ಲೋಕಾಯುಕ್ತದಲ್ಲೇ ಭ್ರಷ್ಟಾಚಾರ, ಮುಂದೇನು?

ಬೆಂಗಳೂರು, ಜೂ. 27 : ಭ್ರಷ್ಟ ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ದಾಳಿ ಮಾಡಿ ಸುದ್ದಿ ಮಾಡುತ್ತಿದ್ದ ಲೋಕಾಯುಕ್ತ ಈಗ ಭ್ರಷ್ಟಾಚಾರದ ಆರೋಪದಲ್ಲಿ ಸುದ್ದಿಯಲ್ಲಿದೆ. ತಮ್ಮ ಸಂಸ್ಥೆಯಲ್ಲಿನ ಭ್ರಷ್ಟಾಚಾರದ ಕುರಿತು ಸಿಸಿಬಿ ತನಿಖೆ ನಡೆಸುವುದಾಗಿ ಕರ್ನಾಟಕದ ಲೋಕಾಯುಕ್ತ ನ್ಯಾ.ಭಾಸ್ಕರರಾವ್ ಘೋಷಣೆ ಮಾಡಿದ್ದಾರೆ.

ಕರ್ನಾಟಕದಲ್ಲಿ ಭ್ರಷ್ಟಾಚಾರ ಪ್ರಕರಣಗಳ ತನಿಖೆ ನಡೆಸಲು ಇರುವ ಸಂಸ್ಥೆ ಲೋಕಾಯುಕ್ತ ಮಾತ್ರ. ಭ್ರಷ್ಟಾಚಾರ ಪ್ರಕರಣಗಳನ್ನು ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ತನಿಖೆ ನಡೆಸಬೇಕು. ಕೆಲವೊಂದು ರಾಜ್ಯಗಳಲ್ಲಿ ಭ್ರಷ್ಟಾಚಾರ ನಿಗ್ರಹದಳವಿದ್ದು, ಅದು ತನಿಖೆ ನಡೆಸುತ್ತದೆ. ಆದರೆ, ಕರ್ನಾಟಕದಲ್ಲಿ ಲೋಕಾಯುಕ್ತ ಮಾತ್ರವಿದೆ.

lokayukta

ಈಗ ಲೋಕಾಯುಕ್ತ ವಿರುದ್ಧವೇ ಭ್ರಷ್ಟಾಚಾರದ ಆರೋಪ ಕೇಳಿಬಂದಿದ್ದು, ಇದನ್ನು ಸಿಬಿಐ ಮಾತ್ರ ತನಿಖೆ ಮಾಡಬಹುದಾಗಿದೆ. ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಅವರು, ಈ ಪ್ರಕರಣದ ಬಗ್ಗೆ ಸಿಬಿಐ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ. [ಲೋಕಾಯುಕ್ತದಲ್ಲಿ ಕೋಟಿ ಡೀಲ್, ಸಿಸಿಬಿ ತನಿಖೆ]

ತನಿಖೆ ಕಥೆ ಏನು? : ಲೋಕಾಯುಕ್ತದ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿಬಂದಿದೆ. ಆದ್ದರಿಂದ ಈಗ ಸಂಸ್ಥೆ ಭ್ರಷ್ಟಾಚಾರ ಪ್ರಕರಣದ ತನಿಖೆ ಮುಂದುವರೆಸಬಹುದೇ ಎಂಬ ಪ್ರಶ್ನೆ ಎದ್ದಿದೆ?. ಲೋಕಾಯುಕ್ತದಲ್ಲಿನ ಅಧಿಕಾರಿಗಳು ನೀಡುವ ಮಾಹಿತಿ ಪ್ರಕಾರ ತನಿಖೆಯನ್ನು ನಿಲ್ಲಿಸುವಂತಿಲ್ಲ. ಲೋಕಾಯುಕ್ತ ತನ್ನ ಕೈಯಲ್ಲಿರುವ ಪ್ರಕರಣಗಳ ವಿಚಾರಣೆಯನ್ನು ಮುಂದುವರೆಸಬಹುದಾಗಿದೆ. [ಕರ್ನಾಟಕದಿಂದ ವರ್ಗಾವಣೆ ಬಯಸಿಲ್ಲ : ಸೋನಿಯಾ ನಾರಂಗ್]

ಸಿಸಿಬಿ ತನಿಖೆಗೆ ಆದೇಶ : ಲೋಕಾಯುಕ್ತ ಕಚೇರಿಯಲ್ಲಿ ನಡೆದಿದೆ ಎನ್ನಲಾದ ಹಣದ ಬೇಡಿಕೆ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಲಾಗುತ್ತದೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರರಾವ್ ಶುಕ್ರವಾರ ಹೇಳಿದ್ದಾರೆ.

ಲೋಕಾಯುಕ್ತ ಕಚೇರಿಯಲ್ಲಿಯೇ ಸರ್ಕಾರಿ ಅಧಿಕಾರಿಯೊಬ್ಬರ ಬಳಿ 1 ಕೋಟಿ ರೂ.ಗೆ ಬೇಡಿಕೆಯಿಟ್ಟ ಪ್ರಕರಣದ ಬಗ್ಗೆ ಸಿಸಿಬಿ ತನಿಖೆ ನಡೆಸಲಾಗುತ್ತದೆ. ತಮ್ಮ ಮೇಲಿನ ಆರೋಪ ಸಾಬೀತಾದರೆ ರಾಜೀನಾಮೆ ನೀಡುತ್ತೇನೆ' ಎಂದು ಅವರು ಘೋಷಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+