ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡ್ರಗ್ಸ್: ಸಿಎಂ ಬಿಎಸ್ವೈ ಮತ್ತು ಬಿಜೆಪಿಗೆ ಖಡಕ್ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ

|
Google Oneindia Kannada News

ಬೆಂಗಳೂರು, ಸೆ 12: ದಿನಕ್ಕೊಂದು ಹೊಸ ತಿರುವು ಪಡೆಯುತ್ತಿರುವ ಡ್ರಗ್ಸ್ ವಿಚಾರಕ್ಕೆ ಸಂಬಂಧಿಸಿದಂತೆ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಬಿಜೆಪಿಗೆ ಖಡಕ್ ಎಚ್ಚರಿಕೆಯನ್ನು ನೀಡಿದ್ದಾರೆ.

ಕೊರೊನಾ ಮತ್ತು ನೆರೆ ಪರಿಹಾರದ ವೈಫಲ್ಯವನ್ನು ಮುಚ್ಚಿಹಾಕಲು, ಡ್ರಗ್ಸ್ ವಿಚಾರವನ್ನು, ಬಿಜೆಪಿ ಸರಕಾರ ಮುನ್ನಲೆಗೆ ತಂದಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ಜೊತೆಗೆ, ಡ್ರಗ್ಸ್ ವಿಚಾರದಲ್ಲಿ ನಮ್ಮ ಪಕ್ಷವನ್ನು ಸುಮ್ಮನೇ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಕೆಪಿಸಿಸಿಯಿಂದ ಕೆ.ಸಿ.ವೇಣುಗೋಪಾಲ್ ಔಟ್: ಸಿದ್ದರಾಮಯ್ಯಗೆ ಹಿನ್ನಡೆ? ಕೆಪಿಸಿಸಿಯಿಂದ ಕೆ.ಸಿ.ವೇಣುಗೋಪಾಲ್ ಔಟ್: ಸಿದ್ದರಾಮಯ್ಯಗೆ ಹಿನ್ನಡೆ?

ಈ ವಿಚಾರದಲ್ಲಿ ಸಿದ್ದರಾಮಯ್ಯ ಮಾಡಿರುವ ಟ್ವೀಟ್ ಹೀಗಿದೆ,"ಡ್ರಗ್ಸ್ ಹಗರಣದ ತನಿಖೆಯ ಹಾದಿ ನೋಡಿದರೆ @BJP4Karnataka ಸರ್ಕಾರಕ್ಕೆ ಅಪರಾಧಿಗಳನ್ನು ಶಿಕ್ಷಿಸುವ ಉದ್ದೇಶಕ್ಕಿಂತಲೂ ಕೊರೊನಾ ಹಾವಳಿ ಮತ್ತು ಅತಿವೃಷ್ಟಿ ಪರಿಹಾರದ ತನ್ನ ವೈಫಲ್ಯಗಳಿಂದ ಜನಮನವನ್ನು ಬೇರೆ ಕಡೆ ಸೆಳೆಯುವ ದುರುದ್ದೇಶ ಮುಖ್ಯವಾಗಿರುವಂತೆ ಕಾಣುತ್ತಿದೆ".

"ಡ್ರಗ್ಸ್ ಹಗರಣದಲ್ಲಿ ಭಾಗಿಯಾಗಿದ್ದಾರೆನ್ನಲಾದ ತಮ್ಮ ಪಕ್ಷದವರನ್ನು ರಕ್ಷಿಸುವ ಮತ್ತು ಈ ಹಗರಣವನ್ನು ಬಳಸಿಕೊಂಡು ವಿರೋಧ ಪಕ್ಷದ ನಾಯಕರ ಚಾರಿತ್ರ್ಯಹರಣ ಮಾಡುವ ಪ್ರಯತ್ನವನ್ನು
@BJP4Karnataka ಮಾಡುತ್ತಿದೆ. ಇದನ್ನು @INCKarnataka ತೀವ್ರವಾಗಿ ಖಂಡಿಸುತ್ತದೆ".

ಕಲಬುರಗಿ 13 ಕ್ವಿಂಟಲ್ ಗಾಂಜಾ ವಶ: ಬಂಧಿತ ಆರೋಪಿ ರಾಷ್ಟ್ರೀಯ ಪಕ್ಷದ ಕಾರ್ಯಕರ್ತ ಕಲಬುರಗಿ 13 ಕ್ವಿಂಟಲ್ ಗಾಂಜಾ ವಶ: ಬಂಧಿತ ಆರೋಪಿ ರಾಷ್ಟ್ರೀಯ ಪಕ್ಷದ ಕಾರ್ಯಕರ್ತ

ಮಾದಕ ವಸ್ತುಗಳ ಹಾವಳಿಯ ನಿರ್ಮೂಲನೆಯ ಪ್ರಾಮಾಣಿಕ ಉದ್ದೇಶ

ಮಾದಕ ವಸ್ತುಗಳ ಹಾವಳಿಯ ನಿರ್ಮೂಲನೆಯ ಪ್ರಾಮಾಣಿಕ ಉದ್ದೇಶ

"ಮಾದಕ ವಸ್ತುಗಳ ಹಾವಳಿಯ ನಿರ್ಮೂಲನೆಯ ಪ್ರಾಮಾಣಿಕ ಉದ್ದೇಶ @CMofKarnataka ಅವರಿಗೆ ಇರುವುದಾದರೆ, ಬೀದಿಯಲ್ಲಿ ನಿಂತು ವಿರೋಧ ಪಕ್ಷದ ನಾಯಕರ ಬಗ್ಗೆ ಸುಳ್ಳು ಆರೋಪಗಳನ್ನು ಮಾಡಿ ತನಿಖೆಯ ಹಾದಿ ತಪ್ಪಿಸುತ್ತಿರುವ ಸಂಪುಟದ ಸಚಿವರು ಮತ್ತು ಪಕ್ಷದ ನಾಯಕರ ಬಾಯಿ ಮುಚ್ಚಿಸಿ ಪೊಲೀಸರಿಗೆ ಮುಕ್ತ ಹಸ್ತ ನೀಡಬೇಕು" - ಸಿದ್ದರಾಮಯ್ಯ ಮಾಡಿರುವ ಟ್ವೀಟ್.

ಡಿಜೆಹಳ್ಳಿ ಗಲಭೆ

ಡಿಜೆಹಳ್ಳಿ ಗಲಭೆ

"@CMofKarnataka ಅವರೇ, ಡಿಜೆಹಳ್ಳಿ ಗಲಭೆ ಬಗ್ಗೆ ನಿಮ್ಮದೇ ತನಿಖೆಯ ಪ್ರಹಸನ ಮಾಡಿ ಪೊಲೀಸ್ ತನಿಖೆಯ ಮೇಲೆ ಪ್ರಭಾವ ಬೀರಿದ್ದೀರಿ, ಈಗ ಡ್ರಗ್ಸ್ ಹಗರಣದ ತನಿಖೆಯ ವಿವರಗಳನ್ನು ಸೋರಿ ಬಿಟ್ಟು ಪೊಲೀಸ್ ತನಿಖೆಯ ಹಾದಿ ತಪ್ಪಿಸುತ್ತಿದ್ದೀರಿ. ನಿಮಗೆ ವಿಶ್ವಾಸ ಇಲ್ಲದಿರುವುದು ಪೊಲೀಸರ ಮೇಲೋ? ಗೃಹ ಸಚಿವರ ಮೇಲೋ?" - ಸಿದ್ದರಾಮಯ್ಯ.

ಸತ್ಯವನ್ನು ಮುಚ್ಚಿಡಬಹುದು, ನಾಶ ಮಾಡಲು ಆಗುವುದಿಲ್ಲ

"@CMofKarnataka ಅವರೇ, ಪ್ರತಿಬಾರಿ ನಿಮ್ಮ ಆಡಳಿತದ ವೈಫಲ್ಯವನ್ನು ಮುಚ್ಚಿ ಹಾಕಲು ವಿರೋಧ ಪಕ್ಷಗಳ ನಾಯಕರ ಮೇಲೆ ಸುಳ್ಳು ಆರೋಪಗಳನ್ನು ಹೊರಿಸುವ ಕುತಂತ್ರ ಮಾಡುತ್ತಾ ಬಂದಿದ್ದೀರಿ. ಡ್ರಗ್ಸ್ ಹಗರಣದಲ್ಲಿ ಕೂಡಾ ಅದನ್ನೇ ಮಾಡುತ್ತಾ ಇದ್ದೀರಿ. ಸತ್ಯವನ್ನು ಮುಚ್ಚಿಡಬಹುದು, ನಾಶ ಮಾಡಲು ಆಗುವುದಿಲ್ಲ, ನೆನಪಿರಲಿ.

Recommended Video

ಅಯ್ಯೋ ಪಾಪ, ಕೋರ್ಟ್ ಮುಂದೆ ನಡೆಯಲಿಲ್ಲ Ragini ಆಟ..! | oneindia Kannada
ಆರೋಪಿಗಳ ಜೊತೆಗಿನ ರಾಜಕಾರಣಿಗಳ ಪೋಟೊ

ಆರೋಪಿಗಳ ಜೊತೆಗಿನ ರಾಜಕಾರಣಿಗಳ ಪೋಟೊ

"ಆರೋಪಿಗಳ ಜೊತೆಗಿನ ರಾಜಕಾರಣಿಗಳ ಪೋಟೊ ಹಾಕಿ ಅವರ ಹೆಸರನ್ನು ಹಗರಣದ ಜೊತೆ ಜೋಡಿಸುವುದು ಕೆಟ್ಟ ಚಾಳಿ. ಸಭೆ-ಸಮಾರಂಭಗಳಲ್ಲಿ ಜೊತೆಗೆ ನಿಂತವರೆಲ್ಲರ ಜಾತಕ ಬಿಡಿಸಿ ನೋಡಲಾಗುವುದಿಲ್ಲ.

ಆದರೆ ಅಧಿಕೃತ ಸಮಾರಂಭಗಳಿಗೆ ಅಂತಹವರನ್ನು ಆಹ್ಹಾನಿಸುವಾಗ, ಚುನಾವಣಾ ಪ್ರಚಾರಗಳಲ್ಲಿ ಬಳಸುವಾಗ ಎಚ್ಚರದಿಂದ ಇರಬೇಕಾಗುತ್ತದೆ" ಎಂದು ಸಿದ್ದರಾಮಯ್ಯ ಟ್ವೀಟ್ ಮೂಲಕ ಬಿಜೆಪಿಗೆ ಎಚ್ಚರಿಕೆಯನ್ನು ನೀಡಿದ್ದಾರೆ.

English summary
Drugs: Don't Put Blame On Us, It Is Your Government Failure: Siddaramaiah Warning To BJP,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X