ಶಿವಮೊಗ್ಗ ಕಾಂಗ್ರೆಸ್‌ ನಲ್ಲಿ ಭಿನ್ನಮತ; ಮಧು ಬಂಗಾರಪ್ಪ ವಿರುದ್ಧ ಅಸಮಾಧಾನ ಹೊರ ಹಾಕಿದ ಕಾಂಗ್ರೆಸ್‌ ಶಾಸಕ

ಶಿವಮೊಗ್ಗ, ನವೆಂಬರ್‌09: ಸಚಿವ ಮಧು ಬಂಗಾರಪ್ಪ ವಿರುದ್ಧ ಮತ್ತೆ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಹರಿಹಾಯ್ದಿದ್ದಾರೆ, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಯಾರೆಂಬುದೇ ಗೊತ್ತಿಲ್ಲ ಎನ್ನುವ ಮೂಲಕ ಅಸಮಾಧಾನ ಹೊರ ಹಾಕಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಇಂದಿನ ಕೆಡಿಪಿ ಸಭೆಯಲ್ಲಿ ನಾನು ಪಾಲ್ಗೊಳ್ಳುತ್ತಿಲ್ಲ. ನನಗೆ ಸಭೆಯ ಆಹ್ವಾನವಿಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಯಾರು ಎಂಬುದೇ ಗೊತ್ತಿಲ್ಲ‌. ಮೊದಲು ಮಧು ಬಂಗಾರಪ್ಪ ಎಂಬುವರು ಇದ್ದರಂತೆ. ಈಗ ಯಾರಿದ್ದಾರೋ ಗೊತ್ತಿಲ್ಲ. ಬಹುಶಃ ಅವರು ನನ್ನನ್ನು ವಿರೋಧ ಪಕ್ಷದವನು ಎಂದು ಭಾವಿಸಿರಬೇಕು. ನಾನು ಕುಮಾರ್ ಬಂಗಾರಪ್ಪ ಅಲ್ಲ ಹೆದರಿಕೊಂಡು ಹೋಗಲು. ನಾನು ಬೇಳೂರು ಗೋಪಾಲಕೃಷ್ಣ , ನನಗೆ ಸಿಎಂ, ಡಿಸಿಎಂ ಬೆಂಬಲವಿದೆ. ನನ್ನ ಕ್ಷೇತ್ರದ ಅಭಿವೃದ್ಧಿ ಮೇಲೆ ಯಾವುದೇ ಪರಿಣಾಮ ಆಗುವುದಿಲ್ಲ ಎಂದು ಹೇಳಿದರು.

Dont Know Who The District Incharge Minister Is In Shivamogga Says Belur Gopalakrishna

ಬಿಜೆಪಿ ನಾಯಕರು ಬರ ಅಧ್ಯಯನ ಮಾಡಲು ಹೊರಟಿದ್ದಾರೆ. ವಿರೋಧ ಪಕ್ಷದವರಾಗಿ ಅವರ ಮಾಡುವುದು ಸರಿ. ಆದರೆ ಅದನ್ನು ರಾಜಕೀಯವಾಗಿ ಬಳಸಿಕೊಳ್ಳಲು ಹೊರಟಿದ್ದಾರೆ. ವಿರೋಧ ಪಕ್ಷದ ನಾಯಕರೇ ಇಲ್ಲದೆ ಅಧ್ಯಯನ ಮಾಡುತ್ತಿದ್ದಾರೆ. ನಿಮ್ಮ ಆಡಳಿತದಲ್ಲಿ ಅತಿವೃಷ್ಟಿ ಆದಾಗ, ನೆರೆ ಬಂದಾಗ ಜನ ತೊಂದರೆಗೊಳಗಾಗಿದ್ದರು. ನೀವು ಎಷ್ಟರಮಟ್ಟಿಗೆ ಪರಿಹಾರ ನೀಡಿದ್ದೀರಾ ಹೇಳಿ? ಎಂದು ಪ್ರಶ್ನಿಸಿದರು.

ಹಾಗೆಯೇ ಎಲ್ಲಾ ಉಸ್ತುವಾರಿ ಸಚಿವರು ತಕ್ಷಣವೇ ಬರ ಪರಿಹಾರ ಸಮೀಕ್ಷೆಗೆ ಮುಂದಾಗಬೇಕು. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಬೀಳಿಸಲು ಬಿಜೆಪಿ ಮತ್ತು ಜೆಡಿಎಸ್ ಒಂದಾಗಿವೆ‌. ಆದರೆ ಆಪರೇಷನ್ ಕಮಲ ಮಾಡಲು ಸಾಧ್ಯವಾಗುವುದಿಲ್ಲ. ಏಕೆಂದರೆ ನಿಮ್ಮ ಪಕ್ಷದವರೇ ಕಾಂಗ್ರೆಸ್‌ ಗೆ ಸೇರಲು ಬರುತ್ತಿದ್ದಾರೆ. ಕುಮಾರಸ್ವಾಮಿಗೆ ತಮ್ಮ ಶಾಸಕರನ್ನು ರೆಸಾರ್ಟ್‌ ನಲ್ಲಿ ಕೂಡಿ ಹಾಕುವ ಪರಿಸ್ಥಿತಿ ಬಂದಿದೆ. ಇನ್ನು ಶಿವಮೊಗ್ಗದಲ್ಲಿ ನೆಲೆ ಇಲ್ಲದ ಈಶ್ವರಪ್ಪ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ. ಇವರ ಭ್ರಷ್ಟಾಚಾರದಿಂದಾಗಿ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಎಂದು ಹೇಳಿದರು.

ಯಡಿಯೂರಪ್ಪ ನಮ್ಮ ಸರ್ಕಾರದ ಕಾರ್ಯ ವೈಖರಿಯನ್ನು ಟೀಕಿಸುತ್ತಿದ್ದಾರೆ. ಅವರಿಗೆ ಬದ್ಧತೆ ಇದ್ದರೆ ಕೇಂದ್ರದಿಂದ ರಾಜ್ಯಕ್ಕೆ ನ್ಯಾಯಯುತವಾಗಿ ಬರಬೇಕಾದ ಹಣ ಕೊಡಿಸಿ. ಆರ್.ಡಿ.ಪಾಟೀಲ್ ಬಗ್ಗೆ ಮಾತನಾಡುವ ನೀವು ಪಿಎಸ್ಐ ಹಗರಣದಲ್ಲಿ ಭಾಗಿಯಾಗಿರುವ ಬಿ.ವೈ. ವಿಜಯೇಂದ್ರನ ಬಗ್ಗೆ ಮಾತನಾಡುವುದಿಲ್ಲ ಏಕೆ.? ಸಂಸದ ಬಿ.ವೈ.ರಾಘವೇಂದ್ರ ಚುನಾವಣೆ ಹತ್ತಿರ ಬರುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ಓಡಾಡುತ್ತಿದ್ದಾರೆ. ವಿವಿಧ ಕೆಲಸ ಮಾಡಿರುವುದಾಗಿ ಸುಳ್ಳು ಹೇಳುತ್ತಿದ್ದಾರೆ. ಹಾಗಾದರೆ ತುಮಕೂರು ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ಕೆಲಸ ಇನ್ನೂ ಏಕೆ ಮುಗಿದಿಲ್ಲ ಎಂದು ಪ್ರಶ್ನಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+