ಬೆಂಗಳೂರು ಗ್ರಾಮಂತರ ಅಲ್ಲ, ಉತ್ತರವೂ ಅಲ್ಲ; ಈ ಕ್ಷೇತ್ರದಿಂದ ಕಣಕ್ಕೀಳಿತಾರಾ ಡಾ ಮಂಜುನಾಥ್?
ಬೆಂಗಳೂರು, ಫೆಬ್ರವರಿ 20: ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ. ಸಿಎನ್ ಮಂಜುನಾಥ್ ಅವರ ಅಧಿಕಾರವಧಿ ಜನವರಿ 30ರಂದ ಕೊನೆಗೊಂಡಿತ್ತು. ಇದೀಗ ಲೋಕಸಭಾ ಚುಣಾವಣೆಯಲ್ಲಿ ಡಾ. ಮಂಜುನಾಥ್ ಅವರನ್ನ ಕಣಕ್ಕಿಳಿಸುವ ಕುರಿತು ಸಾಕಷ್ಟು ಚರ್ಚೆಗಳು ಕೇಳಿ ಬಂದಿದೆ.
ಹೌದು, ಜಯದೇವ ಆಸ್ಪತ್ರೆಯ ಮಾಜಿ ನಿರ್ದೇಶಕರು ಹಾಗೂ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ್ರ ಅಳಿಯರಾದ ಡಾ.ಸಿಎನ್ ಮಂಜುನಾಥ್ ಸ್ಪರ್ಧೆಯ ಕುರಿತು ಚರ್ಚೆಗಳು ಆರಂಭಗೊಂಡಿದೆ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಠಕ್ಕರ್ ಕೊಡುವ ನಿಟ್ಟಿನಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಣಕ್ಕಿಳಿಸುವ ಲೆಕ್ಕಾಚಾರವನ್ನ ದಳಪತಿಗಳು ಹಾಕಿಕೊಂಡಿದ್ದರು. ಇತ್ತ ಬೆಂಗಳೂರು ಉತ್ತರ ಕ್ಷೇತ್ರದ ಹಾಲಿ ಸಂಸದರಾದ ಡಿ ವಿ ಸದಾನಂದಗೌಡರು ರಾಜಕೀಯ ನಿವೃತ್ತಿ ಘೋಷಿಸಿದ್ದು, ಈ ಕ್ಷೇತ್ರವೇ ಸೂಕ್ತ ಎಂದು ಕಮಲ-ದಳ ನಾಯಕರು ಚರ್ಚಿಸಿದ್ದಾರೆ.

ಇದೀಗ ಮಂಡ್ಯ ಕ್ಷೇತ್ರದಿಂದಲೇ ಡಾ.ಸಿಎನ್ ಮಂಜುನಾಥ್ ಸ್ಪರ್ಧೆ ಮಾಡಲಿ ಎಂದು ಮಾಜಿ ಸಚಿವ ಸಿಎಸ್ ಪುಟ್ಟರಾಜು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದಿಚುಂಚನಗಿರಿ ಮಠದಲ್ಲಿ ನಡೆಯುತ್ತಿರೊ ಎರಡು ದಿನಗಳ ಜ್ಞಾನ, ವಿಜ್ಞಾನ ತಂತ್ರಜ್ಞಾನ ಭಾಗಿಯಾಗಿದ್ದ ವೇಳೆ ಮಾತನಾಡಿದ ಸಿಎಸ್ ಪುಟ್ಟರಾಜು, ಡಾ ಮಂಜುನಾಥ್ ಅಭ್ಯರ್ಥಿ ಆಗಲು ನಿರ್ಮಲಾನಂದನಾಥ ಶ್ರೀಗಳು ಆಶೀರ್ವಾದ ಮಾಡಬೇಕು ಎಂದು ಹೇಳಿದ್ದಾರೆ.
ಡಾ. ಮಂಜುನಾಥ್ ಅವರು ವೈಧ್ಯಕೀಯ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ್ದು, ಎಲ್ಲಾ ಪಕ್ಷದ ನಾಯಕರಿಗೂ ಡಾ ಮಂಜುನಾಥ್ ಅವರು ಚಿರಪರಿಚಿತರು, ಆರೋಗ್ಯ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆ ಮಾಡಿರುವ ಡಾ ಮಂಜುನಾಥ್ ಅವರು ಮೂಲತಃ ಹಾಸನ ಜಿಲ್ಲೆಯವರಾದ್ರೂ ಅವರ ವ್ಯವಹಾರ, ಭೂಮಿ ಇರೋದೆಲ್ಲಾ ಮಂಡ್ಯ ಜಿಲ್ಲೆಯಲ್ಲಿ. ರೈಸ್ಮಿಲ್, ತೋಟ ಅವರು ಓದಿದ್ದು ಅವರ ಸಂಬಂಧಿಕರು ಇರೋದೆಲ್ಲಾ ಮಂಡ್ಯ ಜಿಲ್ಲೆಯಲ್ಲಿ. ಹಾಗಾಗಿ ಇಲ್ಲಿಂದಲೇ ಸ್ಪರ್ಧೆ ಮಾಡಲಿ ಎಂಬ ಮಾತುಗಳು ಕೇಳಿ ಬಂದಿವೆ.
ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ಸೇವೆ ಮಾಡಿ ದೇಶ ವಿದೇಶದಲ್ಲಿ ಹೆಸರುವಾಸಿಯಾಗಿರುವ ಡಾ ಮಂಜುನಾಥ್ ಅವರೇ ಲೋಕಸಭೆ ಅಭ್ಯರ್ಥಿ ಆಗಲಿ. ಚುನಾವಣೆಯಲ್ಲಿ ಗೆದ್ದು ಆರೋಗ್ಯ ಸಚಿವರಾದ್ರೆ ಅವರ ಸೇವೆ ನಾಡಿಗೆ ರಾಷ್ಟ್ರಕ್ಕೂ ಸಿಗಲಿದೆ. ಈ ನಿಟ್ಟಿನಲ್ಲಿ ಸ್ವಾಮೀಜಿಗಳು ಅವರನ್ನ ಆಶೀರ್ವದಿಸಿ ಈ ಜಿಲ್ಲೆಯಿಂದಲೇ ಸ್ಪರ್ಧಿಸಿ ರಾಜ್ಯಕ್ಕೆ ರಾಷ್ಟ್ರಕ್ಕೆ ಉತ್ತಮ ಆರೋಗ್ಯ ಸೇವೆ ಸಿಗುವಂತಾಗಲಿ ಎಂದು ಸಿಎಸ್ ಪುಟ್ಟರಾಜು ಅವರು ಹೇಳಿದರು.
ಮಂಜುನಾಥ್ ಅವರನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಣಕ್ಕಿಳಿಸುವ ಕುರಿತ ಚರ್ಚೆಗಳು ನಡೆದಿದ್ದವು. ಆದರೆ ಬೆಂಗಳೂರು ಗ್ರಾಮಾಂತರದಿಂದ ಸ್ಪರ್ಧೆಗೆ ಮಂಜುನಾಥ್ ಒಪ್ಪದ ಹಿನ್ನೆಲೆ ಬೆಂಗಳೂರು ಉತ್ತರಕ್ಕೆ ತರವು ನಿಟ್ಟಿನಲ್ಲಿ ಬಿಜೆಪಿ ನಾಯಕರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಬೆಂಗಳೂರು ಉತ್ತರ ಕ್ಷೇತ್ರದ ಹಾಲಿ ಸಂಸದರಾಗಿರುವ ಮಾಜಿ ಸಿಎಂ ಡಿವಿ ಸದಾನಂದಗೌಡರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿರುವುದರಿಂದ ಬಿಜೆಪಿಯಲ್ಲಿ ಬೆಂಗಳೂರು ಉತ್ತರದ ಟಿಕೆಟ್ ಗಾಗು ಹಲವು ನಾಯಕರು ಲಾಬಿ ನಡೆಸುತ್ತಿದ್ದು, ಈ ಕ್ಷೇತ್ರಕ್ಕೆ ಮಂಜುನಾಥ್ ಅವರನ್ನ ಕಣಕ್ಕಿಳಿಸುವುದೇ ಸೂಕ್ತ ಎಂದು ಹೇಳಲಾಗಿದೆ.












Click it and Unblock the Notifications