ಸಿಎಂ ಸಿದ್ದರಾಮಯ್ಯಗೆ ಡಾ.ಕೆ.ಸುಧಾಕರ್ ಸವಾಲು!

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಭರ್ಜರಿ ಕದನ ಈಗ ಆರಂಭ ಆಗಿದೆ. ಒಂದು ಕಡೆ ಕಾಂಗ್ರೆಸ್ ವಿರುದ್ಧ ಬಿಜೆಪಿ ಆರೋಪಗಳನ್ನ ಮಾಡುತ್ತಿದ್ದರೆ, ಈ ನಡುವೆ ಕಾಂಗ್ರೆಸ್ ನಾಯಕರು ಕೂಡ ಬಿಜೆಪಿ & ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಇಷ್ಟೆಲ್ಲಾ ಬೆಳವಣಿಗೆ ನಡುವೆ ಈಗ ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ & ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ. ಕೆ. ಸುಧಾಕರ್ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ನೇರವಾಗಿ ವಾಗ್ದಾಳಿ ನಡೆಸಿದ್ದಾರೆ.

ಇಂದು ಸಿಎಂ ಸಿದ್ದರಾಮಯ್ಯ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸಿದರು. ಈ ಸಮಯದಲ್ಲಿ ಕಾಂಗ್ರೆಸ್ ಮುಖಂಡರು ಹಾಜರಿದ್ದರು. ಆದರೆ ಪ್ರಚಾರ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ನೀಡಿದ ಹೇಳಿಕೆಗೆ, ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ & ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ. ಕೆ. ಸುಧಾಕರ್ ಅವರು ನೇರವಾಗಿ ಉತ್ತರ ನೀಡಿದ್ದಾರೆ. ಹಾಗಾದರೆ, ಡಾ. ಕೆ. ಸುಧಾಕರ್ ಅವರು ಹೇಳಿದ್ದೇನು? ಸಿಎಂ ಸಿದ್ದರಾಮಯ್ಯ ಅವರಿಗೆ ಡಾ. ಕೆ. ಸುಧಾಕರ್ ನೀಡಿದ ಉತ್ತರ ಹೇಗಿತ್ತು? ಮುಂದೆ ಓದಿ.

Dr K Sudhakar Said This Against The CM Siddaramaiah

‍ಸಿಎಂ ಸಿದ್ದರಾಮಯ್ಯಗೆ ಪ್ರಶ್ನೆ!

ಈ ಬಗ್ಗೆ ಟ್ವೀಟ್ ಮಾಡಿರುವ ಡಾ. ಕೆ. ಸುಧಾಕರ್, '2018ರಲ್ಲಿ ಮುಖ್ಯಮಂತ್ರಿ ಆಗಿದ್ದೂ 35,000ಕ್ಕು ಹೆಚ್ಚು ಮತಗಳ ಅಂತರದಿಂದ ಚಾಮುಂಡೇಶ್ವರಿಯಲ್ಲಿ ಹೀನಾಯವಾಗಿ ಸೋತರಲ್ಲ ಆಗ ಎಷ್ಟು ಭ್ರಷ್ಟಾಚಾರ ಮಾಡಿದ್ದೀರಿ ಅಂತ ಜನ ನಿಮ್ಮನ್ನ ಸೋಲಿಸಿದ್ದರು? 2019ರಲ್ಲಿ ನಿಮ್ಮ ನಾಯಕ @RahulGandhi ಅವರು 55,000ಕ್ಕು ಹೆಚ್ಚು ಮತಗಳ ಅಂತರದಿಂದ ಅಮೇಥಿಯಲ್ಲಿ ಸೋತರಲ್ಲಾ, ನಿಮ್ಮ ಪ್ರಕಾರ ರಾಹುಲ್ ಗಾಂಧಿ ಅವರು ಭ್ರಷ್ಟಾಚಾರ ಮಾಡಿದ್ದಕ್ಕೆ ಸೋತಿದ್ದಾ?' ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಶ್ನೆ ಕೇಳಿದ್ದಾರೆ ಡಾ. ಕೆ. ಸುಧಾಕರ್.

ಹಾಗೇ ಡಾ. ಕೆ. ಸುಧಾಕರ್ ಅವರು ತಮ್ಮ ಹೇಳಿಕೆ ಇದೇ ಟ್ವೀಟ್‌ನಲ್ಲಿ ಮುಂದುವರಿಸಿದ್ದು, 'ನನ್ನ ಮೇಲೆ ತನಿಖೆಗೆ ಆದೇಶ ಮಾಡಿದ್ದೀರಿ. ಆದರೆ ಇನ್ನೂ ತನಿಖೆ ನಡೆಯುತ್ತಿರುವಾಗಲೇ, ಸಾಕ್ಷ್ಯ ಸಿಕ್ಕಿದೆ, ನಮಗೆ ಮಾಹಿತಿ ಇದೆ ಎಂದು ಹೇಳಿದ್ದೀರಲ್ಲ, ಅದರಲ್ಲೇ ನಿಮ್ಮ ತನಿಖೆ ಎಷ್ಟು ಪೂರ್ವಗ್ರಹ ಪೀಡಿತ, ಎಷ್ಟು ನಿಷ್ಪಕ್ಷಪಾತ ಅಂತ ತಿಳಿಯುತ್ತದೆ. ಎಲ್ಲಾ ಸರ್ವೇ ವರದಿಗಳು, ಸಮೀಕ್ಷೆಗಳು ಚಿಕ್ಕಬಳ್ಳಾಪುರದಲ್ಲಿ ಎನ್ ಡಿಎ ಗೆಲ್ಲುತ್ತದೆ, ನಾನು ಗೆಲ್ಲಲಿದ್ದೇನೆ ಎಂದು ಹೇಳುತ್ತಿರುವುದರಿಂದ ಹತಾಶೆಯಿಂದ ನನ್ನ ಮೇಲೆ ಕೆಸರೆರಚುವ ಪ್ರಯತ್ನ ಮಾಡುತ್ತಿದ್ದೀರಿ. ಈ ಎಲ್ಲಾ ಅಪಪ್ರಚಾರಗಳು, ತೇಜೋವಧೆಯ ಪ್ರಯತ್ನಗಳು ಕಾಂಗ್ರೆಸ್ ಪಕ್ಷಕ್ಕೇ ತಿರುಗು ಬಾಣ ಆಗಲಿದೆ.' ಎಂದಿದ್ದಾರೆ ಡಾ. ಕೆ. ಸುಧಾಕರ್.

ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ

ಹಾಗೇ ತಮ್ಮ ಹೇಳಿಕೆ ಮುಂದುವರಿಸಿ '2013ರಿಂದ 2018ರವರೆಗೆ ನಿಮ್ಮ ಜೊತೆ ಕೆಲಸ ಮಾಡಿದ್ದೇನೆ. ನಾನು ಆಗ ನೋಡಿದ್ದ ಸಿದ್ದರಾಮಯ್ಯನವರಿಗೂ ಈಗ ನೋಡುತ್ತಿರುವ ಸಿದ್ದರಾಮಯ್ಯನವರಿಗೂ ಬಹಳ ವ್ಯತ್ಯಾಸವಿದೆ. ನಿಮ್ಮ ಸ್ಥಿತಿ ಬಗ್ಗೆ ಕನಿಕರವಿದೆ. ನಾನು ಎಂದೂ ಜಾತಿ ರಾಜಕಾರಣ ಮಾಡಿದವನಲ್ಲ. ಅದರಲ್ಲಿ ನನಗೆ ನಂಬಿಕೆಯೂ ಇಲ್ಲ. ಆದರೆ ತಮ್ಮ ಒಕ್ಕಲಿಗ ದ್ವೇಷ ಗುಟ್ಟೇನು ಅಲ್ಲ. ಅದು ಇಡೀ ರಾಜ್ಯಕ್ಕೆ ತಿಳಿದಿರುವ ವಿಷಯ. ನನ್ನ ಸೋಲು ಗೆಲುವು ಮತದಾರರು ನಿರ್ಧಾರ ಮಾಡುತ್ತಾರೆ. ನಿಮಗೆ ಒಳ್ಳೆಯದಾಗಲಿ.' ಎಂದಿದ್ದಾರೆ ಡಾ. ಕೆ. ಸುಧಾಕರ್ ಅವರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+