ಡಾ. ಕೆ. ಸುಧಾಕರ್ & ಶಾಸಕ ಎಸ್.ಆರ್. ವಿಶ್ವನಾಥ್ ಭರ್ಜರಿ ಕ್ಯಾಂಪೇನ್!
ಡಾ. ಕೆ. ಸುಧಾಕರ್ ಅವರು ಇಂದು ಅಧಿಕೃತವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಗಿರುವ ಡಾ. ಕೆ. ಸುಧಾಕರ್, ಭರ್ಜರಿ ಕ್ಯಾಂಪೇನ್ ನಡೆಸುತ್ತಿದ್ದಾರೆ. ಇದೇ ವೇಳೆ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಕೂಡ ಪ್ರಚಾರಕ್ಕೆ ಸಾಥ್ ನೀಡಿದ್ದರು. ಈ ಮೂಲಕ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಭಾರಿ ಕುತೂಹಲವನ್ನ ಕೆರಳಿಸಿದೆ.
ಈಗಾಗಲೇ ಡಾ. ಸುಧಾಕರ್ ಅವರು ಸ್ಥಳೀಯ ಮುಖಂಡರ ಭೇಟಿ ಮಾಡಿದ್ದಾರೆ. ಅಲ್ಲದೆ ಬಿಜೆಪಿ & ಜೆಡಿಎಸ್ ನಾಯಕರ ಜೊತೆ ಉತ್ತಮ ಸಂವಹನ ಹೊಂದಿದ್ದಾರೆ. ಈ ಮೂಲಕ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ದೊಡ್ಡ ಮಟ್ಟದಲ್ಲಿ ಗೆಲುವು ಸಾಧಿಸೋಕೆ ಡಾ. ಕೆ. ಸುಧಾಕರ್ ಅವರು ಮುನ್ನುಗ್ಗುತ್ತಿದ್ದು. ಈ ಸಮಯದಲ್ಲೇ, ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಅವರ ಜತೆ ಪ್ರಚಾರ ಸಭೆಗಳನ್ನು ಕೂಡ ನಡೆಸುತ್ತಿದ್ದಾರೆ. ಈ ಮೂಲಕವಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷಕ್ಕೆ ಮತ್ತಷ್ಟು ಬಲ ಬಂದಂತಾಗಿದೆ.

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಮಿಂಚಿನ ಸಂಚಾರ
ಈ ಬಾರಿ ಬಿಜೆಪಿ, ಜೆಡಿಎಸ್ ಮೈತ್ರಿ ಗಟ್ಟಿಯಾಗಿದ್ದು ಮಾಜಿ ಸಚಿವ ಡಾ.ಕೆ.ಸುಧಾಕರ್ ಅವರನ್ನ ಸಂಸದರಾಗಿಸಲು ಮುಖಂಡರು ಹಾಗೂ ಕಾರ್ಯಕರ್ತರು ಒಕ್ಕೊರಲ ವಿಶ್ವಾಸ ತೋರಿಸಿದ್ದಾರೆ. ಟಿಕೆಟ್ ಘೋಷಣೆ ಆದ ನಂತರ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಾದ್ಯಂತ ಮಿಂಚಿನ ಸಂಚಾರ ನಡೆಸುತ್ತಿರುವ ಮೈತ್ರಿ ಅಭ್ಯರ್ಥಿ ಡಾ. ಸುಧಾಕರ್ ಅವರು, ಮಿತ್ರ ಪಕ್ಷಗಳ ನಡುವೆ ಸಮನ್ವಯತೆ ಸಾಧಿಸುವ ನಿಟ್ಟಿನಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆದಿದ್ದಾರೆ. ಈ ನಡುವೆ ಇದೀಗ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಅವರ ಜೊತೆಗೂ ವಿಶೇಷ ಸಭೆಗಳನ್ನು ನಡೆಸುತ್ತಿದ್ದಾರೆ.
ಅಧಿಕೃತವಾಗಿ ನಾಮಪತ್ರ ಸಲ್ಲಿಕೆ
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಗಿರುವ ಡಾ. ಕೆ. ಸುಧಾಕರ್ ಅವರು ಇಂದು ಅಧಿಕೃತವಾಗಿ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಕೆ ಮಾಡಿದರು. ಈ ವೇಳೆ ಸಹಸ್ರಾರು ಕಾರ್ಯಕರ್ತರು ಕೂಡ ಡಾ. ಕೆ. ಸುಧಾಕರ್ ಅವರಿಗೆ ಸಾಥ್ ನೀಡಿದ್ದರು. ಹಾಗೇ ಅದ್ಧೂರಿಯಾಗಿ ರೋಡ್ ಶೋ ಮಾಡಿ ಕಾರ್ಯಕರ್ತರು & ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮತದಾರರ ಬಳಿ ಮನವಿ ಮಾಡಿದರು. ಈ ವೇಳೆ ಸ್ಥಳೀಯ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು & ಕಾರ್ಯಕರ್ತರು ಡಾ. ಕೆ. ಸುಧಾಕರ್ ಅವರ ಜೊತೆ ಹಾಜರಿದ್ದರು.

ಕರ್ನಾಟಕ ಸರ್ಕಾರದ ಮಾಜಿ ಸಚಿವರೂ ಆಗಿರುವ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸುಧಾಕರ್ ಅವರು, ನಿನ್ನೆಯಷ್ಟೇ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಅವರ ಜೊತೆಗೆ ಉಪಾಹಾರ ಸೇವಿಸಿದ್ದರು. ಈ ಸಮಯದಲ್ಲಿ ಇಬ್ಬರೂ ಹಲವು ವಿಷಯ ಚರ್ಚೆ ಮಾಡಿದ್ದರು. ಹಾಗೆಯೇ ಡಾ. ಕೆ. ಸುಧಾಕರ್ ಅವರಿಗೆ, 2024ರ ಲೋಕಸಭೆ ಚುನಾವಣೆಯಲ್ಲಿ ಅತಿಹೆಚ್ಚು ಮತ ಗಳಿಸಿಕೊಡಲು ಇದೇ ವೇಳೆ ಎಸ್.ಆರ್.ವಿಶ್ವನಾಥ್ ಪಣತೊಟ್ಟಿದ್ದರು. ಇಂದು ಭರ್ಜರಿ ಪ್ರಚಾರಕ್ಕೆ ಸಾಥ್ ನೀಡಿದ್ದರು.












Click it and Unblock the Notifications