ಅಳುಮುಂಜಿ ಆಗ್ಬೇಡಿ: ಸಿದ್ದರಾಮಯ್ಯಗೆ ಶೋಭಾ ಕರಂದ್ಲಾಜೆ ಸಲಹೆ!

Recommended Video

      ಸಿದ್ದರಾಮಯ್ಯನವರಿಗೆ ಅಳದಂತೆ ಸಲಹೆ ನೀಡಿದ ಶೋಭಾ ಕರಂದ್ಲಾಜೆ

      ಬೆಂಗಳೂರು, ಮೇ 17: 'ಬಳೆ ತೊಟ್ಟುಕೊಳ್ಳಿ' ಎಂದು ಸಿದ್ದರಾಮಯ್ಯ ಅವರ ಕೋಪಕ್ಕೆ ಕಾರಣರಾಗಿದ್ದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ, ಸಿದ್ದರಾಮಯ್ಯ ಅವರ ಉತ್ತರಕ್ಕೆ ಪ್ರತ್ಯುತ್ತರ ನೀಡಿದ್ದಾರೆ.

      "ಇಂದಿರಾ ಗಾಂಧಿ, ನಿರ್ಮಲಾ ಸೀತಾರಾಮ್ ಅಥವಾ ಸುಷ್ಮಾ ಸ್ವರಾಜ್ ಅವರ ಹೆಜ್ಜೆಗುರುತನ್ನು ಅನುಸರಿಸಿ. ಯಾವಾಗಲೂ ನಮ್ಮ ಶಾಸಕರು ಬಿ ಎಸ್ ಯಡಿಯೂರಪ್ಪ ಅವರ ಹಿಂದೆ ಹೋಗುತ್ತಿದ್ದಾರೆ ಎಂದು ಅಳುವುದನ್ನು ಬಿಡಿ. ಮತ್ತೊಬ್ಬರನ್ನು ತೆಗಳುವ ಮೊದಲು ನಿಮ್ಮ ಶಾಸಕರನ್ನು ನೀವೇ ನಿಯಂತ್ರಿಸಿ. ಕೇವಲ ಅಳುಮುಂಜಿ ಆಗ್ಬೇಡಿ!" ಎಂದು ಶೋಭಾ ಕರಂದ್ಲಾಜೆ ಟ್ವೀಟ್ ಮಾಡಿದ್ದಾರೆ.

      ಹುಬ್ಬಳ್ಳಿಯಲ್ಲಿ ಮಾತನಾಡುತ್ತಿದ್ದ ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, "ನಿಮ್ಮ ಪಕ್ಷದ ಶಾಸಕರನ್ನು ಹಿಂಡಿದಿಟ್ಟುಕೊಳ್ಳುವುದು ನಿಮ್ಮ ಕೆಲಸ. ಅವರನ್ನು ಹಿಡಿದಿಟ್ಟುಕೊಳ್ಳಲು ಆಗದ ನೀವು ದುರ್ಬಲರು. ಕೆಲಸ ಮಾಡಲು ಸಾಧ್ಯವಾಗದಿದ್ದರೆ ಕೈಗೆ ಬಳೆ ಹಾಕಿಕೊಳ್ಳಿ" ಎಂಬ ಹೇಳಿಕೆ ನೀಡಿದ್ದರು.

      Dont cry out every time: Shobha Karandlaje to Siddaramaiah

      ಅದಕ್ಕೆ ಉತ್ತರ ನೀಡಿದ್ದ ಸಿದ್ದರಾಮಯ್ಯ, "ಕುಮಾರಿ ಶೋಭಾ ಕರಂದ್ಲಾಜೆ ಅವರೇ, ಓರ್ವ ಹೆಣ್ಣಾಗಿ ತಾವು ಮಹಿಳಾ ಸಂಕುಲವೇ ಅಸಮರ್ಥರು ಎಂಬಂತೆ ಕೀಳು ಹೇಳಿಕೆ ನೀಡಿರುವುದು ಸರಿಯಲ್ಲ. ಸಂಸದರಾಗಿ ತಾವೊಬ್ಬರು ಸರಿಯಾಗಿ ಕೆಲಸ ಮಾಡಿಲ್ಲ ಎಂಬ ಮಾತ್ರಕ್ಕೆ ಬಳೆ ತೊಟ್ಟವರೆಲ್ಲ ಕೆಲಸ ಮಾಡಲಾಗದವರು ಎಂದಲ್ಲ. ನೆನಪಿರಲಿ, ಚೆನ್ನಮ್ಮ,ಓಬವ್ವ, ಇಂದಿರಾಗಾಂಧಿ ಇವರೆಲ್ಲ ಬಳೆ ತೊಟ್ಟೆ ಸಾಧನೆಯ ಉತ್ತುಂಗಕ್ಕೇರಿದವರು" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+