ರಾಜಸ್ಥಾನದಿಂದ ಬಂದಿದ್ದು ನಾಯಿ ಮಾಂಸನಾ? ಪರೀಕ್ಷಾ ವರದಿಯಲ್ಲಿ ಏನಿದೆ..?
ಬೆಂಗಳೂರು ಜುಲೈ 31: ಕೆಲ ದಿನಗಳ ಹಿಂದೆ ರಾಜಸ್ಥಾನದಿಂದ ಕರ್ನಾಟಕಕ್ಕೆ ನಾಯಿ ಮಾಂಸ ಸಾಗಾಣೆಯಾಗುತ್ತಿದೆ ಎಂಬ ಸುದ್ದಿ ಬಿರುಗಾಳಿಯಂತೆ ಹಬ್ಬಿತ್ತು. ರೈಲು ಬೋಗಿಗಳಲ್ಲಿ ಸಿಕ್ಕ ಬಾಕ್ಸ್‌ಗಳಲ್ಲಿ ನಾಯಿ ಮಾಂಸ ಪತ್ತೆಯಾಗಿದೆ ಎಂಬ ವರದಿಗಳು ಎಗ್ಗಿಲದೇ ವೈರಲ್ ಆಗಿದೆ. ಹೀಗಾಗಿ ರೈಲು ತಪಾಸಣೆ ವೇಳೆ ಸಿಕ್ಕ ಈ ಮಾಂಸವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಸದ್ಯ ಪರೀಕ್ಷೆ ವರದಿ ಹೊರಬಂದಿದೆ.
ಇತ್ತೀಚೆಗೆ ರಾಜಸ್ಥಾನದಿಂದ ಸರಬರಾಜಾಗುತ್ತಿದ್ದ ಮಾಂಸದ ಕುರಿತಾದ ಘಟನೆಗಳ ಹಿನ್ನೆಲೆಯಲ್ಲಿ ರೈಲುಗಳಲ್ಲಿ ಬಂದಿದ್ದ ಮಾಂಸದ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಗಳಿಗೆ ಕಳುಹಿಸಲಾಗಿತ್ತು. ಇದೀಗ ಪ್ರಯೋಗಾಲಯಗಳಿಂದ ಪರೀಕ್ಷಾ ವರದಿ ಬಂದಿದ್ದು ರಾಜಸ್ಥಾನದಿಂದ ಬಂದ ಮಾಂಸವು 'ಕುರಿ'ಯದ್ದೇ ಆಗಿದೆ ಎಂಬುದನ್ನು ಪ್ರಯೋಗಾಲಯವು ಖಚಿತಪಡಿಸಿದೆ.

ಈ ಹಿನ್ನೆಲೆಯಲ್ಲಿ ಯಾವುದೇ ಅನಗತ್ಯ ಗೊಂದಲ ಸೃಷ್ಟಿಸದಂತೆ ಮತ್ತು ಈ ಕುರಿತ ಗಾಳಿ ಸುದ್ದಿಗಳಿಗೆ ಕಿವಿಗೊಡದಂತೆ ನಾನು ಸಾರ್ವಜನಿಕರಲ್ಲಿ ವಿನಂತಿಸುತ್ತೇನೆ ಎಂದು ಸಚಿವ ದಿನೇಶ್ ಗುಂಡೂರಾವ್ ತಮ್ಮ ಎಕ್ಸ್ ಪೋಸ್ಟ್ ನಲ್ಲಿ ಪತ್ರಿಕಾ ಪ್ರಕಟಣೆ ಹಂಚಿಕೊಂಡಿದ್ದಾರೆ.
ದಿನೇಶ್ ಗುಂಡೂರಾವ್ ಅವರು ತಮ್ಮ ಎಕ್ಸ್ ಪೋಸ್ಟ್ ನಲ್ಲಿ ಹಂಚಿಕೊಂಡ ಪತ್ರಿಕಾ ಪ್ರಕಟಣೆಯಲ್ಲಿ ಈ ಬಗ್ಗೆ ಸ್ಪಷ್ಟ ಮಾಹಿತಿಯನ್ನು ನೀಡಲಾಗಿದೆ.
ಇತ್ತೀಚೆಗೆ ರಾಜಸ್ಥಾನದಿಂದ ಸರಬರಾಜಾಗುತ್ತಿದ್ದ ಮಾಂಸದ ಕುರಿತಾದ ಘಟನೆಗಳ ಹಿನ್ನೆಲೆಯಲ್ಲಿ ರೈಲುಗಳಲ್ಲಿ ಬಂದಿದ್ದ ಮಾಂಸದ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಗಳಿಗೆ ಕಳುಹಿಸಲಾಗಿತ್ತು.
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) July 31, 2024
ಇದೀಗ ಪ್ರಯೋಗಾಲಯಗಳಿಂದ ಪರೀಕ್ಷಾ ವರದಿ ಬಂದಿದ್ದು ರಾಜಸ್ಥಾನದಿಂದ ಬಂದ ಮಾಂಸವು 'ಕುರಿ'ಯದ್ದೇ ಆಗಿದೆ ಎಂಬುದನ್ನು ಪ್ರಯೋಗಾಲಯವು ಖಚಿತಪಡಿಸಿದೆ. ಈ… pic.twitter.com/yRDP6w6VsZ












Click it and Unblock the Notifications