ಆರ್ಕೆಸ್ಟ್ರಾ ನೋಡಿ ಬರುತ್ತಿದ್ದ ವಿದ್ಯಾರ್ಥಿನಿ ಗ್ಯಾಂಗ್ ರೇಪ್

ದೊಡ್ಡಬಳ್ಳಾಪುರ ತಾಲೂಕಿನ ಕನ್ನಮಂಗಲ ಗೇಟ್ ಬಳಿ ದುಷ್ಕರ್ಮಿಗಳು 15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ತಿಮ್ಮಸಂದ್ರದಲ್ಲಿ ಭಾನುವಾರ ರಾತ್ರಿ ಕನ್ನಡ ರಾಜ್ಯೋತ್ಸವ ನಿಮಿತ್ತ ಆಯೋಜಿಸಲಾಗಿದ್ದ ಆರ್ಕೆಸ್ಟ್ರಾ ಪ್ರೋಗ್ರಾಂ ನೋಡಿಕೊಂಡು ಬರುತ್ತಿದ್ದ ಈ ವಿದ್ಯಾರ್ಥಿನಿಯ ಮೇಲೆ ಕಾಮುಕರು ಅತ್ಯಾಚಾರ ನಡೆಸಿದ್ದಾರೆ ಎಂದು 'ಸುವರ್ಣ ನ್ಯೂಸ್' ವರದಿ ಮಾಡಿದೆ.
ಸಂತ್ರಸ್ತ ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ಸಂಬಂಧ 10 ಮಂದಿ ಆರೋಪಿಗಳನ್ನು ಬಂಧಿಸಿರುವ ದೊಡ್ಡಬೆಳವಂಗಲ ಪೊಲೀಸರು ತನಿಖೆ ನಡೆಸಿದ್ದಾರೆ. ಪೊಲೀಸರು ದುಷ್ಕರ್ಮಿಗಳ ವಿವರವನ್ನು ಬಹಿರಂಗಪಡಿಸಿಲ್ಲ.
ಆರೋಪಿಗಳು ಪರಿಚಿತರಾಗಿದ್ದು, ಕಾರ್ಯಕ್ರಮ ಮುಗಿದ ಮೇಲೆ ನನಗೆ ಕೋಲ್ಡ್ ಡ್ರಿಂಕ್ಸ್ ಕುಡಿಯಲು ಕೊಟ್ಟರು. ಆದರೆ ಅದರಲ್ಲಿ ಮತ್ತು ಬರಿಸುವ ಔಷಧ ಬೆರೆಸಿದ್ದರು. ನಾಲ್ಕು ಮಂದಿ ನನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಬಾಧಿತ ಬಾಲಕಿ ಪೊಲೀಸರಿಗೆ ತಿಳಿಸಿದ್ದಾಳೆ.
ಸಂತ್ರಸ್ತೆ ಪ್ರಸ್ತುತ ದೊಡ್ಡಬಳ್ಳಾಪುರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಕೆಯನ್ನು ಬೆಂಗಳೂರಿನ ವಿಕ್ಟೋರಿಯಾ ಅಸ್ಪತ್ರೆಗೆ ದಾಖಲಿಸುವ ಕಾರ್ಯ ನಡೆದಿದೆ.












Click it and Unblock the Notifications