Bye-Election: ಶಿಗ್ಗಾಂವಿಯಲ್ಲಿ ಒಳ ಒಪ್ಪಂದ, ಕಾಂಗ್ರೆಸ್ ನಾಯಕರಿಂದಲೇ ಆರೋಪ!
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರ ಉಪ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಿಸಿದೆ. ಆದರೆ, ಕಾಂಗ್ರೆಸ್ ಘೋಷಿಸಿರುವ ಅಭ್ಯರ್ಥಿಯ ಹೆಸರು ಭಾರೀ ಚರ್ಚೆ ಹುಟ್ಟುಹಾಕಿದೆ. ಅಲ್ಲದೇ ಇದು ಒಳ ಒಪ್ಪಂದವೇ ಎನ್ನುವ ಅನುಮಾನವೂ ಶುರುವಾಗಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಒಳಒಪ್ಪಂದವಾಗಿರುವ ಬಗ್ಗೆ ಅನುಮಾನ ಮೂಡಲು ಕಾರಣವೂ ಇದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಜನ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.
ಕರ್ನಾಟಕದ ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭೆ ಉಪ ಚುನಾವಣೆಗಳ ಕಾವು ಜೋರಾಗಿದೆ. ಈ ಮೂರು ವಿಧಾನಸಭೆ ಚುನಾವಣೆಗಳಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಪಕ್ಷಗಳಿಗೆ ಗೆಲ್ಲುವುದು ಒಂದೊಂದು ಕಾರಣಕ್ಕೆ ಇಂಪಾರ್ಟೆಂಟ್ ಆಗಿದೆ. ಆದರೆ, ಈ ನಡೆಯುತ್ತಿರುವ ಬೆಳವಣಿಗೆ ಗಮನಿಸಿದರೆ, ಕಾಂಗ್ರೆಸ್ ನಿರ್ಧಾರ ಹಲವು ಅನುಮಾನಗಳನ್ನು ಮೂಡಿಸಿದೆ ಎನ್ನಲಾಗಿದೆ.

ಶಿಗ್ಗಾಂವಿ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರಿಗೆ ಟಿಕೆಟ್ ನೀಡಿದೆ. ಈ ಸಂಬಂಧ ಎಐಸಿಸಿ ಆದೇಶ ಹೊರಡಿಸಿದೆ. ಯಾಸೀರ್ ಅಹ್ಮದ್ ಖಾನ್ ಪಠಾಣ್ ಅವರು ಇಲ್ಲಿನ ಹಾನಗಲ್ ತಾಲ್ಲೂಕಿನ ಬೊಮ್ಮನಳ್ಳಿ ಗ್ರಾಮದವರಾಗಿದ್ದು, ಈ ಹಿಂದೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ್ದರು.
ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಸವರಾಜ್ ಬೊಮ್ಮಾಯಿ ಅವರ ವಿರುದ್ಧ ಶಿಗ್ಗಾಂವಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು. ಇದೀಗ ಮತ್ತೆ ಅವರನ್ನೇ ಆಯ್ಕೆ ಮಾಡಿರುವ ಹಿಂದೆ ಯಾವ ಕಾರಣ ಇದೆ ಎಂದು ಜನ ಕೇಳುತ್ತಿದ್ದಾರೆ.
ಬಿಜೆಪಿ - ಕಾಂಗ್ರೆಸ್ ನಡುವೆ ಒಳಒಪ್ಪಂದ: ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಒಳಒಪ್ಪಂದಗಳು ನಡೆಯುವ ಬಗ್ಗೆ ಈ ಹಿಂದೆಯಿಂದಲೂ ಆರೋಪವಿದೆ. ರಾಜ್ಯದಲ್ಲಿ 2023ನೇ ಸಾಲಿನಲ್ಲಿ ನಡೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲೂ ಬಿಜೆಪಿ ಸೋಲುವುದಕ್ಕೆ ಬಿಜೆಪಿಯ ಕೆಲವು ನಾಯಕರು ಕಾಂಗ್ರೆಸ್‌ನೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇ ಕಾರಣ ಎನ್ನುವ ಆರೋಪ ಕೇಳಿ ಬಂದಿತ್ತು.
ಈ ರೀತಿ ಒಳಒಪ್ಪಂದ ಆಗಿದೆ ಎಂದು ಬಿಜೆಪಿಯ ನಾಯಕರೇ ಆರೋಪಿಸಿದ್ದರು. ಈ ಬಾರಿ ಶಿಗ್ಗಾಂವಿ ವಿಧಾನಸಭೆ ಉಪ ಚುನಾವಣೆಯಲ್ಲಿ ಧಾರವಾಡ ಶಾಸಕ ವಿನಯ್ ಕುಲಕರ್ಣಿ ಅವರ ಮಗಳಿಗೆ ಕಾಂಗ್ರೆಸ್‌ನಿಂದ ಟಿಕೆಟ್ ಕೊಡುತ್ತೆ. ಹೀಗಾಗಿ, ಶಿಗ್ಗಾಂವಿ ಚುನಾವಣೆ ಭಾರೀ ಜಿದ್ದಾಜಿದ್ದಿನಿಂದ ಕೂಡಿರಲಿದೆ ಎಂದೇ ಹೇಳಲಾಗಿತ್ತು. ಆದರೆ, ಆ ನಿರೀಕ್ಷೆಗಳೆಲ್ಲವೂ ಹುಸಿಯಾಗಿವೆ.
ಕಾಂಗ್ರೆಸ್‌ನ ಕೆಲವು ನಾಯಕರೇ ಈ ಬಗ್ಗೆ ಆರೋಪ ಮಾಡಿದ್ದಾರೆ. ಇಲ್ಲಿ ಒಳಒಪ್ಪಂದ ಆಗಿರುವ ಬಗ್ಗೆ ದೂರಿದ್ದಾರೆ.
ಐದು ಚುನಾವಣೆ: ಇನ್ನು ಶಿಗ್ಗಾಂವಿಯಲ್ಲಿ ನಡೆದಿರುವ ಐದು ಚುನಾವಣೆಗಳಲ್ಲೂ ಮುಸ್ಲಿಂ ಸಮುದಾಯದವರಿಗೆ ಟಿಕೆಟ್ ನೀಡಲಾಗಿದೆ. ಈ ಬಾರಿಯೂ ಮುಸ್ಲಿಂ ಸಮುದಾಯವರಿಗೆ ಟಿಕೆಟ್ ನೀಡಬೇಕು ಎಂದು ಸಚಿವ ಜಮೀರ್ ಅಹ್ಮದ್‌ಖಾನ್ ಸೇರಿದಂತೆ ಹಲವು ಮುಸ್ಲಿಂ ಮುಖಂಡರು ಕಾಂಗ್ರೆಸ್ ಹೈಕಮಾಂಡ್‌ಗೆ ಮನವಿ ಮಾಡಿದ್ದರು. ಈ ಕ್ಷೇತ್ರದಲ್ಲಿ ಒಟ್ಟು 2,26,079 ಜನ ಇದ್ದಾರೆ. ಲಿಂಗಾಯತ ಹಾಗೂ ಮುಸ್ಲಿಂ ಸಮುದಾಯದವರು ಇಲ್ಲಿ ಹೆಚ್ಚಾಗಿ ಇದ್ದಾರೆ. ಇಲ್ಲಿ ಲಿಂಗಾಯತ ಸಮುದಾಯದವರು 80,000 ಸಾವಿರಕ್ಕೂ ಹೆಚ್ಚು ಹಾಗೂ ಮುಸ್ಲಿಂ ಸಮುದಾಯದವರು 55,000ಕ್ಕೂ ಹೆಚ್ಚಿದ್ದಾರೆ.
-
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ












Click it and Unblock the Notifications