ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿದ್ಯಾರ್ಥಿಗಳ ಪೋಷಕರಿಂದ ದೇಣಿಗೆ; ಆದೇಶ ಹಿಂಪಡೆಯಲು ಸಿಪಿಐಎಂ ಆಗ್ರಹ

|
Google Oneindia Kannada News

ಬೆಂಗಳೂರು, ಅ. 21: ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ನಿರ್ವಹಣೆಗಳಿಗಾಗಿ ವಿದ್ಯಾರ್ಥಿಗಳ ಪೋಷಕರಿಂದ ಮಾಸಿಕ ಕೊಡುಗೆಯನ್ನು ಪಡೆಯುವ ಮತ್ತು ಆ ಮೂಲಕ ಬಡವರ ಹಾಗೂ ಮಹಿಳಾ ಶಿಕ್ಷಣಕ್ಕೆ ಕುತ್ತು ತರಲಿರುವ, ಸರಕಾರಿ ಸುತ್ತೋಲೆಯನ್ನು ಈ ಕೂಡಲೇ ಹಿಂಪಡೆಯಬೇಕು ಎಂದು ಸಿಪಿಐ(ಎಂ) ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಿಪಿಐ(ಎಂ), ಈ ಸುತ್ತೋಲೆ ಸಾರ್ವಜನಿಕ ಶಿಕ್ಷಣವನ್ನು ಹಾಳು ಮಾಡಿ ಖಾಸಗಿ ಶಿಕ್ಷಣವನ್ನು ಬಲಗೊಳಿಸುವ ದುರುದ್ದೇಶ ಹೊಂದಿದೆ ಎಂದು ಆರೋಪಿಸಿದೆ.

ಕಮಿಷನ್ ಹೆಸರಲ್ಲಿ ಖಜಾನೆ ಲೂಟಿ, ಈಗ ಬಡ ಮಕ್ಕಳ ಪೋಷಕರ ಜೇಬಿಗೂ ಕತ್ತರಿ!ಕಮಿಷನ್ ಹೆಸರಲ್ಲಿ ಖಜಾನೆ ಲೂಟಿ, ಈಗ ಬಡ ಮಕ್ಕಳ ಪೋಷಕರ ಜೇಬಿಗೂ ಕತ್ತರಿ!

"ಕರ್ನಾಟಕ ಸರಕಾರ ದಿನಾಂಕ 19.10.2022 ರಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಕಛೇರಿ ಮೂಲಕ ಹೊರಡಿಸಲಾದ ಸುತ್ತೋಲೆಯು ಸಾರ್ವಜನಿಕ ಶಿಕ್ಷಣವನ್ನು ದುರ್ಬಲಗೊಳಿಸುವ ಹಾಗೂ ಆ ಮೂಲಕ ಬಡವರು, ದಲಿತರು ಹಾಗೂ ಮಹಿಳಾ ಶಿಕ್ಷಣವನ್ನು ನಿರಾಕರಿಸುವ ಮತ್ತು ಸಾರ್ವಜನಿಕ ಶಿಕ್ಷಣವನ್ನು ಕಳಚಿಹಾಕಿ ಖಾಸಗಿ ಶಿಕ್ಷಣವನ್ನು ಬಲಗೊಳಿಸುವ, ದುರುದ್ದೇಶದಿಂದ ಹೊರಡಿಸಿದ ಸುತ್ತೋಲೆಯಾಗಿದೆ. ತಕ್ಷಣವೇ ಸದರಿ ಸುತ್ತೋಲೆಯನ್ನು ವಾಪಾಸು ಪಡೆಯುವಂತೆ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸವಾದಿ) ಕರ್ನಾಟಕ ರಾಜ್ಯ ಸಮಿತಿ ಬಲವಾಗಿ ಒತ್ತಾಯಿಸುತ್ತದೆ" ಎಂದು ಹೇಳಿದೆ.

ಬಲವಂತವಿಲ್ಲ ಎಂದರೂ ಬಲವಂತವಾಗುತ್ತದೆ!

ಬಲವಂತವಿಲ್ಲ ಎಂದರೂ ಬಲವಂತವಾಗುತ್ತದೆ!

"ಈ ಸುತ್ತೋಲೆಯು, ಸರಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಶೈಕ್ಷಣಿಕ ಸ್ಥಿತಿಗತಿಯನ್ನು ಉತ್ತಮ ಪಡಿಸಲು ಹಾಗೂ ಸೌಲಭ್ಯಗಳಿಂದ ಬಲ ಪಡಿಸಲು, ವಿದ್ಯಾರ್ಥಿಗಳ ಪೋಷಕರುಗಳಿಂದ ಮಾಸಿಕ ತಲಾ 100 ರೂ.ಗಳ ಕೊಡುಗೆ ಅಥವಾ ದಾನಗಳನ್ನು ಸಂಗ್ರಹಿಸುವಂತೆ ಶಾಲಾ ಮೇಲುಸ್ತುವಾರಿಗಳಿಗೆ ಮತ್ತು ಆ ಮೂಲಕ ಅಪ್ರತ್ಯಕ್ಷವಾಗಿ ಶಾಲಾ ಶಿಕ್ಷಕ ಸಿಬ್ಬಂದಿ ವರ್ಗದವರಿಗೆ ಆದೇಶಿಸುತ್ತದೆ. ಈ ಕೊಡುಗೆಯನ್ನು ಮನವೊಲಿಸಿ ಪಡೆಯಬೇಕೇ ಹೊರತು ಬಲವಂತವಾಗಿಯಲ್ಲವೆಂದು ಸುತ್ತೋಲೆಯು ದಪ್ಪಕ್ಷರಗಳಲ್ಲಿ ಹೇಳಿದರೂ, ಪರಿಣಾಮ ಒಂದೇ ಆಗಿದೆ. ವಿದ್ಯಾರ್ಥಿಗಳ ಪೋಷಕರು ವಾರ್ಷಿಕ ಪ್ರತಿ ವರ್ಷ 1000 ರೂ. ಗಳ ಕೊಡುಗೆ ನೀಡುವಂತೆ ಇದು ಒತ್ತಾಯಿಸುತ್ತದೆ" ಎಂದು ಸಿಪಿಐಎಂ ಆರೋಪಿಸಿದೆ.

ಬಡವರ ವಿರೋಧಿ ಕೆಲಸ ಮಾಡುವ ಸರ್ಕಾರದ ಸುತ್ತೋಲೆ

ಬಡವರ ವಿರೋಧಿ ಕೆಲಸ ಮಾಡುವ ಸರ್ಕಾರದ ಸುತ್ತೋಲೆ

"ಈ ಕೊಡುಗೆಗಳ ಮೂಲಕ ಶಾಲೆ ಹಾಗೂ ಶೌಚಾಲಯಗಳ ಸ್ವಚ್ಛತೆ, ಕುಡಿಯುವ ನೀರು ಹಾಗೂ ವಿದ್ಯುತ್ ಬಿಲ್ ಪಾವತಿಸಲು ಮತ್ತು ಆಟದ ಮೈದಾನದ ಸುಧಾರಣೆ, ಗಣಕ ಯಂತ್ರಗಳ ರಿಪೇರಿ, ಬೋಧನೋಪಕರಣಗಳು, ಅಗತ್ಯವಾದ ಅತಿಥಿ ಶಿಕ್ಷಕರ ವೇತನಗಳು ಸೇರಿದಂತೆ, ಮೊದಲ ಹಾಗೂ ಎರಡನೇ ಆಧ್ಯತೆಯಲ್ಲಿ ಪಟ್ಟಿ ಮಾಡಿದ ಸುಮಾರು 17 ಅಗತ್ಯಗಳಿಗಾಗಿ ಖರ್ಚು ಮಾಡಲು ಮೇಲುಸ್ತುವಾರಿ ಸಮಿತಿಗಳಿಗೆ ಸೂಚಿಸುತ್ತದೆ. ಹೀಗಾಗಿ ಸರ್ಕಾರ ತನ್ನ ಜವಾಬ್ದಾರಿಗಳಿಂದ ನುಣುಚಿಕೊಳ್ಳುತ್ತದೆ" ಎಂದಿದೆ.

ಒಂದೆಡೆ, ಈ ಸುತ್ತೋಲೆಯು ಸರಕಾರಿ ಪ್ರಾಥಮಿಕ ಹಾಗು ಪ್ರೌಢ ಶಾಲೆಗಳಲ್ಲಿ ಶೈಕ್ಷಣಿಕ ಕೆಲಸಗಳಿಗೆ ಪೂರಕವಾದ ಸೌಲಭ್ಯಗಳಿಲ್ಲವೆಂದು ಮತ್ತು ಅವುಗಳಿಗಾಗಿ ಸರಕಾರ ನೆರವು ನೀಡದೆಂಬ ಸಂದೇಶವನ್ನು ಸಾರ್ವಜನಿಕರಿಗೆ ರವಾನಿಸುತ್ತದೆ. ಈ ಮೂಲಕ ಸೌಲಭ್ಯಗಳಿಲ್ಲದ ಶಾಲೆಗಳಿಗೆ ನಿಮ್ಮ ಮಕ್ಕಳನ್ನು ಯಾಕೆ ಸೇರಿಸುತ್ತೀರೆಂಬ ಪ್ರಶ್ನೆಯನ್ನು ಎಸೆಯುತ್ತದೆ. ಹೀಗೆಕ ಸಾರ್ವಜನಿಕ ಶಿಕ್ಷಣವನ್ನು ದುರ್ಬಲಗೊಳಿಸುವ ಹಾಗೂ ಶಿಕ್ಷಣ ಪಡೆಯ ಬೇಕೆಂಬುವವರನ್ನು ಖಾಸಗಿ ಶಿಕ್ಷಣ ಸಂಸ್ಥೆಗಳ ಕಡೆ ದೂಡುವ, ಜನ ಹಾಗೂ ಬಡವರ ವಿರೋಧಿ ಕೆಲಸವನ್ನು ಮಾಡುತ್ತದೆ ಎಂದು ಕಿಡಿಕಾರಿದೆ.

ಸುತ್ತೋಲೆಯಿಂದ ಖಾಸಗಿ ಸಂಸ್ಥೆಗಳಲ್ಲಿ ಲೂಟಿಗೆ ನೆರವು

ಸುತ್ತೋಲೆಯಿಂದ ಖಾಸಗಿ ಸಂಸ್ಥೆಗಳಲ್ಲಿ ಲೂಟಿಗೆ ನೆರವು

ಈ ಸುತ್ತೋಲೆಯು ಖಾಸಗಿ ಶಿಕ್ಷಣ ಸಂಸ್ಥೆಗಳು ಯಾವ ಯಾವ ವಿಷಯಗಳ ಮೇಲೆ ಹೊಸದಾಗಿ ಕೊಡುಗೆಗಳನ್ನು ಪಡೆಯಬಹುದೆಂಬುದನ್ನು ಅಪ್ರತ್ಯಕ್ಷವಾಗಿ ಹೇಳುತ್ತಾ ಖಾಸಗಿ ಶಿಕ್ಷಣಾರ್ಥಿಗಳ ಲೂಟಿಗೆ ನೆರವಾಗುತ್ತದೆ.

"ಮತ್ತೊಂದು ಕಡೆ, ಈ ಸುತ್ತೋಲೆಯು ಬಡವರು, ದಲಿತರು, ಮಹಿಳಾ ಶಿಕ್ಷಣಕ್ಕೆ ಪೂರಕವಾಗಿದ್ದ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಸೌಲಭ್ಯಗಳಿರುವುದಿಲ್ಲ ಮತ್ತು ಕನಿಷ್ಟ ಸೌಲಭ್ಯಗಳು ಬೇಕೆಂದರೂ ನೀವು ಕೊಡುಗೆ ನೀಡಬೇಕು ಎಂದು ಒತ್ತಾಯಿಸುತ್ತದೆ. ಇದು ಸಂವಿಧಾನ ನೀಡಿರುವ 14 ವರ್ಷದ ವರೆಗಿನ ಉಚಿತ ಶಿಕ್ಷಣದ ಹಕ್ಕನ್ನು ಉಲ್ಲಂಘಿಸುತ್ತದೆ" ಎಂದು ಒತ್ತಿ ಹೇಳಿದೆ.

ಬಡ ಮಕ್ಕಳಿಗೆ ಮರೀಚಿಕೆಯಾಗಲಿದೆ ಶಿಕ್ಷಣ!

ಬಡ ಮಕ್ಕಳಿಗೆ ಮರೀಚಿಕೆಯಾಗಲಿದೆ ಶಿಕ್ಷಣ!

ಇನ್ನು ಮುಂದೆಯೂ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಸಿಬ್ಬಂದಿ ಮತ್ತು ಶಿಕ್ಷಕರನ್ನು ಭರ್ತಿ ಮಾಡುವುದಿಲ್ಲ. ಮಾತ್ರವಲ್ಲಾ, ಹೊಸದಾಗಿ ಖಾಲಿಯಾಗುವ ಹುದ್ದೆಗಳನ್ನು ಸರಕಾರ ತುಂಬುವುದಿಲ್ಲ. ಮುಂದೆ ಸಿಬ್ಬಂದಿಗಳ ಕೊರತೆ , ಇತರೆ ಸೌಲಭ್ಯಗಳು ಬೇಕೆನ್ನುವಾಗ ನೀವುಗಳೇ ಕೊಡುಗೆ ನೀಡುವ ಮೂಲಕ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಿ ಹಾಗೂ ಇತರೆ ಸೌಲಭ್ಯಗಳನ್ನು ಪಡೆದುಕೊಳ್ಳಿ ಎಂದು ಹೇಳುತ್ತದೆ. ಇದರಿಂದಾಗಿ, ಕೊಡುಗೆ ನೀಡಲಾಗದ ಸುಮಾರು 1.5 ಕೋಟಿಗೂ ಅಧಿಕ ಸಂಖ್ಯೆಯ ಬಿಪಿಎಲ್ ಹಾಗೂ ಅಂತ್ಯೋದಯ ಮತ್ತು ಎಪಿಎಲ್ ಕುಟುಂಬಗಳ ಮಕ್ಕಳಿಗೆ ಇನ್ನು ಮುಂದೆ ಶಿಕ್ಷಣವೆಂಬುದು ಮರೀಚಿಕೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದೆ.

ಕೇರಳದ ಎಡ ಮತ್ತು ಪ್ರಜಾಸತ್ತಾತ್ಮಕ ರಂಗದ ಸರಕಾರ ಶಿಕ್ಷಣ ರಂಗದಲ್ಲಿ ಸಾರ್ವಜನಿಕ ಬಂಡವಾಳ ತೊಡಗಿಸುವಿಕೆಯನ್ನು ಹೆಚ್ಚಿಸುವ ಮೂಲಕ ಗುಣಮಟ್ಟದ ಶಿಕ್ಷಣ ಹಾಗೂ ಸೌಲಭ್ಯಗಳನ್ನು ಒದಗಿಸಿದೆ. ಈ ಮೂಲಕ ಖಾಸಗಿ ಶಿಕ್ಷಣ ಸಂಸ್ಥೆಗಳ ದಶಲಕ್ಷಾಂತರ ವಿದ್ಯಾರ್ಥಿಗಳು ಸರಕಾರಿ ಶಾಲೆಗಳಲ್ಲಿ ಪ್ರವೇಶ ಪಡೆಯುವಂತಹ ಪರಿಸ್ಥಿತಿಯನ್ನು ನಿರ್ಮಿಸಿದೆ. ಅದರೇ ತಮ್ಮ ಸರ್ಕಾರ ತದ್ವಿರುದ್ದವಾಗಿ ನಡೆದುಕೊಳ್ಳುತ್ತಿರುವುದು ತೀವ್ರ ಖಂಡನೀಯ ಎಂದು ಸಿಪಿಐಎಂ ಹೇಳಿದೆ.

ಈ ಕೂಡಲೇ, ಈ ಸಂವಿಧಾನ ವಿರೋಧಿ ಹಾಗೂ ಬಡವರ, ದಲಿತರ ಮತ್ತು ಮಹಿಳಾ ವಿರೋಧಿಯಾದ ಸುತ್ತೋಲೆಯನ್ನು ವಾಪಾಸು ಪಡೆಯಬೇಕು. ಅದೇ ರೀತಿ, ಸರ್ಕಾರದ ಯಾವುದೇ ಶಾಲೆ ಮುಚ್ಚದಂತೆ ಮತ್ತು ಪ್ರತಿಯೊಂದು ಶಾಲೆಯು ಉತ್ತಮ ಗುಣಮಟ್ಟದ ಶಿಕ್ಷಣ ಹಾಗೂ ಸೌಲಭ್ಯಗಳನ್ನು ಒದಗಿಸಲು, ಅಗತ್ಯ ಸಾರ್ವಜನಿಕ ಬಂಡವಾಳವನ್ನು ತೊಡಗಿಸುವಂತೆ ಸಿಪಿಐ(ಎಂ) ಒತ್ತಾಯಿಸಿದೆ.

English summary
Collecting Donations from government school students parents, CPIM demands withdrawal of bjp government order. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X