Get Updates
Get notified of breaking news, exclusive insights, and must-see stories!

11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್

ದೇವನಹಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರಿಂದ ಭಾರತದಲ್ಲಿ ನಿಜವಾದ ಮಹಿಳಾ ಸಬಲೀಕರಣ ಆಗಿದೆ. ಆದರೆ ಕಾಂಗ್ರೆಸ್‌ ಸರ್ಕಾರ ಕೇವಲ ಕೈಗೆ 2 ಸಾವಿರ ರೂಪಾಯಿ ನೀಡಿದ್ದನ್ನು ಬಿಟ್ಟು ಮತ್ತೇನು ಕೆಲಸ ಮಾಡಿಲ್ಲ ಅಂತ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಹೇಳಿದರು. ಈ ಮೂಲಕ ಡಾ. ಕೆ. ಸುಧಾಕರ್ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿಯನ್ನು ನಡೆಸಿದರು.

ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸಿದ ಡಾ.ಕೆ.ಸುಧಾಕರ್ ಅವರು, ಕಾಂಗ್ರೆಸ್‌ ಸರ್ಕಾರ ಮಹಿಳೆಯರಿಗೆ ಏನು ಮಾಡಿದೆ? ಎಂದು ಪ್ರಶ್ನೆ ಮಾಡಿದರೆ 2 ಸಾವಿರ ರೂಪಾಯಿ ಎನ್ನುತ್ತಾರೆ. ಆದರೆ ಕೋವಿಡ್‌ ಅವಧಿಯಿಂದ ಆರಂಭವಾಗಿ, 5 ಕೆಜಿ ಅಕ್ಕಿಯನ್ನು ಕೇಂದ್ರ ಸರ್ಕಾರ ನೀಡಿದೆ. ಮುಂದಿನ 5 ವರ್ಷವು ಯೋಜನೆ ಮುಂದುವರಿಸುವುದಾಗಿ ಬಿಜೆಪಿ ತಿಳಿಸಿದ್ದು, ವಿಧಾನಸಭೆ ಮತ್ತು ಲೋಕಸಭೆಯಲ್ಲಿ 33% ಮಹಿಳಾ ಮೀಸಲಾತಿ ತಂದಿದ್ದಾರೆ. ಇದರಿಂದ ದೇಶದ ಮಹಿಳೆಯರ ರಾಜಕೀಯ ಸಬಲೀಕರಣ ಸಾಧ್ಯವಾಗಲಿದೆ. ಮಹಿಳೆಯರು ಉದ್ಯಮಿಗಳಾಗಿ ಬೆಳೆಯೋದಕ್ಕೆ ಮುದ್ರಾ ಯೋಜನೆ ಅಡಿ 20 ಲಕ್ಷ ರೂ. ಸಾಲ ನೀಡಲಾಗುತ್ತದೆ. ಇದು ನಿಜವಾದ ಸಬಲೀಕರಣವೇ ಹೊರತು ಕೈಗೆ ಹಣ ನೀಡುವುದಲ್ಲ ಎಂದರು ಡಾ. ಕೆ. ಸುಧಾಕರ್.

Dr K Sudhakar Said That PM Narendra Modi Is Did Women Empowerment In Country

ಜನ ಔಷಧಿ ಮಳಿಗೆ ವ್ಯವಸ್ಥೆ

ಪ್ರಧಾನಿ ನರೇಂದ್ರ ಮೋದಿ ಜನ ಔಷಧಿ ಮಳಿಗೆ ನೀಡಿದ್ದು ಶೇಕಡಾ 40 ರಿಂದ 50 ರಷ್ಟು ರಿಯಾಯಿತಿ ದರದಲ್ಲಿ ಔಷಧಿ ದೊರೆಯುತ್ತಿದೆ. ಇನ್ನು ಮುಂದೆ ಪ್ರಮುಖ ಔಷಧಿ ಶೇ. 90ರ ರಿಯಾಯಿತಿ ದರದಲ್ಲಿ ನೀಡುವುದಾಗಿ ತಿಳಿಸಲಾಗಿದೆ. ಬಡವರಿಗೆ 3 ಕೋಟಿ ಮನೆಗಳ ಕಟ್ಟಿಸಿಕೊಡಲಾಗುವುದು. ಈಗಾಗಲೇ 11 ಕೋಟಿ ಕುಟುಂಬಕ್ಕೆ ಅಡುಗೆ ಅನಿಲ ನೀಡಿದ್ದು, ಇದನ್ನೂ ಮುಂದುವರಿಸಲಾಗುವುದು. ಆದರೆ ಕಾಂಗ್ರೆಸ್‌ ಸಣ್ಣ ಆಸೆಯ ತೋರಿಸಿ ಆರ್ಥಿಕ ಪರಿಸ್ಥಿತಿ ಹಾಳು ಮಾಡಿದೆ ಎಂದು ಡಾ. ಕೆ. ಸುಧಾಕರ್ ಅವರು ಆರೋಪ ಮಾಡಿದರು.

ಆರೋಗ್ಯ ಸಚಿವನಾಗಿ ಜನರಿಗೆ ಲಸಿಕೆ ನೀಡಿದ್ದೆವು

ಹಾಗೇ ಕೋವಿಡ್‌ ಬಂದಾಗ ನಾನು ಆರೋಗ್ಯ ಸಚಿವನಾಗಿ ಜನರಿಗೆ ಲಸಿಕೆಯ ನೀಡಿದ್ದೆ. ಆಸ್ಪತ್ರೆಗಳ ಮೂಲ ಸೌಕರ್ಯ ಹೆಚ್ಚಳ ಮಾಡಿಸಿದ್ದೆ. ಆದರೆ ಈ ಸರ್ಕಾರ ಹಾಲಿನ ಪ್ರೋತ್ಸಾಹ ಧನ & ಕಿಸಾನ್‌ ಸಮ್ಮಾನ್‌, ಹಾಲು ಒಕ್ಕೂಟ ಎಲ್ಲ ಕಿತ್ತುಕೊಂಡಿದೆ. ವಿಧಾನಸೌಧದಲ್ಲಿ ಪಾಕಿಸ್ತಾನಕ್ಕೆ ಜಿಂದಾಬಾದ್‌ ಘೋಷಣೆ ಕೇಳಿಬರುತ್ತದೆ. ಇಂತಹವರು ಸರ್ಕಾರ ಮಾಡಬೇಕಾ? ಎಂದು ಇದೇ ವೇಳೆ ಪ್ರಶ್ನಿಸಿದರು ಡಾ. ಸುಧಾಕರ್. ಪ್ರಧಾನಿ ನರೇಂದ್ರ ಮೋದಿ ಇಡೀ ಜಗತ್ತಿನ ಮೆಚ್ಚುಗೆ ಗಳಿಸಿ, ವಿಶ್ವ ನಾಯಕರಾಗಿ ಬೆಳೆದಿದ್ದಾರೆ. ಜಗತ್ತಿನ ಬಲಿಷ್ಠ ಆರ್ಥಿಕ ಶಕ್ತಿಗಳಲ್ಲಿ ಭಾರತವು 5ನೇ ಸ್ಥಾನಕ್ಕೆ ಬಂದಿದ್ದು, ಮುಂದಿನ ವರ್ಷಗಳಲ್ಲಿ ಜಪಾನ್‌ ಮೊದಲಾದ ದೇಶಗಳನ್ನು ಹಿಂದಕ್ಕೆ ತಳ್ಳಿ ಮುಂದಕ್ಕೆ ಸಾಗಲಿದ್ದೇವೆ ಎಂದರು, ಡಾ. ಕೆ. ಸುಧಾಕರ್ ಅವರು.

ಎನ್‌ಡಿಎ ಗೆಲ್ಲುವುದು ಗ್ಯಾರಂಟಿ!

ಮಾಜಿ ಪ್ರಧಾನಿಗಳಾದ ಎಚ್‌.ಡಿ. ದೇವೇಗೌಡ ಅವರು & ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು ರಾಜ್ಯದ ನೀರಾವರಿ ಹಾಗು ಜನಜೀವನಕ್ಕೆ ಉತ್ತಮ ಕೊಡುಗೆಯನ್ನು ನೀಡಿದ್ದಾರೆ. ನರೇಂದ್ರ ಮೋದಿ ಅವರ ಕೈಯನ್ನು ಬಲಪಡಿಸಲು ಮತ ನೀಡಿ ಎಂದು, ಇದೇ ವೇಳೆ ಮನವಿ ಮಾಡಿದರು ಡಾ. ಕೆ. ಸುಧಾಕರ್ ಅವರು. ಎಲ್ಲಾ ಸರ್ವೆಯ ವರದಿ, ಸಮೀಕ್ಷೆ ಚಿಕ್ಕಬಳ್ಳಾಪುರದಲ್ಲಿ ಎನ್‌ಡಿಎ ಗೆಲ್ಲುತ್ತದೆ, ಹಾಗೂ ನಾನು ಗೆಲ್ಲಲಿದ್ದೇನೆ ಅಂತಾ ಹೇಳುತ್ತಿರುವುದರಿಂದ ಹತಾಶೆಯಿಂದ ನನ್ನ ಮೇಲೆ ಕೆಸರೆರಚುವ ಪ್ರಯತ್ನ ಮಾಡುತ್ತಿದ್ದೀರಿ. ಈ ಎಲ್ಲ ಅಪಪ್ರಚಾರಗಳು, ತೇಜೋವಧೆಯ ಪ್ರಯತ್ನಗಳು ಕಾಂಗ್ರೆಸ್ ಪಕ್ಷಕ್ಕೇ ತಿರುಗು ಬಾಣ ಆಗಲಿದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು ಡಾ. ಕೆ. ಸುಧಾಕರ್ ಅವರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+