ಕುರುಬ ಸಮುದಾಯಕ್ಕೆ ಟಿಕೆಟ್ ನೀಡುವಲ್ಲಿ ಕಾಂಗ್ರೆಸ್ ನಿಂದ ತತ್ಸರ: ಕನಕಗುರುಪೀಠದ ಸ್ವಾಮೀಜಿ ಎಚ್ಚರಿಕೆ

ರಾಯಚೂರು,ಮಾರ್ಚ್28:‌ 2023 ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ನಿಂದ ಬಿಡುಗಡೆ ಮಾಡಿರುವ ಮೊದಲ ಪಟ್ಟಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಗೆಲುವ ಕುರುಬ ಸಮುದಾಯದ ಅಭ್ಯರ್ಥಿಗಳಿಗೆ ಟಿಕೆಟ್ ನೀಡದೆ ಅನ್ಯಾಯ ಮಾಡಿಲಾಗಿದೆ ಎಂಬ ಮಾತುಗಳು ಕುರುಬ ಸಮುದಾಯದಲ್ಲಿ ಕೇಳಿ ಬಂದಿವೆ.

ಇನ್ನೂ ಕೆಲ ದಿನಗಳ ನಂತರ ಎರಡನೇ ಪಟ್ಟಿ ಬಿಡುಗಡೆ ವೇಳೆ ಕುರುಬ ಸಮುದಾಯದ ಆಕಾಂಕ್ಷಿಗಳಿಗೆ ಟಿಕೆಟ್ ನೀಡದಿದ್ದರೆ ಚುನಾವಣೆಯಲ್ಲಿ ಸೂಕ್ತವಾದ ಸಂದೇಶವನ್ನು ರವಾನಿಸಲಾಗುತ್ತದೆ ಎಂದು ತಿಂಥಿಣಿ ಬ್ರಿಡ್ಜ್ ಕಾಗಿನೆಲೆಯಲ್ಲಿ ಕನಕಗುರು ಪೀಠದ ಶ್ರೀ ಸಿದ್ಧರಾಮಾನಂದಪುರಿ ಸ್ವಾಮೀಜಿ ಕಾಂಗ್ರೆಸ್ ಪಕ್ಷಕ್ಕೆ ಎಚ್ಚರಿಕೆ ನೀಡಿದ್ದಾರೆ.

Dont Ignore The Kuruba Community, Said Siddaramahanandpuri Swamiji Warns

ರಾಯಚೂರು ನಗರದ ಖಾಸಗಿ ಹೊಟೇಲ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬರುವಂತಹ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ 124 ಜನರಿಗೆ ಟಿಕೆಟ್ ನೀಡುವ ಮೂಲಕ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. 124 ಜನರಲ್ಲಿ ಇದರಲ್ಲಿ ಕುರುಬ ಸಮುದಾಯಕ್ಕೆ 6 ಜನರಿಗೆ ಮಾತ್ರ ಟಿಕೆಟ್ ನೀಡಲಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಕುರುಬ ಸಮಾಜದ ಜನಸಂಖ್ಯೆ ಅಧಿಕವಾಗಿದೆ. ಈ ಸಮುದಾಯಕ್ಕೆ ಹಾಲಿ ಶಾಸಕರಿಗೆ ಇಬ್ಬರಿಗೆ ಮಾತ್ರ ಟಿಕೆಟ್ ನೀಡಲಾಗಿದೆ. ಉಳಿದ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಟಿಕೆಟ್ ನೀಡಿದೆ ಅನ್ಯಾಯ ಮಾಡಲಾಗಿದೆ ಎಂದು ಹೇಳಿದ್ದಾರೆ.

ಸಾಮಾಜಿಕ ನ್ಯಾಯದಡಿಯಲ್ಲಿ ಕಾಂಗ್ರೆಸ್ ಪಕ್ಷವಿದೆ ಎಂದು ಹೇಳುತ್ತದೆ. ಆದರೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಹಿಂದುಳಿದ ವರ್ಗಕ್ಕೆ ಸೇರಿರುವ ಸಮುದಾಯಕ್ಕೆ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿರುವ ಕುರುಬ ಸಮಾಜಕ್ಕೆ ಟಿಕೆಟ್ ಹಂಚಿಕೆಯಲ್ಲಿ ಸಾಮಾಜಿಕ ನ್ಯಾಯದಡಿಯಲ್ಲಿ ಪರಿಗಣಿಸದೆ ಅನ್ಯಾಯ ಮಾಡಿದೆ ಎಂದು ಆರೋಪಿಸಿದ್ದಾರೆ.

Dont Ignore The Kuruba Community, Said Siddaramahanandpuri Swamiji Warns

ಮಠಾಧೀಶರು ರಾಜಕೀಯಕ್ಕೆ ಬರಬಾರದು ಆದರೆ ಈಗ ಸಮಾಜದ ಹಿತ ಕಾಯುವುದಕ್ಕಾಗಿ ಮುಂದೆ ಬರಬೇಕಾದ ಅನಿರ್ವಾಯ ಎದುರಾಗಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಬಿಡುಗಡೆ ಮಾಡುವ ಎರಡನೇ ಪಟ್ಟಿಯಲ್ಲಿ ಕುರುಬ ಸಮುದಾಯಕ್ಕೆ ಸೇರಿರುವ ಟಿಕೆಟ್ ನೀಡುವ ಮೂಲಕ ಹೆಸರನ್ನು ಘೋಷಣೆ ಮಾಡಬೇಕು. ಹಾಗೋಂದು ವೇಳೆ ಅನ್ಯಾಯವನ್ನು ಸರಿಪಡಿಸದೆ ಇದ್ದರೆ ಬರುವಂತಹ ಚುನಾವಣೆ ಸಮಯದಲ್ಲಿ ನಮ್ಮ ಸಮುದಾಯಕ್ಕೆ ಸೂಕ್ತವಾದ ನಿರ್ಧಾರವನ್ನು ತೆಗೆದುಕೊಂಡು ಸಂದೇಶ ರವಾನಿಸಲಾಗುತ್ತದೆ ಎಂದು ಕಾಂಗ್ರೆಸ್ ಎಚ್ಚರಿಕೆ ನೀಡಿದರು.

ಮಾಜಿ ಮುಖ್ಯಮಂತ್ರಿ ದಿ.ದೇವರಾಜು ಅರಸು ಕಾಲದಲ್ಲಿ ಕುರುಬ ಸಮುದಾಯಕ್ಕೆ ಸೇರಿದವರಿಗೆ 25 ಜನರಿಗೆ ಟಿಕೆಟ್ ನೀಡಲಾಗುತಿತ್ತು. ಕಾಲ ಕ್ರಮೇಣವಾಗಿ ಹೆಚ್ಚಳ ಬದಲಾಗಿ ಕಡಿಮೆಯಾಗುತಲ್ಲೆ ಬರುತ್ತಿದೆ. ಈಗಲೂ ಅದೆ ರೀತಿಯಾಗಿ ಮುಂದುವರೆದಿದೆ. ಅದರಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಕುರುಬ ಸಮುದಾಯವನ್ನು ತತ್ಸರ ಮನೋಭಾವದಿಂದ ನೋಡುತ್ತಿದೆ. ಅಲ್ಲದೇ ಟಿಕೆಟ್ ಯಲ್ಲಿ ಮೋಸ ಮಾಡಿದ್ದು, ಬರುವಂತಹ ಚುನಾವಣೆಯಲ್ಲಿ ಇದಕ್ಕೆ ತಕ್ಕಪಾಠವನ್ನು ಕಲಿಸುವ ಎಚ್ಚರಿಕೆಯನ್ನು ರವಾನಿಸಿದರು.

ಈಗ ಎರಡನೇ ಪಟ್ಟಿ ಬಿಡುಗಡೆ ವೇಳೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಹಲವು ಜನ ಗೆಲುವ ಪ್ರಬಲ ಆಕಾಂಕ್ಷಿಗಳು ಇದ್ದಾರೆ. ಅವರಿಗೆ ಟಿಕೆಟ್ ನೀಡುವ ಮೂಲಕ ಮೊದಲ ಪಟ್ಟಿಯಲ್ಲಿ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು. ಇಲ್ಲದಿದ್ದರೆ ಮುಂದಿನ ನಿರ್ಧಾರನವನ್ನು ತೀಕ್ಷಣವಾದ ತಿರ್ಮಾನವನ್ನು ತೆಗೆದುಕೊಂಡು ಯಾವ ಸಂದೇಶವನ್ನು ನೀಡಬೇಕು ಆ ಸಂದೇಶವನ್ನು ನೀಡುವುದಾಗಿ ತಿಳಿಸಿದರು. ಈ ವೇಳೆ ಟಿಕೆಟ್ ಆಕಾಂಕ್ಷಿಗಳು ಸ್ವಾಮಿಜಿಗೆ ಸಾಥ್ ನೀಡಿದರು.

ಇನ್ನೂ ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನ ಕೆಲ ಸಮುದಾಯದ ನಾಯಕರು ಈ ಬಾರಿಯ ಚುನಾವಣೆಯಲ್ಲಿ ತಮ್ಮ ತಮ್ಮ ಸಮುದಾಯಗಳಿಗೆ ಹೆಚ್ಚಿನ ಸೀಟುಗಳನ್ನ ನೀಡುವಂತೆ ಒತ್ತಡ ಹಾಕಿದ್ರು, ಇದೀಗ ಕಾಂಗ್ರೆಸ್‌ ನ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, ಕೆಲ ಕ್ಷೇತ್ರಗಳಲ್ಲಿ ಟಿಕೆಟ್‌ ಘೋಷಣೆ ಕುರಿತು ಅಸಮಾಧಾನಗಳನ್ನ ಹೊರ ಹಾಕಿದ್ದು, ಎರಡನೇ ಪಟ್ಟಿಯಲ್ಲಿ ಕುರಬ ಸಮುದಾಯಕ್ಕೆ ಹೆಚ್ಚಿನ ಟಿಕೆಟ್‌ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+