ಕೊರೊನಾ ಗೆಲ್ಲಬಹುದು, ಆತಂಕ ಬೇಡ; ಯಡಿಯೂರಪ್ಪ ಟ್ವೀಟ್

ಬೆಂಗಳೂರು, ಆಗಸ್ಟ್ 10 : ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದರು. "ಕೊರೊನಾ ಗೆಲ್ಲಬಹುದು, ಆತಂಕ ಬೇಡ' ಎಂದು ಅವರು ಟ್ವೀಟ್ ಮಾಡಿದ್ದಾರೆ.

Recommended Video

      BSY Discharged : ಒಂದೇ ವಾರದಲ್ಲಿ ಆಸ್ಪತ್ರೆಯಿಂದ ಹೊರಬಂದ ಯಡಿಯೂರಪ್ಪ | Oneindia Kannada

      ಯಡಿಯೂರಪ್ಪ ಅವರು ಸೋಮವಾರ ಸಂಜೆ 4 ಗಂಟೆಗೆ ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದರು. ಆಸ್ಪತ್ರೆಯಿಂದ ನೇರವಾಗಿ ಅವರು ಸರ್ಕಾರಿ ನಿವಾಸ 'ಕಾವೇರಿ'ಗೆ ತೆರಳಿದ್ದಾರೆ. ಯಡಿಯೂರಪ್ಪ 9 ದಿನಗಳ ಕಾಲ ಆಸ್ಪತ್ರೆಯಲ್ಲಿದ್ದರು.

      ಟ್ವೀಟ್ ಮಾಡಿರುವ ಯಡಿಯೂರಪ್ಪ "ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿದ್ದೇನೆ. ನಿಮ್ಮೆಲ್ಲರ ಶುಭಹಾರೈಕೆಗಳಿಂದ ಗುಣಮುಖನಾಗಿದ್ದೇನೆ. ವೈದ್ಯರ ಸಲಹೆಯಂತೆ ಇನ್ನು ಕೆಲವು ದಿನ ಮನೆಯಲ್ಲೇ ಕ್ವಾರಂಟೈನ್ ನಲ್ಲಿ ಇರಲಿದ್ದೇನೆ. ಆತ್ಮವಿಶ್ವಾಸ, ವೈದ್ಯಕೀಯ ಚಿಕಿತ್ಸೆಗಳಿಂದ ಕೊರೋನಾ ಗೆಲ್ಲಬಹುದು. ಆತಂಕ ಬೇಡ, ಮುನ್ನೆಚ್ಚರಿಕೆ ಇರಲಿ" ಎಂದು ರಾಜ್ಯದ ಜನರಿಗೆ ಕರೆ ನೀಡಿದ್ದಾರೆ.

      Dont Panic About COVID 19 Tweets BS Yediyurappa

      ಆಗಸ್ಟ್ 2ರ ಭಾನುವಾರ ಯಡಿಯೂರಪ್ಪಗೆ ಕೋವಿಡ್ ಸೋಂಕು ಇರುವುದು ಖಚಿತವಾಗಿತ್ತು. ಸೋಂಕಿನ ಯಾವುದೇ ಲಕ್ಷಣಗಳು ಇಲ್ಲವಾದರೂ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದರು. 9 ದಿನಗಳ ಕಾಲ ಚಿಕಿತ್ಸೆ ಪಡೆದು ಅವರು ಗುಣಮುಖರಾಗಿದ್ದಾರೆ.

      "ವೈದ್ಯರ ಸಲಹೆಯಂತೆ ಇನ್ನು ಕೆಲವು ದಿನ ಮನೆಯಲ್ಲೇ ಕ್ವಾರಂಟೈನ್ ನಲ್ಲಿ ಇರಲಿದ್ದೇನೆ" ಎಂದು ಯಡಿಯೂರಪ್ಪ ತಮ್ಮ ಟ್ವೀಟ್‌ನಲ್ಲಿ ಸ್ಪಷ್ಟಪಡಿಸಿದ್ದಾರೆ. ಸದ್ಯಕ್ಕೆ ಯಡಿಯೂರಪ್ಪ ಅವರನ್ನು ಭೇಟಿ ಮಾಡಲು ಯಾರಿಗೂ ಅವಕಾಶ ನೀಡುವುದಿಲ್ಲ.

      ಮಣಿಪಾಲ್ ಆಸ್ಪತ್ರೆಯಲ್ಲಿದ್ದ ಯಡಿಯೂರಪ್ಪ ಅವರು ಆಸ್ಪತ್ರೆಯಿಂದಲೇ ಕೆಲಸ ಮಾಡುತ್ತಿದ್ದರು. ಅಧಿಕಾರಿಗಳಿಗೆ ಹಲವು ಸೂಚನೆಗಳನ್ನು ನೀಡುತ್ತಿದ್ದರು. ರಾಜ್ಯದಲ್ಲಿನ ಪ್ರವಾಹ ಪರಿಸ್ಥಿತಿ ಬಗ್ಗೆ ಕ್ಷಣ-ಕ್ಷಣದ ಮಾಹಿತಿಯನ್ನು ಪಡೆಯುತ್ತಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+