ಚುನಾವಣಾ ಪ್ರಚಾರಕ್ಕೆ ಮಕ್ಕಳ ಬಳಕೆ; ಆಯೋಗ ನೀಡಿರುವ ಎಚ್ಚರಿಕೆ ಏನು?

ಬೆಂಗಳೂರು, ಏಪ್ರಿಲ್‌ 11; ಕೇಂದ್ರ ಚುನಾವಣಾ ಆಯೋಗ 2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ರಾಜ್ಯದಲ್ಲಿ ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದೆ. ಮೇ 10ರಂದು ಚುನಾವಣೆ ನಡೆಯಲಿದ್ದು, ಮೇ 13ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ವಿವಿಧ ಪಕ್ಷಗಳು ಬಿರುಸಿನ ಪ್ರಚಾರವನ್ನು ಕೈಗೊಂಡಿವೆ. ಚುನಾವಣಾ ಪ್ರಚಾರಕ್ಕೆ ಬರುವವರಿಗೆ ಡಿಮಾಂಡ್ ಕೂಡಾ ಹೆಚ್ಚಾಗಿದೆ.

ಈಗ ಶಾಲೆಗಳಲ್ಲಿ ಪರೀಕ್ಷೆಗಳು ಮುಗಿದಿದ್ದು, ಮಕ್ಕಳು ಬೇಸಿಗೆ ರಜೆಯ ಮೋಜು ಅನುಭವಿಸುತ್ತಿದ್ದಾರೆ. ಇಂತಹ ಸಮಯದಲ್ಲಿ ಚುನಾವಣಾ ಪ್ರಚಾರ ನಡೆಯುತ್ತಿದೆ. ಆದರೆ ಮಕ್ಕಳನ್ನು ಚುನಾವಣಾ ಪ್ರಚಾರ ಕಾರ್ಯಕ್ಕೆ ಬಳಸಿಕೊಳ್ಳಬಾರದು ಎಂದು ರಾಜಕೀಯ ಪಕ್ಷಗಳಿಗೆ, ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಸೂಚನೆಗಳನ್ನು ನೀಡಲಾಗಿದೆ.

Dont Use Children For Election Campaign Direction Issued

ವಿಧಾನಸಭಾ ಚುನಾವಣೆ 2023ರ ಹಿನ್ನೆಲೆಯಲ್ಲಿ ಚುನಾವಣಾ ಕಾರ್ಯ ಮತ್ತು ಪ್ರಚಾರ ಕಾರ್ಯಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಲಾಗಿದೆ. ಮಕ್ಕಳನ್ನು ಚುನಾವಣಾ ಕಾರ್ಯಕ್ಕೆ ಬಳಸಿಕೊಂಡಲ್ಲಿ ಕಾಯ್ದೆಯನ್ವಯ ಸೂಕ್ತ ಶಿಸ್ತಿನ ಕ್ರಮ ಜರುಗಿಸಲಾಗುವುದೆಂದು ಬಾಲಕಾರ್ಮಿಕ ಯೋಜನೆಯ ಅಧ್ಯಕ್ಷರು ಜಿಲ್ಲೆಗಳಲ್ಲಿ ಎಚ್ಚರಿಕೆ ನೀಡುತ್ತಿದ್ದಾರೆ.

ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗವು ಕೂಡ ಚುನಾವಣಾ ಕಾರ್ಯಗಳಲ್ಲಿ ಯಾವುದೇ ಪಕ್ಷಗಳು 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳದಂತೆ ಸೂಚನೆ ನೀಡಿದೆ. ಅಲ್ಲದೇ ಮಕ್ಕಳನ್ನು ಬಳಕೆ ಮಾಡಿಕೊಳ್ಳುವುದು ತಡೆಯಲು ಅಗತ್ಯ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸಹ ಚುನಾವಣಾಧಿಕಾರಿಗಳಿಗೆ ಸೂಚನೆ ನೀಡಿದೆ.

ಭಾರತ ಸರ್ಕಾರವು ವಿಶ್ವಸಂಸ್ಥೆಯು ಅನುಮೋದಿತ ಮಕ್ಕಳ ಹಕ್ಕುಗಳ ಒಡಂಬಡಿಕೆಗೆ 1992ರ ಡಿಸೆಂಬರ್ 11ರಂದು ಒಪ್ಪಿ ಅನುಮೋದಿಸಿದೆ. ಇದರ ಅನ್ವಯ ಮಕ್ಕಳ ಹಕ್ಕುಗಳ ಒಡಂಬಡಿಕೆ ಹಾಗೂ ಮಕ್ಕಳ ನ್ಯಾಯ (ಮಕ್ಕಳ ಪೋಷಣೆ ಮತ್ತು ರಕ್ಷಣೆ ಕಾಯ್ದೆ) 2015ರ ಅನ್ವಯ 18 ವರ್ಷದೊಳಗಿನ ಎಲ್ಲರೂ ಮಕ್ಕಳು ಎಂದು ಪರಿಗಣಿಸಲಾಗಿದೆ. ಮಕ್ಕಳ ಹಕ್ಕುಗಳ ಒಡಂಬಡಿಕೆಯ ಕಲಂ 32 ಮತ್ತು 36ರಲ್ಲಿ ಮಕ್ಕಳ ಆರೋಗ್ಯ ಮತ್ತು ಶಿಕ್ಷಣಕ್ಕೆ ಅಪಾಯಕಾರಿಯಾದ ಕ್ಷೇತ್ರಗಳಲ್ಲಿ ಮಕ್ಕಳು ಕಾರ್ಯನಿರ್ವಹಿಸದಂತೆ ಹಾಗೂ ಮಕ್ಕಳ ಬೆಳವಣಿಗೆಗೆ ತೊಡಕನ್ನುಂಟು ಮಾಡುವ ಯಾವುದೇ ಚಟುವಟಿಕೆಯಲ್ಲಿ ಭಾಗವಹಿಸದಂತೆ ಸೂಕ್ತ ಕ್ರಮಕೈಗೊಳ್ಳಲಾಗುತ್ತದೆ.

Dont Use Children For Election Campaign Direction Issued

ಅನುಮತಿ ಪಡೆಯುವುದು ಕಡ್ಡಾಯ; ಕೇಂದ್ರ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸುತ್ತಿದ್ದಂತೆಯೇ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ. ಚುನಾವಣಾ ಪ್ರಚಾರ ಕಾರ್ಯಕ್ರಮಗಳಿಗೆ ಅಧಿಕಾರಿಗಳ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಜಿಲ್ಲಾ ಚುನಾವಣಾಧಿಕಾರಿಗಳು ವಿವಿಧ ಪರವಾನಿಗೆಯನ್ನು ನೀಡಲು ಅನುಕೂಲವಾಗುವಂತೆ ಏಕಗವಾಕ್ಷಿ ವ್ಯವಸ್ಥೆಯನ್ನು ಆರಂಭಿಸಿದ್ದಾರೆ.

ನೀತಿಸಂಹಿತೆ ಜಾರಿಗೆ ಬಂದಿರುವುದರಿಂದ ಸಂಬಂಧಿಸಿದ ಮತಕ್ಷೇತ್ರಗಳ ಚುನಾವಣಾಧಿಕಾರಿಗಳು ತಕ್ಷಣವೇ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯನ್ನು ಕರೆದು ಅಗತ್ಯ ಮಾಹಿತಿಯನ್ನು ನೀಡಿದ್ದಾರೆ. ಎಲ್ಲಾ ಪ್ರವಾಸಿಮಂದಿರದ ಕೊಠಡಿಗಳನ್ನು ತೆರವುಗೊಳಿಸಿ ಸಂಬಂಧಿಸಿದ ಚುನಾವಣಾಧಿಕಾರಿಗಳ ಸುಪರ್ದಿಗೆ ಪಡೆದುಕೊಂಡಿದ್ದಾರೆ. ಅನಧಿಕೃತ ವ್ಯಕ್ತಿಗಳಿಗೆ ಅಥವಾ ಸಭೆಗಳಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಲಾಗುತ್ತಿಲ್ಲ. ಮಾದರಿ ನೀತಿಸಂಹಿತೆ ಉಲ್ಲಂಘನೆ ಕಂಡುಬಂದರೆ‌ ಕ್ರಮ ಕೈಗೊಳ್ಳಲಾಗುತ್ತಿದೆ.

ನಗದು, ಮದ್ಯ, ಉಡುಗೊರೆ ಮತ್ತಿತರ ವಸ್ತುಗಳ ಅಕ್ರಮ ಸಾಗಾಣಿಕೆ ಮೇಲೆ ತೀವ್ರ ನಿಗಾವಹಿಸಲಾಗುತ್ತಿದೆ. ಚೆಕ್‌ಪೋಸ್ಟ್‌ಗಳನ್ನು ನಿರ್ಮಾಣ ಮಾಡಿಕೊಂಡು ಅಕ್ರಮವಾಗಿ ಸಾಗಾಣಿಕೆ ಮಾಡುವ ವಸ್ತುಗಳನ್ನು ವಶಕ್ಕೆ ಪಡೆಯಲಾಗುತ್ತಿದೆ. ವಶಪಡಿಸಿಕೊಂಡ ವಸ್ತುಗಳ ಮೇಲೆ ಯಾವುದೇ ಪಕ್ಷ ಅಥವಾ ವ್ಯಕ್ತಿಗಳ ಭಾವಚಿತ್ರಗಳಿದ್ದರೆ ಅಂತಹವರ ವಿರುದ್ಧ ಪ್ರಕರಣ ದಾಖಲು ಮಾಡಲಾಗುತ್ತಿದೆ. ಭಾವಚಿತ್ರವಿರುವ ಅಥವಾ ಪಕ್ಷದ ಚಿಹ್ನೆ ಕಂಡುಬಂದಾಗ ಸಂಬಂಧಿಸಿದವರೆ ಮೊದಲ ಆರೋಪಿಯಾಗುತ್ತಾರೆ. ವಾಹನ ಚಾಲಕರು ಮತ್ತಿತರ ವ್ಯಕ್ತಿಗಳನ್ನು ಎರಡು, ಮೂರನೇ ಆರೋಪಿಗಳನ್ನಾಗಿ ಮಾಡಲಾಗುತ್ತದೆ.

ಚುನಾವಣಾ ಪ್ರಚಾರದ ಸಂದರ್ಭದಲ್ಲಿಯೂ ಮತದಾರಿಗೆ ನಿರ್ದಿಷ್ಟ ವ್ಯಕ್ತಿ ಅಥವಾ ಪಕ್ಷಕ್ಕೆ ಮತ ಹಾಕುವಂತೆ ವಿವಿಧ ರೀತಿಯ ಅಮಿಷ ಒಡ್ಡುವುದು. ಹಣ ವಿತರಣೆ, ಉಡುಗೊರೆಗಳು ಹಾಗೂ ಕೂಪನ್ ವಿತರಣೆ, ಮದ್ಯ ವಿತರಣೆ, ಅನುಮತಿಯಿಲ್ಲದ ಪೋಸ್ಟರ್‌ಗಳು ಮತ್ತು ಬ್ಯಾನರ್‌ಗಳು, ಬಂದೂಕುಗಳ ಪ್ರದರ್ಶನ ಹಾಗೂ ಬೆದರಿಕೆ, ಆಸ್ತಿ ವಿರೂಪ, ಧಾರ್ಮಿಕ ಅಥವಾ ಕೋಮು ಭಾಷಣಗಳು/ ಸಂದೇಶಗಳು, ಮತಗಟ್ಟೆಯ 200 ಮೀಟರ್ ಪ್ರದೇಶದಲ್ಲಿ ಪ್ರಚಾರ, ನಿಷೇಧದ ಅವಧಿಯಲ್ಲಿ ಪ್ರಚಾರ, ಮತದಾನ ದಿನದಂದು ವಾಹನಗಳಲ್ಲಿ ಮತದಾರರ ಸಾಗಣೆ ಮುಂತಾದವುಗಳು ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದ ವ್ಯಾಪ್ತಿಗೆ ಸೇರುತ್ತವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+