ಕಾಂಗ್ರೆಸ್‌ನ 18, ಬಿಜೆಪಿಯ 14, ಜೆಡಿಎಸ್‌ನ ಇಬ್ಬರು ಬಂಡಾಯ ಅಭ್ಯರ್ಥಿಗಳಾಗಿ ಕಣದಲ್ಲಿ ಉಳಿದಿದ್ದಾರೆ.

ಮತದಾನಕ್ಕಾಗಿ ಒಟ್ಟು 58,282 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗುತ್ತದೆ. ಇದರಲ್ಲಿ ನಗರ ಪ್ರದೇಶಗಳಲ್ಲಿ 24,063 ಮತ್ತು ಗ್ರಾಮಾಂತರ ಪ್ರದೇಶದಲ್ಲಿ 34,219 ಮತಗಟ್ಟೆಗಳು. ಮಹಿಳೆರು ನಿರ್ವಹಣೆ ಮಾಡುವ 1320 ಮತಗಟ್ಟೆ, ಯುವಕರು ನಿರ್ವಹಣೆ ಮಾಡುವ 224 ಮತ್ತು 240 ಮಾದರಿ ಮತಗಟ್ಟೆಗಳಾಗಿವೆ. 29,141 ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಸೌಲಭ್ಯ ಇರಲಿದೆ.

ಮತದಾನದ ದಿನ ಈಗಾಗಲೇ ರಜೆ ಘೋಷಣೆ ಮಾಡಲಾಗಿದೆ. ಖಾಸಗಿ ಕಂಪನಿಗಳು ಸಹ ರಜೆ ನೀಡಬೇಕು ಎಂದು ಚುನಾವಣಾ ಆಯೋಗ ಸೂಚನೆ ನೀಡಿದೆ. ಅಲ್ಲದೇ ಮತದಾನ ಪ್ರಮಾಣವನ್ನು ಹೆಚ್ಚಿಸಲು ಆಯೋಗದ ವತಿಯಿಂದ ವಿವಿಧ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ. ಮೇ 9ರ ತನಕ ವಿವಿಧ ಕಾರ್ಯಕ್ರಮಗಳ ಮೂಲಕ ಜನರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಸ್ವೀಪ್ ಸಮಿತಿ ಮೂಲಕ ಜನರು ಮೇ 10ರಂದು ತಪ್ಪದೇ ಮತದಾನ ಮಾಡುವಂತೆ ಅರಿವು ಮೂಡಿಸಲಾಗುತ್ತದೆ. ಏಪ್ರಿಲ್ 11ರ ತನಕ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅವಕಾಶ ನೀಡಲಾಗಿತ್ತು. ಪಟ್ಟಿಗೆ ಹೆಸರು ಸೇರ್ಪಡೆ ಮಾಡಿದವರಿಗೆ ಈ ಬಾರಿಯ ಚುನಾವಣೆಯಲ್ಲಿ ಮತದಾನ ಮಾಡಲು ಅವಕಾಶವಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+