ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಡಾ.ಕೆ.ಸುಧಾಕರ್ ಅವರಿಂದ ಮತದಾನ
ಕರ್ನಾಟಕದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಲೋಕಸಭಾ ಕ್ಷೇತ್ರಗಳ ಪೈಕಿ ಚಿಕ್ಕಬಳ್ಳಾಪುರ ಕ್ಷೇತ್ರ ಕೂಡ ಒಂದಾಗಿತ್ತು. ಅದ್ರಲ್ಲೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ, ಎನ್‌ಡಿಎ ಅಂದರೆ ಬಿಜೆಪಿ & ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಡಾ.ಕೆ.ಸುಧಾಕರ್ ಅವರು ಅಖಾಡಕ್ಕೆ ಪ್ರವೇಶ ಮಾಡಿದ ನಂತರ ಭಾರಿ ಸಂಚಲನ ಸೃಷ್ಟಿಯಾಗಿತ್ತು. ಇದೀಗ ಮತದಾನ ಆರಂಭ ಆಗಿದ್ದು, ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಡಾ. ಕೆ. ಸುಧಾಕರ್ ಅವರು ಮತದಾನ ಮಾಡಿದ್ದಾರೆ.
ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಹಿಂದೆ ಬಿಜೆಪಿ ಅಭ್ಯರ್ಥಿಯೇ ಜಯ ಗಳಿಸಿದ್ದರು. ಇದೇ ಕಾರಣಕ್ಕೆ ಚಿಕ್ಕಬಳ್ಳಾಪುರದಲ್ಲಿ ದೊಡ್ಡ ಪ್ರಮಾಣದಲ್ಲಿ ಬಿಜೆಪಿ ಕೇಂದ್ರ ನಾಯಕರು ಪ್ರಚಾರ ಕಾರ್ಯ ನಡೆಸಿದ್ದರು. ಹಾಗೇ ಸ್ಥಳೀಯ ಮಟ್ಟದಲ್ಲಿ ಕೂಡ ಅಚ್ಚುಕಟ್ಟಾಗಿ, ಬಿಜೆಪಿ ಮತ್ತು ಜೆಡಿಎಸ್ ನಾಯಕರು ಒಗ್ಗಟ್ಟಿನಿಂದ ಪ್ರಚಾರ ನಡೆಸಿದ್ದರು. ಹೀಗಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ದೇಶ ಮಟ್ಟದಲ್ಲಿ ಗಮನ ಕೂಡ ಸೆಳೆದಿತ್ತು. ಹಾಗೇ ಪ್ರಧಾನಿ ನರೇಂದ್ರ ಮೋದಿ ಅವರಿಂದ ಕೂಡ ಭರ್ಜರಿ ರ್‍ಯಾಲಿ ನಡೆದಿತ್ತು. ಜೆಡಿಎಸ್ ವರಿಷ್ಠರು ಕೂಡ ಈ ಕ್ಷೇತ್ರದಲ್ಲಿ ಸಂಚಾರವನ್ನ ಮಾಡಿ ಪ್ರಚಾರ ನಡೆಸಿದ್ದರು. ಇದೀಗ ಮತದಾನವು ಕೂಡ ಆರಂಭವಾಗಿದೆ.

ಕರ್ನಾಟಕ ಸರ್ಕಾರದ ಮಾಜಿ ಸಚಿವರು
ಡಾ. ಕೆ. ಸುಧಾಕರ್ ಅವರು ಈ ಹಿಂದೆ ಚಿಕ್ಕಬಳ್ಳಾಪುರ ವಿಧಾನಸಭೆ ಕ್ಷೇತ್ರದಲ್ಲೇ ಶಾಸಕರಾಗಿ ಕೆಲಸ ಮಾಡಿದ್ದರು. ಅದ್ರಲ್ಲೂ 2019ರ ಉಪಚುನಾವಣೆ ವೇಳೆ ಡಾ. ಕೆ. ಸುಧಾಕರ್ ಅವರು ಬಿಜೆಪಿ ಪಕ್ಷದಿಂದ ಸ್ಪರ್ಧೆ ಮಾಡಿ, ಭರ್ಜರಿ ಗೆಲುವನ್ನು ಕೂಡ ಸಾಧಿಸಿದ್ದರು. ಅದೇ ರೀತಿ, ಆಗ ಅಂದಿನ ಕರ್ನಾಟಕ ಸರ್ಕಾರದಲ್ಲಿ ಸಚಿವರಾಗಿ ಕೂಡ ಕೆಲಸ ಮಾಡಿದ್ದರು. ಆರೋಗ್ಯ ಸಚಿವರಾಗಿದ್ದ ಡಾ. ಕೆ. ಸುಧಾಕರ್ ಅವರು, ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿದ್ದರು. ಈಗ ಲೋಕಸಭೆ ಚುನಾವಣೆಗೆ ಮತದಾನ ಆರಂಭವಾಗಿದ್ದು, ಡಾ. ಕೆ. ಸುಧಾಕರ್ ಕುಟುಂದವರ ಜೊತೆ ಆಗಮಿಸಿ ಮತದಾನ ಮಾಡಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿಗೆ ಹತ್ತಿರ ಚಿಕ್ಕಬಳ್ಳಾಪುರ
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವು ಬೆಂಗಳೂರಿಗೆ ಹೊಂದಿಕೊಂಡಿದೆ. ಬೆಂಗಳೂರು ಹೊರ ವಲಯದ ಬಹುತೇಕ ವಿಧಾನಸಭಾ ಕ್ಷೇತ್ರಗಳು ಇದೇ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಸೇರುತ್ತವೆ. ಇದೀಗ ತಾನೆ ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಗೆಲವು ಸಾಧಿಸುವುದು ಎನ್‌ಡಿಎ & ಬಿಜೆಪಿ ನಾಯಕರಿಗೆ ಬಹು ಮುಖ್ಯವಾಗಿದೆ. ಹೀಗಾಗಿಯೇ ಭರ್ಜರಿ ಪ್ರಚಾರ ಕಾರ್ಯ ನಡೆದಿತ್ತು. ಕರ್ನಾಟಕದಲ್ಲಿ ಮೊದಲನೇ ಹಂತದ ಲೋಕಸಭಾ ಚುನಾವಣೆಯಲ್ಲೇ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿಯೂ ಮತದಾನ ನಡೆಯುತ್ತಿದೆ.












Click it and Unblock the Notifications