ನಿಮ್ಹಾನ್ಸ್ ಸೇರಬೇಕಾದ ಗಿರಾಕಿಗಳು ಹೇಳಿದ್ದಕ್ಕೆಲ್ಲ ಪ್ರತಿಕ್ರಿಯೆ ನೀಡಲ್ಲ: ರಮೇಶ್ ಜಾರಕಿಹೊಳಿಗೆ ಡಿಕೆಶಿ ತಿರುಗೇಟು

ಚುನಾವಣಾ ಹೊಸ್ತಲಿಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನಡುವೆ ಜಟಾಪಟಿ ಏರ್ಪಟ್ಟಿದ್ದು, ಮೆಂಟಲ್‌ ಗಿರಾಕಿ ಬಗ್ಗೆ ಮಾತನಾಡಲ್ಲ ಎಂದು ಡಿ ಕೆ ಶಿವಕುಮಾರ್‌ ಕಿಡಿಕಾರಿದ್ದಾರೆ

ಬೆಂಗಳೂರು, ಮಾರ್ಚ್13:‌ ಕಾಂಗ್ರೆಸ್ ಪಕ್ಷದ ಕುರಿತು ಆಧಾರರಹಿತ ಆರೋಪ ಮಾಡುತ್ತಾ ಬಾಯಿಗೆ ಬಂದಂತೆ ಮಾತನಾಡುವ ಮೆಂಟಲ್ ಗಿರಾಕಿಗಳ ಹೇಳಿಕೆ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ವಿರುದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಪಕ್ಷ ಹಿನಾಯ ಪರಿಸ್ಥಿತಿಯಲ್ಲಿದ್ದು, ಬಿಜೆಪಿ ಸಚಿವರಿಗೆ ಸಿ.ಡಿ. ತೋರಿಸಿ ಪಕ್ಷಕ್ಕೆ ಕರೆದುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ರಮೇಶ್‌ ಜಾರಕಿಹೊಳಿ ಹೇಳಿಕೆ ಕುರಿತು ಡಿ ಕೆ ಶಿವಕುಮಾರ್‌ ಮಾತನಾಡಿ, ಬಿಜೆಪಿ ಪಕ್ಷದಲ್ಲಿ ಆಂತರಿಕವಾಗಿ ಏನೇನಾಗುತ್ತಿದೆಯೋ ಅದನ್ನು ಮೊದಲು ನೋಡಿಕೊಳ್ಳಲಿ. ನಿಮ್ಹಾನ್ಸ್ ಸೇರಬೇಕಾದ ಗಿರಾಕಿಗಳು ಹೇಳಿದ್ದಕ್ಕೆಲ್ಲ ನಾನು ಪ್ರತಿಕ್ರಿಯಿಸುವುದಿಲ್ಲ. ಅವರನ್ನು ಆಸ್ಪತ್ರೆಗೆ ಸೇರಿಸುವುದು ಉತ್ತಮ ಎಂದು ತಿರುಗೇಟು ನೀಡಿದರು.

Dont Ask Me About Mental Case Says KPCC president DK Shivakumar

ಡಿ.ಕೆ. ಶಿವಕುಮಾರ್ ಅವರ ಕೈಗೆ ರಾಜ್ಯ ಸಿಕ್ಕರೆ ಡಿ.ಕೆ. ಶಿವಕುಮಾರ್ ಟೋಲ್ ಎಂಬ ಮತ್ತೊಂದು ಟೋಲ್ ಹಾಕುತ್ತಾರೆ ಎಂಬ ರಮೇಶ್ ಜಾರಕಿಹೊಳಿ ಅವರ ಆರೋಪದ ಬಗ್ಗೆ ಪ್ರಶ್ನಿಸಿದಾಗ, 'ಟೋಲ್ ವಿಚಾರವಾಗಿ ಮಾತನಾಡುವುದೇ ಆದರೆ, ಸದ್ಯಕ್ಕೆ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಟೋಲ್ ವಿಚಾರವಾಗಿ ಮಾತನಾಡೋಣ. ಮಿಕ್ಕ ವಿಚಾರವನ್ನು ನಂತರ ಮಾತನಾಡೋಣ ಎಂದರು.

ಧೃವನಾರಾಯಣ ಅವರ ಪುತ್ರನಿಗೆ ಟಿಕೆಟ್ ನೀಡುವಂತೆ ಒತ್ತಡ ಕುರಿತು ಮಾತನಾಡಿ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಧೃವನಾರಾಯಣ ಅವರ ಕುಟುಂಬಕ್ಕೆ ಆಪ್ತರಾಗಿದ್ದಾರೆ. ಇನ್ನು ಪಕ್ಷದ ಟಿಕೆಟ್ ಹಂಚಿಕೆ ವಿಚಾರವಾಗಿ ಅವರು ಅಂತಿಮ ತೀರ್ಮಾನ ಮಾಡಲಿದ್ದಾರೆ. ಪಕ್ಷದ ನಿಷ್ಠಾವಂತ ನಾಯಕರಾದ ಧೃವನಾರಾಯಣ ಅವರ ವಿಚಾರದಲ್ಲಿ ನಾನು ಪ್ರಾಮಾಣಿಕವಾಗಿ ನಮ್ಮ ನಾಯಕರಿಗೆ ಯಾವ ಸಲಹೆ ನೀಡಬೇಕೋ ನೀಡಿದ್ದೇನೆ.

Dont Ask Me About Mental Case Says KPCC president DK Shivakumar

ಧೃವನಾರಾಯಣ ಅವರಂತಹ ಕಾರ್ಯಾಧ್ಯಕ್ಷರನ್ನು ಕಳೆದುಕೊಂಡಿರುವುದು ಇಡೀ ಪಕ್ಷಕ್ಕೆ ದೊಡ್ಡ ನಷ್ಟವಾಗಿದೆ. ಆ ಆಘಾತದಿಂದ ನಾವಿನ್ನೂ ಹೊರಬರಲು ಸಾಧ್ಯವಾಗಿಲ್ಲ. ಸಂಘಟನೆ ಶಕ್ತಿ, ತಾಳ್ಮೆ, ನಿಷ್ಠೆ, ಸೌಮ್ಯ ವ್ಯಕ್ತಿತ್ವಕ್ಕೆ ಮತ್ತೊಂದು ಹೆಸರು ಧೃವನಾರಾಯಣ ಅವರು. ಅವರ ಆತ್ಮಕ್ಕೆ ಶಾಂತಿ ಸಿಗುವಂತಹ ಕೆಲಸವನ್ನು ಪಕ್ಷ ಮಾಡಲಿದ' ಎಂದು ತಿಳಿಸಿದರು.

ಪಕ್ಷದ ಟಿಕೆಟ್ ಪಟ್ಟಿ ಅಂತಿಮವಾಗುವುದು ಯಾವಾಗ ಎಂಬ ಕುರಿತು ಮಾತನಾಡಿ, ಮಾರ್ಚ್‌ 16 ರಂದು ಇಲ್ಲಿ ಒಂದು ಸಭೆ ಕರೆದಿದ್ದು, ಮಾ.17ರಂದು ಪಕ್ಷದ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಅಲ್ಲಿ ಅಂತಿಮ ತೀರ್ಮಾನವಾಗಲಿದೆ ಎಂದು ತಿಳಿಸಿದರು.

ಪ್ರಧಾನಮಂತ್ರಿಗಳು ರೌಡಿ ಶೀಟರ್ ಗೆ ಕೈಮುಗಿದಿರುವ ಕುರಿತು ಮಾತನಾಡಿ, ಅವರ ಪಕ್ಷ, ಅವರಿಗೆ ಯಾರು ಬೇಕೋ ಅವರನ್ನು ಸೇರಿಸಿಕೊಂಡಿದ್ದಾರೆ. ಅವರು ಸ್ಯಾಂಟ್ರೋ ರವಿ ಅವರನ್ನಾದರೂ ಸೇರಿಸಿಕೊಳ್ಳಲಿ, ಫೈಟರ್ ರವಿ ಅವರನ್ನಾದರೂ ಸೇರಿಸಿಕೊಳ್ಳಲಿ, ಅತ್ಯಾಚಾರಿಗಳನ್ನು ಜೊತೆಯಲ್ಲಿ ಇಟ್ಟುಕೊಳ್ಳಲಿ, ಲಂಚಕೋರರನ್ನಾದರೂ ಇಟ್ಟುಕೊಳ್ಳಲಿ. ಅದು ಅವರ ಪಕ್ಷದ ವಿಚಾರ. ಅದರ ಬಗ್ಗೆ ನಾನ್ಯಾಕೆ ಮಾತನಾಡಲಿ' ಎಂದು ಕೇಳಿದರು.

ರಾಜಾಜಿನಗರದ ಆಕಾಂಕ್ಷಿಗಳು ತಮ್ಮನ್ನು ಭೇಟಿ ಮಾಡಿ ಪುಟ್ಟಣ್ಣ ಅವರಿಗೆ ಟಿಕೆಟ್ ನೀಡುವುದು ಬೇಡ ಎಂಬ ಬೇಡಿಕೆ ಇಟ್ಟಿರುವ ವಿಚಾರವಾಗಿ ಕೇಳಿದ ಪ್ರಶ್ನೆಗೆ, 'ನಾವು ಅವರಿಗೆ ಟಿಕೆಟ್ ನೀಡುತ್ತಿದ್ದೇವೆ ಎಂದು ಯಾರು ಹೇಳಿದರು? ಪಕ್ಷದ ಅನುಕೂಲಕ್ಕೆ ತಕ್ಕಂತೆ ಪಕ್ಷ ತೀರ್ಮಾನ ಮಾಡಲಿದೆ. ಯಾರ ಬೆದರಿಕೆಗೂ ಕಾಂಗ್ರೆಸ್ ಪಕ್ಷ ಬಗ್ಗುವುದಿಲ್ಲ. ಪಕ್ಷ ಈ ವಿಚಾರವಾಗಿ ಯಾವ ತೀರ್ಮಾನ ಮಾಡಬೇಕೋ ಅದನ್ನು ಮಾಡಲಿದೆ' ಎಂದರು.

ಮಂಡ್ಯದಲ್ಲಿ ಮೋದಿ ಅವರು ಯಾರ ಬಗ್ಗೆ ಮಾತನಾಡಿದ್ದಾರೆ, ಯಾರ ಬಗ್ಗೆ ಮಾತನಾಡಿಲ್ಲ ಎಂದು ನಾನು ಹೇಳಬೇಕಾಗಿಲ್ಲ, ಮಾಧ್ಯಮಗಳು ವರದಿ ಮಾಡಿವೆ. ಜನರಿಗೆ ಅದು ತಿಳಿದಿದೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+