ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡೊನೇಷನ್ ಗೇಟ್: ದಿನೇಶ್ ಗುಂಡೂರಾವ್ ವಿರುದ್ಧ ಎಫ್ಐಆರ್

By Sachhidananda Acharya
|
Google Oneindia Kannada News

ಬೆಂಗಳೂರು, ಫೆಬ್ರವರಿ 2: ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ 'ಡೊನೇಷನ್ ಗೇಟ್' ಕಿತ್ತಾಟ ನಿಲ್ಲುವಂತೆ ಕಾಣಿಸುತ್ತಿಲ್ಲ. ಇದೀಗ ಸುಳ್ಳು ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಮೇಲೆ ಲೆಹರ್ ಸಿಂಗ್ ದೂರು ನೀಡಿದ್ದು ಎಫ್ಐಆರ್ ದಾಖಲಾಗಿದೆ.

ವಿಧಾನಪರಿಷತ್ ಸದಸ್ಯ ಲೆಹರ್ ಸಿಂಗ್ ಮನೆಯಲ್ಲಿ ಡೈರಿ ದೊರೆತಿದೆ ಎಂದು ಸಾರ್ವಜನಿಕವಾಗಿ ಸುಳ್ಳು ಆರೋಪ ಮಾಡಿ, ಮಾಧ್ಯಮಗಳಿಗೆ ತಪ್ಪು ಮಾಹಿತಿ ನೀಡಿ ದಿನೇಶ್ ಗುಂಡೂರಾವ್ ನನ್ನ ತೇಜೋವಧೆ ಮಾಡಿದ್ದಾರೆ ಎಂದು ಲೆಹರ್ ಸಿಂಗ್ ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.[ಡೈರಿ ನನ್ನದ್ದಲ್ಲ, ಇದೆಲ್ಲ ದಿನೇಶ್ ಗುಂಡೂರಾವ್ ಪಿತೂರಿ: ಲೆಹರ್]

Donation Gate: FIR filed against Dinesh Gundurao
ಲೆಹರ್ ಸಿಂಗ್ ದೂರು ಆಧರಿಸಿ ಐಪಿಸಿ ಸೆಕ್ಷನ್ 465-ಪೋರ್ಜರಿ ದಾಖಲೆ ಸೃಷ್ಟಿ, ಸೆಕ್ಷನ್ 469 - ಪೋರ್ಜರಿ ದಾಖಲೆ ಸೃಷ್ಟಿಸಿ ವ್ಯಕ್ತಿಯೊಬ್ಬರ ಗೌರವಕ್ಕೆ ಧಕ್ಕೆ ತರುವುದು ಹಾಗೂ ಸೆಕ್ಷನ್ 471-ದಾಖಲೆ ನಕಲಿ ಎಂದು ತಿಳಿದಿದ್ದರೂ ಅಸಲಿ ಎಂದು ತೋರಿಸುವುದರ ಅನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. [ಕೌರ್-ದಾವೂದ್ ಹೋಲಿಕೆ; ಪ್ರತಾಪ್ ಸಿಂಹ ವಿರುದ್ದ ಪೊಲೀಸರಿಗೆ ದೂರು]

ಪ್ರಕರಣದಲ್ಲಿ ದಿನೇಶ್ ಗುಂಡೂರಾವ್ ಎರಡನೇ ಆರೋಪಿಯಾಗಿದ್ದಾರೆ. ಮೊದಲ ಆರೋಪಿ ಅಪರಿಚಿತರು ಎಂದು ಉಲ್ಲೇಖಿಸಲಾಗಿದೆ.[ಕಾಂಗ್ರೆಸ್ 'ಸತ್ಯಮೇವ ಜಯತೆ' ಬಲೂನಿಗೆ 'ಡೊನೇಶನ್ ಗೇಟ್' ಪಿನ್ ಚುಚ್ಚಿದ ಬಿಜೆಪಿ]

ನನ್ನ ಮನೆಯಿಂದ ಜಪ್ತಿ ಮಾಡಲಾದ ಡೈರಿಯಲ್ಲಿ ಕೆಲ ವ್ಯಕ್ತಿಗಳಿಗೆ ಸುಮಾರು 390 ಕೋಟಿ ರೂಪಾಯಿ ಪಾವತಿ ಮಾಡಲಾಗಿದೆ ಎಂದು ಟಿವಿಗಳಲ್ಲಿ ಮಾಧ್ಯಮಗಳಲ್ಲಿ ಬರುತ್ತಿದೆ. ಇದನ್ನು ಮಾಧ್ಯಮಗಳಿಗೆ ಪ್ರದರ್ಶಿಸಿದವರು ದಿನೇಶ್ ಗುಂಡೂರಾವ್. ಆದರೆ ಅದರಲ್ಲಿರುವ ಅಕ್ಷರ ಮತ್ತು ಸಹಿ ನನ್ನದಲ್ಲ. ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಲೆಹರ್ ಸಿಂಗ್ ದೂರಿನಲ್ಲಿ ತಿಳಿಸಿದ್ದಾರೆ.

English summary
An FIR filled against Karnataka Pradesh Congress Committee Executive President Dinesh Gundurao by BJP MLC Lehar Singh in Sanjayangar police station, Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X