ಪಕ್ಷದ ಶಿಸ್ತಿನ ಸಿಪಾಯಿಯಾಗಿ ಗೃಹ ಖಾತೆಗೆ ರಾಜೀನಾಮೆ - ಪರಮೇಶ್ವರ್

ಬೆಂಗಳೂರು, ಜೂನ್ 1: 'ಪಕ್ಷದ ಓರ್ವ ಶಿಸ್ತಿನ ಸಿಪಾಯಿಯಾಗಿ ನಾನು ಗೃಹ ಖಾತೆಗೆ ರಾಜೀನಾಮೆ ನೀಡುತ್ತಿದ್ದೇನೆ,' ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.

ಮೂರನೇ ಅವಧಿಗೆ ಕೆಪಿಸಿಸಿ ಅಧ್ಯಕ್ಷರನ್ನಾಗಿ ಪರಮೇಶ್ವರ್ ಪುನರಾಯ್ಕೆ ಆದ ಹಿನ್ನಲೆಯಲ್ಲಿ ಇಂದು ಅವರು ವಿಕಾಸ ಸೌಧದಲ್ಲಿ ಸುದ್ದಿ ಗೋಷ್ಠಿ ಹಮ್ಮಿಕೊಂಡಿದ್ದರು.

Dr. G Parameshwara offers to resign Home Minister post after high command’s instruction

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಹೈಕಮಾಂಡ್ ನಿರ್ದೇಶನದ ಮೇರೆಗೆ ಗೃಹ ಇಲಾಖೆಗೆ ರಾಜೀನಾಮೆ ನೀಡುತ್ತಿದ್ದೇನೆ. ಪಕ್ಷ ನೀಡಿದ ಜವಾಬ್ದಾರಿಯಂತೆ ಸಂಘಟನೆಯಲ್ಲಿ ತೊಡಗಿಸಿಕೊಳ್ಳುತ್ತೇನೆ. ಚುನಾವಣೆ ಹತ್ತಿರ ಬಂದಿದ್ದರಿಂದ ಸಂಘಟನೆಗೆ ಒತ್ತು ನೀಡುತ್ತಿದ್ದೇವೆ. ," ಎಂದರು.

ಇನ್ನು "ಮುಂದಿನ ಚುನಾವಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲೇ ಎದುರಿಸಲಾಗುವುದು. ಪಕ್ಷದ ಎಲ್ಲರಿಗೂ ಜವಾಬ್ದಾರಿಗಳನ್ನು ನೀಡಿದ್ದಾರೆ. ಇಲ್ಲಿ ಯಾರೂ ಮೇಲೆ, ಯಾರೂ ಕೆಳಗೆ ಎಂಬುದಿಲ್ಲ," ಎಂದು ಪರಮೇಶ್ವರ್ ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.

ಸಹಕರಿಸದವರಿಗೆ ಧನ್ಯವಾದಗಳು
"ಗೃಹ ಖಾತೆ ಜವಾಬ್ದಾರಿಯುತ ಖಾತೆ. ಒಂದು ವರ್ಷ 7 ತಿಂಗಳು ಈ ಖಾತೆ ನಿರ್ವಹಿಸದ್ದೇನೆ. ನನಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು," ಎಂದು ಪರಮೇಶ್ವರ್ ಸುದ್ದಿಗೋಷ್ಠಿಯಲ್ಲಿ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+